Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 23ನೇ ವಾರ್ಷಿಕ ವಿಶೇಷಾಂಕ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ಪಿಎಸ್ಸೈ ನೇಮಕಾತಿ ಹಗರಣ: ಸಹಕರಿಸಿದ...

ಪಿಎಸ್ಸೈ ನೇಮಕಾತಿ ಹಗರಣ: ಸಹಕರಿಸಿದ ಪರಿವೀಕ್ಷಕರಿಗೆ ಸಿಕ್ಕಿದ್ದು 4,000 ರೂ.!

ಉಳಿದವರು ಹಂಚಿಕೊಂಡದ್ದು ಲಕ್ಷಗಟ್ಟಲೆ

ಜಿ.ಮಹಾಂತೇಶ್ಜಿ.ಮಹಾಂತೇಶ್13 July 2022 8:32 AM IST
share
ಪಿಎಸ್ಸೈ ನೇಮಕಾತಿ ಹಗರಣ: ಸಹಕರಿಸಿದ ಪರಿವೀಕ್ಷಕರಿಗೆ ಸಿಕ್ಕಿದ್ದು 4,000 ರೂ.!

ಬೆಂಗಳೂರು: ಪೊಲೀಸ್ ಸಬ್ ಇನ್‌ಸ್ಪೆಕ್ಟರ್ ಹುದ್ದೆ ನೇಮಕಾತಿ ಜ್ಞಾನಜ್ಯೋತಿ ಶಾಲೆಯ ಪರೀಕ್ಷೆ ಕೇಂದ್ರದಲ್ಲಿ ಪರಿವೀಕ್ಷಕರಾಗಿ ಕಾರ್ಯನಿರ್ವಹಿಸಿದ್ದ ಆರೋಪಿಗಳು ಅಭ್ಯರ್ಥಿಗಳ ಒಎಂಆರ್ ಶೀಟ್‌ನಲ್ಲಿ ಖಾಲಿ ಬಿಟ್ಟಿದ್ದ ಪ್ರಶ್ನೆಗಳಿಗೆ ಸಿಸಿಟಿವಿಯಲ್ಲಿ ಕಾಣಿಸಿಕೊಳ್ಳದಂತೆ ಮರೆಯಾಗಿದ್ದುಕೊಂಡೇ ಸರಿ ಉತ್ತರ ಬರೆದಿದ್ದರು. ಇದಕ್ಕಾಗಿ ಅವರಿಗೆ ದೊರೆತಿದ್ದು ಹೆಚ್ಚುವರಿಯಾಗಿ ಕೇವಲ ನಾಲ್ಕು ಸಾವಿರ ರೂಪಾಯಿ. ಆದರೆ, ಅಕ್ರಮಕೂಟದ ಇತರ ಸದಸ್ಯರು ಎಣಿಸಿಕೊಂಡಿದ್ದು ಲಕ್ಷ ಲಕ್ಷ ರೂಪಾಯಿ!

ಪಿಎಸ್ಸೈ ನೇಮಕಾತಿಯ ಪರೀಕ್ಷೆಯಲ್ಲಿ ನಡೆದಿರುವ ಹಲವು ಅಕ್ರಮಗಳ ಕುರಿತು ಸಿಐಡಿ ತನಿಖಾಧಿಕಾರಿಗಳು ದೋಷಾರೋಪಣೆ ಪಟ್ಟಿಯಲ್ಲಿ ವಿವರಗಳನ್ನು ಒದಗಿಸಿದ್ದಾರೆ. ದೋಷಾರೋಪಣೆ ಪಟ್ಟಿ ಪ್ರತಿ ‘the-file.in’ಗೆ ಲಭ್ಯವಾಗಿದೆ.

ಅಕ್ರಮ ಲಾಭದ ಆಮಿಷಕ್ಕೆ ಒಳಗಾಗಿದ್ದ ಪರಿವೀಕ್ಷಕರು ಪರೀಕ್ಷಾ ನಿಯಮದಂತೆ ನಡೆದುಕೊಂಡಿರಲಿಲ್ಲ. ಪರೀಕ್ಷಾ ಕೊಠಡಿಯಲ್ಲಿಯೇ ಅಭ್ಯರ್ಥಿಗಳು ಉತ್ತರಗಳನ್ನು ಬರೆದಿರುವ ಒಎಂಆರ್ ಶೀಟ್‌ಗಳನ್ನು ಲಕೋಟೆಯಲ್ಲಿ ಹಾಕಿ, ಸೀಲ್ ಮಾಡಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಪೊಲೀಸ್ ಅಧಿಕಾರಿಗೆ ಕೊಡಬೇಕಿತ್ತು. ಆದರೆ ಅವರು ಹಾಗೆ ಮಾಡದೆ ಉದ್ದೇಶಪೂರ್ವಕವಾಗಿ ಅಕ್ರಮ ಎಸಗಿ 20 ನಿಮಿಷ ತಡವಾಗಿ ಸ್ಟಾಫ್ ರೂಂಗೆ ಆಗಮಿಸಿ ಸ್ಟಾಫ್ ರೂಮಿನಲ್ಲಿ ಬಂದು ಉತ್ತರಗಳನ್ನು ಬರೆದಿರುವ ಒಎಂಆರ್ ಶೀಟ್‌ಗಳನ್ನು ಹಾಕಿರುವ ಲಕೋಟೆಯನ್ನು ಸೀಲ್ ಮಾಡಿ ಪರೀಕ್ಷಾ ಕೇಂದ್ರದ ಉಸ್ತುವಾರಿ ಕರ್ತವ್ಯ ನಿರ್ವಹಿಸುತ್ತಿದ್ದ ಡಿವೈಎಸ್ಪಿ ಹೊಸಮನಿ ಅವರಿಗೆ ನೀಡಿದ್ದರು ಎಂಬುದು ದೋಷಾರೋಪಣೆ ಪಟ್ಟಿಯಿಂದ ಗೊತ್ತಾಗಿದೆ.

ಪಿಎಸ್ಸೈ ಅಭ್ಯರ್ಥಿಗಳು ಪೇಪರ್ ಒಎಂಆರ್ ಶೀಟ್‌ಗಳಲ್ಲಿ ಖಾಲಿ ಬಿಟ್ಟಿದ್ದ ವೃತ್ತಗಳಲ್ಲಿ ಅಕ್ರಮವಾಗಿ ಉತ್ತರಗಳನ್ನು ಭರ್ತಿ ಮಾಡಿದ್ದ  ಸಾವಿತ್ರಿ ಕಾಬಾ, ಸುಮಾ ಕಂಬಾಳಿಮಠ, ಸಿದ್ದಮ್ಮ ಬಿರಾದಾರ, ಅರ್ಚನಾ ಹೊನಗೇರಿ, ಸುನಂದಾ, ಸುನೀತಾ ಮುಲಗೆ ಎಂಬ ಪರಿವೀಕ್ಷಕರಿಗೆ ಅಕ್ರಮ ಲಾಭದ ಆಸೆ ತೋರಿಸಿ ಕಡೆಯಲ್ಲಿ ತಲಾ 4,000 ರೂ. ಆರೋಪಿ ಎ-26ರ ಮೂಲಕ ಕೊಟ್ಟಿರುತ್ತಾರೆ ಎಂದು ದೋಷಾರೋಪಣೆ ಪಟ್ಟಿಯಲ್ಲಿ ಹೇಳಲಾಗಿದೆ.

ಪರೀಕ್ಷೆ ಮುಗಿಯಲು 10-15 ನಿಮಿಷ ಬಾಕಿ ಇರುವಾಗ ಎ-26 ಅವರು ಪ್ರಶ್ನೆಪತ್ರಿಕೆಯ ಉತ್ತರಗಳಿರುವ ಚೀಟಿ ಮತ್ತು ಎರಡು ಬಾಲ್‌ಪೆನ್‌ಗಳನ್ನು ಆರೋಪಿ ಅರ್ಚನಾ ಹೊನಗೇರಿ ಅವರಿಗೆ ನೀಡಿದ್ದರು. ಮಧ್ಯಾಹ್ನ 4:30ಕ್ಕೆ ಪರೀಕ್ಷೆ ಮುಗಿದ ಬಳಿಕ ಎಲ್ಲಾ ಅಭ್ಯರ್ಥಿಗಳು ಬ್ಲಾಕ್‌ನಿಂದ ಹೊರಹೋದ ಮೇಲೆ ಪಕ್ಕದ 15 ಎ ಬ್ಲಾಕ್‌ನಲ್ಲಿದ್ದ ಸುನಂದಾ, ಸುನಿತಾ ಅವರ ಬಳಿ ಅರ್ಚನಾ ಹೊನಗೇರಿ ಕೊಟ್ಟ ಉತ್ತರಗಳಿದ್ದ ಚೀಟಿ ಮತ್ತು ನೀಲಿ ಇಂಕ್ ಬಾಲ್ ಪೆನ್ ಕೊಡಲಾಗಿತ್ತು ಎಂಬ ಅಂಶವು ದೋಷಾರೋಪಣೆ ಪಟ್ಟಿಯಲ್ಲಿ ವಿವರಿಸಲಾಗಿದೆ.

ಪಿಎಸ್ಸೈ ಅಭ್ಯರ್ಥಿ ಶಾಂತಿಬಾಯಿ ಅವರ ರೋಲ್ ನಂಬರ್ (9221957) ಇದ್ದ ಒಎಂಆರ್ ಉತ್ತರ ಪತ್ರಿಕೆಯಲ್ಲಿ ಭರ್ತಿ ಮಾಡಿದ್ದ ವೃತ್ತಗಳನ್ನು ಹೊರತುಪಡಿಸಿ ಖಾಲಿ ಬಿಟ್ಟಿದ್ದ 89 ವೃತ್ತಗಳಲ್ಲಿ ಚೀಟಿಯಲ್ಲಿದ್ದ ಬಿ ಶ್ರೇಣಿಯ ಉತ್ತರಗಳನ್ನು ಸಿಸಿಟಿವಿಯಲ್ಲಿ ಸೆರೆಯಾಗದಂತೆ ಬಚ್ಚಿಟ್ಟುಕೊಂಡು ಮೊದಲನೇ ಮಹಡಿ ಪೂರ್ವ ದಿಕ್ಕಿನಲ್ಲಿರುವ ಮೂರನೇ ಕೊಠಡಿ ಮುಂಭಾಗದಲ್ಲಿ ಕುಳಿತು ಉತ್ತರ ಬರೆದಿದ್ದರು ಎಂದು ಕಾರ್ಯಾಚರಣೆಯ ಮತ್ತೊಂದು ಮುಖವನ್ನು ದೋಷಾರೋಪಣೆ ಪಟ್ಟಿಯಲ್ಲಿ ಅನಾವರಣಗೊಳಿಸಲಾಗಿದೆ.

ಬಿಜೆಪಿ ನಾಯಕಿ ದಿವ್ಯಾ ಹಾಗರಗಿ ನೇತೃತ್ವದಲ್ಲೇ ರಚನೆಯಾಗಿದ್ದ ಅಕ್ರಮ ಕೂಟದ ಸದಸ್ಯರು ಪಿಎಸ್ಸೈ ಅಭ್ಯರ್ಥಿ ಲೆಕ್ಕದಲ್ಲಿ ತಲಾ 25 ಲಕ್ಷ ರೂ.ಯನ್ನು ಹಂಚಿಕೊಳ್ಳಲು ತೀರ್ಮಾನ ಮಾಡಿಕೊಂಡು ಅದರಂತೆ ಹಣ ಹಂಚಿಕೊಂಡಿದ್ದರೆ, ಇವರ ಕಾರ್ಯಾಚರಣೆಗೆ ಸಹಕರಿಸಿದ್ದ ಪರಿವೀಕ್ಷಕರಿಗೆ ಹೆಚ್ಚುವರಿಯಾಗಿ ನಾಲ್ಕು ಸಾವಿರ ರೂ.ಯನ್ನಷ್ಟೇ ನೀಡಿ ಅಕ್ರಮದ ಲಾಭದಲ್ಲಿ  ದಿವ್ಯಾ ಹಾಗರಗಿ, ಮೇಳಕುಂದಿ ಗುಂಪಿನವರು ಸಿಂಹಪಾಲು ಪಡೆದಿರುವುದು ದೋಷಾರೋಪಣೆ ಪಟ್ಟಿಯಿಂದ ತಿಳಿದು ಬಂದಿದೆ.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X