ಗೂಡಿನಬಳಿ ಗುಡ್ಡ ಕುಸಿದು ರಸ್ತೆಗೆ ಹಾನಿ; ಶಾಸಕ ರಾಜೇಶ್ ನಾಯ್ಕ್ ಭೇಟಿ, ಪರಿಹಾರದ ಭರವಸೆ

ಬಂಟ್ವಾಳ, ಜು.13: ಇಲ್ಲಿನ ಪುರಸಭಾ ವ್ಯಾಪ್ತಿಯ ಗೂಡಿನಬಳಿಯಲ್ಲಿ ಗುಡ್ಡ ಕುಸಿದು ರಸ್ತೆ ಸಂಪರ್ಕ ಕಡಿತಗೊಂಡ ಸ್ಥಳಕ್ಕೆ ಬಂಟ್ವಾಳ ಶಾಸಕ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈಗಾಗಲೇ ಗುಡ್ಡ ಕುಸಿದಿದ್ದು ಇನ್ನಷ್ಟು ಕುಸಿಯುವ ಭೀತಿ ಇರುವ ಬಗ್ಗೆ ಸ್ಥಳೀಯ ಪ್ರತಿನಿಧಿಗಳು ಶಾಸಕರಿಗೆ ಮನವಿ ಸಲ್ಲಿಸಿದ್ದರು. ಪರಿಶೀಲನೆ ಬಳಿಕ ಕುಸಿದ ಭಾಗಕ್ಕೆ ತಡೆಗೋಡೆ ನಿರ್ಮಾಣ ಮಾಡಿಕೊಡುವುದಾಗಿ ಶಾಸಕರು ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಬೂಡಾ ಅಧ್ಯಕ್ಷ ದೇವದಾಸ್ ಶೆಟ್ಟಿ, ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ನಿರ್ದೇಶಕಿ ಸುಲೋಚನಾ ಭಟ್, ಪುರಸಭಾ ಸ್ಥಳೀಯ ಸದಸ್ಯೆಯರಾದ ಝೀನತ್ ಫಿರೋಝ್, ಶಂಶಾದ್ ಬಾನು, ಇಕ್ಬಾಲ್ ಐ.ಎಂ.ಆರ್. ಮೊದಲಾದವರು ಉಪಸ್ಥಿತರಿದ್ದರು.
Next Story





