ಬೆಂಗಳೂರು | ಮಾಜಿ ಶಾಸಕನ ಮನೆ ಹಿಂಭಾಗದಲ್ಲಿ ಗಾಂಜಾ ಗಿಡ ಪತ್ತೆ; ದೂರು

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.13: ಸಾಗರ ಕ್ಷೇತ್ರದ ಮಾಜಿ ಶಾಸಕ ಬೇಳೂರು ಗೋಪಾಲಕೃಷ್ಣ ಅವರ ಆರ್.ಟಿ.ನಗರದ ಮಂಜುನಾಥ್ ಲೇಔಟ್ನ ಮುಖ್ಯರಸ್ತೆಯಲ್ಲಿರುವ ಮನೆ ಹಿಂಭಾಗದ ಖಾಲಿ ನಿವೇಶನದಲ್ಲಿ ಗಾಂಜಾ ಗಿಡಗಳು ಪತ್ತೆಯಾಗಿವೆ.
ಈ ಸಂಬಂಧ ಬೇಳೂರು ಗೋಪಾಲಕೃಷ್ಣ ಖುದ್ದು ಆರ್.ಟಿ.ನಗರ ಠಾಣಾ ಫೋಲೀಸರಿಗೆ ಮಾಹಿತಿ ನೀಡಿದ್ದಾರೆ. ಸ್ಥಳಕ್ಕೆ ಭೇಟಿ ನೀಡಿದ ಫೋಲೀಸರು ಪರಿಶೀಲನೆ ನಡೆಸಿ, ಗಿಡಗಳನ್ನು ವಶಕ್ಕೆ ಪಡೆದಿದ್ದಾರೆ. ನಿವೇಶನ ಮಾಲಕರಿಂದಲೂ ಮಾಹಿತಿ ಕಲೆ ಹಾಕಲಾಗಿದೆ.
ಕ್ರಮ ಕೈಗೊಳ್ಳಿ: ಕೇವಲ ಗ್ರಾಮೀಣ ಪ್ರದೇಶಗಳಲ್ಲಿ ಗಾಂಜಾ ಬೆಳೆಯುವುದು ಅಥವಾ ಮಾರಾಟ ಮಾಡುವ ಪ್ರಕರಣಗಳು ಗೊತ್ತಿತ್ತು. ಆದರೀಗ ರಾಜಧಾನಿ ಬೆಂಗಳೂರಿನಲ್ಲಿಯೇ ಗಾಂಜಾ ಬೆಳೆಯಲಾಗುತ್ತಿದೆ. ಈ ಸಂಬಂಧ ಸೂಕ್ತ ತನಿಖೆ ನಡೆಸಿ, ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ಬೇಳೂರು ಗೋಪಾಲಕೃಷ್ಣ ಒತ್ತಾಯಿಸಿದರು.
Next Story





