Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು...

ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ13 July 2022 10:21 PM IST
share
ಬಿಲ್ಲವ ಸಮಾಜದ ಮೂರು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದ ಸಿಎಂ ಬೊಮ್ಮಾಯಿ

ಕಾಪು: ಗರೊಡಿ ಅರ್ಚಕರಿಗೆ ಮಾಶಾಸನ, ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡ ಸಂಧರ್ಭದಲ್ಲಿ ಪರಿಹಾರ ನೀಡಿಕೆ, ನಾರಾಯಣಗುರು ಅನುಯಾಯಿಗಳಾಗಿರುವ ಸ್ವಸಹಾಯ ಗುಂಪುಗಳ ಸದಸ್ಯರಿಗೆ ಮತ್ತು ಸ್ವ ಉದ್ಯೋಗ ನಡೆಸುತ್ತಿರುವವರಿಗೆ ಶೂನ್ಯ ಬಡ್ಡಿದರದಲ್ಲಿ ಸಾಲ ನೀಡಿಕೆಗೆ ಪ್ರಥಮ ಆದ್ಯತೆಯಲ್ಲಿ ಕ್ರಮ ತೆಗೆದುಕೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು  ಭರವಸೆ ನೀಡಿದರು.

ಬುಧವಾರ ಕಟಪಾಡಿ ಶ್ರೀ ವಿಶ್ವನಾಥ ಕ್ಷೇತ್ರದ ಕ್ಷೇತ್ರಾಡಳಿತ ಮಂಡಳಿಯ ಅಧ್ಯಕ್ಷ ಬಿ.ಎನ್. ಶಂಕರ ಪೂಜಾರಿ ನೇತೃತ್ವದಲ್ಲಿ ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ನೀಡಿದ ಮನವಿಗೆ ಸ್ಪಂಧಿಸಿದ ಸಂದರ್ಭದಲ್ಲಿ ಭರವಸೆ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರುಗಳ ವಿಶ್ವಮಾನವತಾವಾದದ ಸಂದೇಶವು ಸಾರ್ವಕಾಲಿಕ ಸತ್ಯವಾಗಿದ್ದು, ಇದನ್ನು ಅನುಸರಿಸಿಕೊಂಡು ಬರುತ್ತಿರುವ ಕರಾವಳಿಯ ಬಿಲ್ಲವ ಸಮುದಾಯ ಸೇರಿದಂತೆ ಈಡಿಗ, ನಾಮಧಾರಿ ಹಾಗೂ ಇತರೇ ಉಪಪಂಗಡಗಳ ಬೇಡಿಕೆಯನ್ನು ಈಡೇರಿಸಲು ಸರಕಾರ ಸಿದ್ಧವಿದೆ. ಈ ಬಗ್ಗೆ ಚರ್ಚಿಸಲು ಬೆಂಗಳೂರಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳು ನಿಯೋಗಕ್ಕೆ ಸೂಚನೆ ನೀಡಿದರು.

ಬ್ರಹ್ಮಶ್ರೀ ನಾರಾಯಣ ಗುರು ಅಭಿವೃದ್ಧಿ ನಿಗಮ ಮಂಡಳಿ ಸ್ಥಾಪನೆ, ಬಿಲ್ಲವ ಸಮಾಜವನ್ನು ಪ್ರವರ್ಗ (1) ಕ್ಕೆ ಸೇರ್ಪಡೆಗೊಳಿಸುವುದು, ಮಹಿಳಾ ಸ್ವಸಹಾಯ ಗುಂಪುಗಳಿಗೆ ಬಡ್ಡಿ ರಹಿತ ಸಾಲ, ಗರಡಿ ಅರ್ಚಕರಿಗೆ ಮಾಶಾಸನ, ಸಾಂಪ್ರಧಾಯಿಕ ಮೂರ್ತೆದಾರಿಕೆಗೆ ಪ್ರೋತ್ಸಾಹ ಮತ್ತು ಆಕಸ್ಮಿಕ ಅವಘಡದಿಂದ ಮೃತರಾಗುವ ಮೂರ್ತೆದಾರರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಒತ್ತಾಯಿಸಿ ಮನವಿ ನೀಡಲಾಯಿತು.

ಬ್ರಹ್ಮಶ್ರೀ ನಾರಾಯಣಗುರುಗಳ ಪಠ್ಯದ ಭಾಗವನ್ನು ಸಮಾಜ ವಿಜ್ಞಾನ ಪಠ್ಯ ಪುಸ್ತಕಕ್ಕೆ ಮರು ಸೇರ್ಪಡೆಗೆ ಆದೇಶಿಸಿದ ಸರಕಾರದ ನಿರ್ಧಾರವನ್ನು ಪ್ರಶಂಶಿಸಿ ಮುಖ್ಯಮಂತ್ರಿಗಳನ್ನು ಅಭಿನಂದಿಸಲಾಯಿತು.

ಸಚಿಚ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ರಘುಪತಿ ಭಟ್, ಸುಕುಮಾರ್ ಶೆಟ್ಟಿ, ಬಿಜೆಪಿ ಮಂಗಳೂರು ಪ್ರಭಾರಿ ಉದಯಕುಮಾರ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಸಚಿವ ಪ್ರಮೋದ್ ಮದ್ವರಾಜ್, ಬಿಲ್ಲವ ಪರಿಷತ್ ಅಧ್ಯಕ್ಷ ನವೀನ್ ಅಮೀನ್ ಶಂಕರಪುರ,  ಹಿರಿಯ ಮುಖಂಡ ಅಚ್ಯುತ ಅಮೀನ್ ಕಲ್ಮಾಡಿ, ಮಾಜಿ ಜಿ. ಪಂ. ಸದಸ್ಯರಾದ ಶಿಲ್ಪಾ ಜಿ. ಸುವರ್ಣ, ಗೀತಾಂಜಲಿ ಎಂ. ಸುವರ್ಣ, ಕ್ಷೇತ್ರಾಡಳಿತ ಸಮಿತಿ ಗೌ. ಪ್ರ. ಕಾರ್ಯದರ್ಶಿ ಶಿವಾನಂದ ಪೂಜಾರಿ, ಕೋಶಾಧಿಕಾರಿ ವೀರೇಶ್ ಸುವರ್ಣ, ಪ್ರಮುಖರಾದ ರಾಜು ಪೂಜಾರಿ, ಭಾಸ್ಕರ ಪೂಜಾರಿ, ಕಾಮರಾಜ ಸುವರ್ಣ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X