ಏಕೀಕರಣಕ್ಕಾಗಿ ಹೋರಾಡಿದವರ ಕಾರ್ಯಕ್ರಮಗಳನ್ನು ಗಡಿ ಜಿಲ್ಲೆಗಳಲ್ಲಿ ಆಚರಿಸಲು ನಿರ್ಧಾರ: ಡಾ.ಸಿ. ಸೋಮಶೇಖರ್

ಬೆಂಗಳೂರು, ಜು.12: ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರ ಮತ್ತು ಕನ್ನಡ ಸಾಹಿತ್ಯ ಪರಿಷತ್ತಿನಿಂದ ಕರ್ನಾಟಕದ ಏಕೀಕರಣಕ್ಕಾಗಿ ಹೋರಾಡಿದ ಮಹನೀಯರ ಸ್ಮರಣೆಯ ಕಾರ್ಯಕ್ರಮಗಳನ್ನು 19 ಗಡಿ ಜಿಲ್ಲೆಗಳಲ್ಲಿ ಆಚರಿಸಲು ತೀರ್ಮಾನ ಮಾಡಲಾಗಿದೆ ಎಂದು ಕರ್ನಾಟಕ ಗಡಿ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಡಾ.ಸಿ. ಸೋಮಶೇಖರ್ ಅವರು ತಿಳಿಸಿದರು.
ಮಂಗಳವಾರ ಗಾಂಧಿ ಭವನದಲ್ಲಿ ಹಮ್ಮಿಕೊಂಡಿದ್ದ, ಆಲೂರು ವೆಂಕಟರಾಯರ ಜನ್ಮದಿನಾಚರಣೆ ಹಾಗೂ ಫ.ಗು. ಹಳಕಟ್ಟಿ ಅವರ ದಿವ್ಯ ಸ್ಮರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಡಾ. ಮಹೇಶ ಜೋಶಿ ಮಾತನಾಡಿ, ಕನ್ನಡ ಭಾಷೆ ಇಡೀ ಜಗತ್ತಿನಲ್ಲಿಯೇ ಸಮೃದ್ಧ ಭಾಷೆ ಎಂದು ಕನ್ನಡ ಭಾಷೆಯ ಮಹತ್ವವನ್ನು ವಿವರಿಸಿದರು.
ಕಾರ್ಯಕ್ರಮದಲ್ಲಿ ಗಾಂಧಿ ಸ್ಮಾರಕ ನಿಧಿಯ ಅಧ್ಯಕ್ಷ ಡಾ. ವೂಡೇ ಪಿ. ಕೃಷ್ಣ, ಸಾಹಿತಿ ಶ್ರೀನಿವಾಸ ವಾಡಪ್ಪಿ ಸೇರಿ ಮತ್ತಿತರರು ಉಪಸ್ಥಿತರಿದ್ದರು.
Next Story





