Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ...

ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ: ಸಚಿವ ಡಾ.ಕೆ.ಸುಧಾಕರ್

ವಾರ್ತಾಭಾರತಿವಾರ್ತಾಭಾರತಿ14 July 2022 9:25 PM IST
share
ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಸೂಚನೆ: ಸಚಿವ ಡಾ.ಕೆ.ಸುಧಾಕರ್

ಬೆಂಗಳೂರು, ಜು.14: ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಿಂದಾಗಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಪರಿಣಾಮ, ಸೊಳ್ಳೆಗಳಿಂದ ಹರಡುವ ಸಾಂಕ್ರಾಮಿಕ ರೋಗಗಳು ಸಮುದಾಯದಲ್ಲಿ ಹರಡುವ ಆತಂಕವಿದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಆರೋಗ್ಯ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ಗುರುವಾರ ವಿಕಾಸಸೌಧದಲ್ಲಿ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಅವರು, ಪ್ರತಿ ಜಿಲ್ಲೆಗಳಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡು ರೋಗ ನಿಯಂತ್ರಣ ಮಾಡಬೇಕು ಎಂದು ಸೂಚಿಸಿದರು.

ರಾಜ್ಯದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಹಲವು ಜಿಲ್ಲೆಗಳಲ್ಲಿ ಪ್ರವಾಹದ ಪರಿಸ್ಥಿತಿ ಸೃಷ್ಟಿಯಾಗಿದೆ. ಇದರಿಂದಾಗಿ ಮಲೇರಿಯಾ, ಡೆಂಘೀ, ಚಿಕೂನ್‍ಗುನ್ಯಾ, ಜಪಾನೀಸ್ ಎನ್ಸಫಲೈಟಿಸ್, ಆನೆಕಾಲು ಮೊದಲಾದ ರೋಗಗಳು ಹರಡುವ ತೀವ್ರ ಸಾಧ್ಯತೆ ಇದೆ. ಇದಕ್ಕಾಗಿ ಪ್ರತಿ ಜಿಲ್ಲಾಡಳಿತವು ಆರೋಗ್ಯ ಇಲಾಖೆಯ ಸಮನ್ವಯದೊಂದಿಗೆ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಬೇಕೆಂದು ಅವರು ತಿಳಿಸಿದರು.

ಪ್ರವಾಹ ಪೀಡಿತ ಅಥವಾ ಭಾರಿ ಮಳೆಯಾಗುತ್ತಿರುವ ಜಿಲ್ಲೆಗಳಲ್ಲಿ ಆರೋಗ್ಯ ತುರ್ತು ಪರಿಸ್ಥಿತಿಯನ್ನು ನಿಭಾಯಿಸಲು ಜಿಲ್ಲಾ ಹಾಗೂ ತಾಲೂಕು ಮಟ್ಟದ ರಾಪಿಡ್ ರೆಸ್ಪಾನ್ಸ್ ಟೀಮ್‍ಗಳು ಯಾವಾಗಲೂ ಸಿದ್ಧವಾಗಿರಬೇಕು. ಈ ತಂಡಗಳಿಗೆ ಅಗತ್ಯ ಪರಿಕರ, ಸಾಧನ, ಸಾರಿಗೆ ಸೌಲಭ್ಯವನ್ನು ನೀಡಿ ಜನರ ಆರೋಗ್ಯ ರಕ್ಷಣೆಗೆ ತುರ್ತಾಗಿ ಧಾವಿಸುವಂತೆ ವ್ಯವಸ್ಥೆ ಮಾಡಬೇಕು. ಹಳ್ಳಿ ಹಾಗೂ ವಾರ್ಡ್ ಮಟ್ಟದಲ್ಲೂ ಪರಿಸ್ಥಿತಿಯನ್ನು ನಿರ್ವಹಿಸಲು ಸಜ್ಜಾಗಿರಬೇಕು ಎಂದು ಸುಧಾಕರ್ ಸೂಚಿಸಿದರು.

ಸ್ಥಳೀಯ ಮಟ್ಟದಲ್ಲಿ ಅಧ್ಯಯನ: ಪ್ರಾಥಮಿಕ ಆರೋಗ್ಯ ಕೇಂದ್ರಗಳ ವೈದ್ಯಾಧಿಕಾರಿಗಳು ಸ್ಥಳೀಯ ಮಟ್ಟದಲ್ಲಿ ರೋಗಿಗಳ ಸಂಖ್ಯೆ ಹೆಚ್ಚಳ ಕುರಿತು ಕೂಡಲೇ ಅಧ್ಯಯನ ನಡೆಸಬೇಕು. ಹಾಗೆಯೇ ರೋಗಿಗಳ ಆರೈಕೆಗೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಬೇಕು. ಆರಂಭಿಕ ಹಂತದಲ್ಲೇ ಇದನ್ನು ಪತ್ತೆ ಮಾಡಿ ರೋಗ ಹರಡದಂತೆ ಕ್ರಮ ವಹಿಸಬೇಕು ಎಂದು ಅವರು ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಮಾಹಿತಿ ಕಲೆಹಾಕಿ ರೋಗ ಹರಡುವಿಕೆಯ ಸಾಧ್ಯತೆ ಬಗ್ಗೆ ಗಮನಹರಿಸಬೇಕು. ಜಿಲ್ಲಾ ಆರೋಗ್ಯಾಧಿಕಾರಿ ಹಾಗೂ ತಾಲೂಕು ಆರೋಗ್ಯಾಧಿಕಾರಿಗಳಿಗೆ ಈ ಬಗ್ಗೆ ಸೂಚನೆ ನೀಡಬೇಕು ಎಂದು ಸಭೆಯಲ್ಲಿ ಸುಧಾಕರ್ ತಿಳಿಸಿದರು.

ನಿಯಂತ್ರಣ ಕೊಠಡಿ ಆರಂಭ: ಈ ಎಲ್ಲ ಕಾರ್ಯಗಳು ಎಲ್ಲ್ಲ ಹಂತಗಳಲ್ಲಿ ಸರಿಯಾಗಿ ನಡೆಯುತ್ತಿದೆಯೇ ಎಂದು ಪರಿಶೀಲಿಸಲು ಹಾಗೂ ಸಮನ್ವಯಕ್ಕಾಗಿ ನಿಯಂತ್ರಣ ಕೊಠಡಿಯೊಂದನ್ನು ಆರಂಭಿಸಬೇಕು ಎಂದು ಸುಧಾಕರ್ ಸೂಚಿಸಿದರು.

ಇದಲ್ಲದೆ, ತಪಾಸಣಾ ಕಿಟ್‍ಗಳು, ಔಷಧಿ, ಕೀಟನಾಶಕಗಳು ಸೇರಿದಂತೆ ಅಗತ್ಯ ಉತ್ಪನ್ನಗಳ ಪೂರೈಕೆ ಬಗ್ಗೆ ನಿಗಾ ಇರಿಸಬೇಕು. ಎಲ್ಲ್ಲ ಹಂತದಲ್ಲೂ ಇವುಗಳನ್ನು ಬಳಸಿಕೊಂಡು ಸಾಂಕ್ರಾಮಿಕ ರೋಗಗಳನ್ನು ನಿಯಂತ್ರಿಸಬೇಕು. ಪ್ರತಿ ಇಲಾಖೆಗಳು ಸಮನ್ವಯತೆಯಿಂದ ಕೆಲಸ ಮಾಡಬೇಕು. ಇದಕ್ಕಾಗಿ ಸಮನ್ವಯ ಸಭೆಯನ್ನು ನಡೆಸಬೇಕು ಎಂದು ಅವರು ಹೇಳಿದರು.

ಸ್ಥಳೀಯ ಮಟ್ಟದಲ್ಲಿ ಔಷಧಿ ಸೇರಿದಂತೆ ಅಗತ್ಯ ವಸ್ತುಗಳ ಪೂರೈಕೆಯನ್ನು ಖಚಿತಪಡಿಸಿಕೊಳ್ಳಲು ಆರೋಗ್ಯಾಧಿಕಾರಿಗಳು ಹಾಗೂ ಇತರೆ ಇಲಾಖೆಗಳ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು. ಪ್ರತಿ ಜಿಲ್ಲಾಡಳಿತ ಇದನ್ನು ಖಚಿತಪಡಿಸಿಕೊಳ್ಳಬೇಕು. ಎಲ್ಲ್ಲ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಹೊಸ ರೋಗಿಗಳ ದಾಖಲಾತಿ, ಚಿಕಿತ್ಸೆ, ತಪಾಸಣೆಗೆ ಅಗತ್ಯ ವ್ಯವಸ್ಥೆ ಮಾಡಿಕೊಳ್ಳಬೇಕು ಎಂದು ಸುಧಾಕರ್ ತಿಳಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X