Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ವಿಚಾರ
  3. ವಿಶೇಷ-ವರದಿಗಳು
  4. ವಿದ್ಯಾರ್ಥಿಗಳಿಗೆ 100 ದಿನ ಮೊಟ್ಟೆ...

ವಿದ್ಯಾರ್ಥಿಗಳಿಗೆ 100 ದಿನ ಮೊಟ್ಟೆ ವಿತರಿಸಲು ನಿರಾಕರಣೆ

46 ದಿನಗಳಷ್ಟೇ ಮೊಟ್ಟೆ ನೀಡಲು ಅನುಮೋದನೆ

ಜಿ.ಮಹಾಂತೇಶ್ಜಿ.ಮಹಾಂತೇಶ್15 July 2022 9:10 AM IST
share
ವಿದ್ಯಾರ್ಥಿಗಳಿಗೆ 100 ದಿನ ಮೊಟ್ಟೆ ವಿತರಿಸಲು ನಿರಾಕರಣೆ

ಬೆಂಗಳೂರು, ಜು.14: ರಾಜ್ಯಾದ್ಯಂತ 1ರಿಂದ 8ನೇ ತರಗತಿಯ ಮಕ್ಕಳಿಗೆ 100 ದಿನಗಳವರೆಗೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಮೊಟ್ಟೆ ವಿತರಿಸಲು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವವನ್ನು ಆರ್ಥಿಕ ಇಲಾಖೆಯು ಭಾಗಶಃ ಒಪ್ಪಿಕೊಂಡಿದೆ. 100 ದಿನಗಳವರೆಗೆ ಮೊಟ್ಟೆ ನೀಡಬೇಕು ಎಂದು ಕೋರಿಕೆಯನ್ನು ಪ್ರಾಯೋಗಿಕವಾಗಿ ಜಾರಿಗೊಳಿಸುವ ನೆಪವನ್ನು ಮುಂದಿರಿಸಿರುವ ಆರ್ಥಿಕ ಇಲಾಖೆಯು ಕೇವಲ 46 ದಿನಗಳವರೆಗೆ ಮಾತ್ರ ರಾಜ್ಯದ ಎಲ್ಲ ಶಾಲಾ ಮಕ್ಕಳಿಗೆ ನೀಡಲು ಅನುಮೋದಿಸಿದೆ.

ಶಾಲೆಗಳಲ್ಲಿ ಮಧ್ಯಾಹ್ನದ ಉಪಹಾರ ಜೊತೆ ಮೊಟ್ಟೆ ನೀಡುವುದು ಮಕ್ಕಳ ಮಧ್ಯೆ ತಾರತಮ್ಯಕ್ಕೆ ಕಾರಣವಾಗುತ್ತದೆ ಮತ್ತು ಪೌಷ್ಟಿಕಾಂಶ ವಿತರಣೆಯಲ್ಲಿ ಅಸಮತೋಲನ ಸೃಷ್ಟಿಸುತ್ತದೆ ಎಂದು ರಾಷ್ಟ್ರೀಯ ಶಿಕ್ಷಣ ನೀತಿಯಡಿ  ಆರೋಗ್ಯ ಮತ್ತು ಯೋಗಕ್ಷೇಮ ಕುರಿತು ಸಿದ್ಧಗೊಂಡಿರುವ ವರದಿಯು ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ ಆರ್ಥಿಕ ಇಲಾಖೆಯು ನೀಡಿರುವ ಅಭಿಪ್ರಾಯವು ಮುನ್ನೆಲೆಗೆ ಬಂದಿದೆ. ಆರ್ಥಿಕ ಇಲಾಖೆಯು 2022ರ ಜುಲೈ 13ರಂದು  ನೀಡಿರುವ ಅಭಿಪ್ರಾಯದ ಪ್ರತಿಯು ''the-file.in''ಗೆ ಲಭ್ಯವಾಗಿದೆ.

 100 ದಿನಗಳಿಗೆ ರಾಜ್ಯದಲ್ಲಿನ 1ರಿಂದ 8ನೇ ತರಗತಿಯಲ್ಲಿನ ಅಂದಾಜು 49 ಲಕ್ಷ ಶಾಲಾ ಮಕ್ಕಳಿಗೆ ಮೊಟ್ಟೆ ವಿತರಿಸಲು 350 ಕೋಟಿ ರೂ. ವೆಚ್ಚವಾಗಲಿದೆ ಎಂದು ಅಂದಾಜಿಸಿ ಅನುಮತಿ ಕೋರಿ ಆರ್ಥಿಕ ಇಲಾಖೆಗೆ ಪ್ರಸ್ತಾವ ಸಲ್ಲಿಸಿತ್ತು. ಇದನ್ನು ಭಾಗಶಃ ಪುರಸ್ಕರಿಸಿರುವ ಆರ್ಥಿಕ ಇಲಾಖೆಯು 100 ದಿನಗಳ ಬದಲಿಗೆ 46 ದಿನಗಳಿಗಷ್ಟೇ ಮೊಟ್ಟೆ ವಿತರಿಸಲು ಅನುಮತಿ ನೀಡಿ 2022ರ ಜುಲೈ 13ರಂದು ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಇಲಾಖೆಯ ಸರಕಾರದ ಪ್ರಧಾನ ಕಾರ್ಯದರ್ಶಿಗೆ ಅಭಿಪ್ರಾಯ ತಿಳಿಸಿದೆ. ಇದರ ಪ್ರಕಾರ 46 ದಿನಗಳಿಗೆ ಅಂದಾಜು 125 ಕೋಟಿ ರೂ. ವೆಚ್ಚವಾಗಲಿದೆ ಎಂದು ತಿಳಿದು ಬಂದಿದೆ.

ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹುಪೋಷಕಾಂಶಗಳ ನ್ಯೂನತೆ ಹೊಂದಿರುವ ಕೆಲವು ಜಿಲ್ಲೆಗಳ ಶಾಲಾ ಮಕ್ಕಳಿಗಷ್ಟೇ ಮೊಟ್ಟೆ ವಿತರಣೆಯಾಗುತ್ತಿದೆಯಾದರೂ ಆರ್ಥಿಕ ಇಲಾಖೆಯು ನೀಡಿರುವ ಅನುಮೋದನೆಯಿಂದಾಗಿ ಇಡೀ ರಾಜ್ಯದ 1ರಿಂದ 8ನೇ ತರಗತಿ ಶಾಲಾ ಮಕ್ಕಳಿಗೂ ಮಧ್ಯಾಹ್ನ ಉಪಹಾರ ಯೋಜನೆಯಡಿ  46 ದಿನಗಳ ಕಾಲ ಮೊಟ್ಟೆ ಸೇವಿಸಬಹುದು.

2022-23ನೇ ಸಾಲಿನಲ್ಲಿ ರಾಜ್ಯದ ಪ್ರಧಾನಮಂತ್ರಿ ಪೋಷಣ್ ಶಕ್ತಿ ನಿರ್ಮಾಣ್ ಯೋಜನೆಯಡಿ ಕೇಂದ್ರಕ್ಕೆ ಸಲ್ಲಿಸಿದ ವಾರ್ಷಿಕ ಯೋಜನೆ ಮತ್ತು ಆಯವ್ಯಯದಲ್ಲಿ ಯೋಜಿಸಿದಂತೆ ಕೇವಲ ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ ಮತ್ತು ವಿಜಯನಗರ ಜಿಲ್ಲೆಗಳಲ್ಲಿನ ಸರಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿನ ಒಂದರಿಂದ ಎಂಟನೇ ತರಗತಿಯ ಒಟ್ಟು 15.29 ಲಕ್ಷ ಮಕ್ಕಳಿಗೆ ಬೇಯಿಸಿದ ಮೊಟ್ಟೆ ವಿತರಣೆಗೆ ಆದೇಶ ಹೊರಡಿಸಿತ್ತು.

ಆದರೆ, ಅಪೌಷ್ಠಿಕತೆ, ರಕ್ತಹೀನತೆ ಮತ್ತು ಬಹುಪೋಷಕಾಂಶಗಳ ನ್ಯೂನತೆ ಹೊಂದಿರುವ ಸಾರ್ವಜನಿಕ ಶಿಕ್ಷಣ ಇಲಾಖೆಯು ಮೊಟ್ಟೆ ಸೇವಿಸಲು ಬೆಂಬಲ ವ್ಯಕ್ತಪಡಿಸಿದ್ದ ಬಾಗಲಕೋಟೆ ಸೇರಿದಂತೆ ಇನ್ನೂ 4 ಜಿಲ್ಲೆಗಳ ಮಕ್ಕಳಿಗೆ ಮೊಟ್ಟೆ ಭಾಗ್ಯವನ್ನು ಕರುಣಿಸಿರಲಿಲ್ಲ.

 ಕೇಂದ್ರ ಸರಕಾರದಿಂದ ನಿಗದಿಪಡಿಸಿರುವ ಅನುದಾನದಿಂದ ಸೀಮಿತ ದಿನ ಮತ್ತು ಸೀಮಿತ ಜಿಲ್ಲೆಗಳಲ್ಲಿ ಮಾತ್ರ ಮೊಟ್ಟೆ ವಿತರಣೆ ಯೋಜನೆಯು ಅನುಷ್ಠಾನ ಮಾಡಬಹುದೇ ವಿನಃ ಹೆಚ್ಚಿನ ಜಿಲ್ಲೆಗಳಿಗೆ ವಿಸ್ತರಿಸಲು ಸಾಧ್ಯವಾಗುವುದಿಲ್ಲ. ಇತ್ತೀಚಿನ ವಿದ್ಯಾರ್ಥಿಗಳ ದಾಖಲಾತಿಗೆ ಅನುಗುಣವಾಗಿ 4 ಜಿಲ್ಲೆಗಳಲ್ಲಿ 120 ದಿನಗಳ ಅವಧಿಗೆ ಯೋಜನೆಯನ್ನು ವಿಸ್ತರಿಸಲು 192.82 ಕೋಟಿ ರೂ. ಅನುದಾನ ಅಗತ್ಯವಿದೆ ಎಂದು ಶಿಕ್ಷಣ ಇಲಾಖೆ ಸಲ್ಲಿಸಿದ್ದ ಪ್ರಸ್ತಾವ ತಿರಸ್ಕೃತವಾಗಿತ್ತು.

ಕೇವಲ 8 ಜಿಲ್ಲೆಗಳ 15.29 ಲಕ್ಷ ಮಕ್ಕಗಳಿಗೆ ಒಟ್ಟು 24 ವಾರಗಳಿಗೆ (ಜೂನ್ 2022ರಿಂದ ಫೆ.2023ರವರೆಗೆ) ಬೇಯಿಸಿದ ಮೊಟ್ಟೆ ವಿತರಿಸಲು 4,405.57 ಲಕ್ಷ ರೂ. ಮಾತ್ರ ಅನುದಾನ ನಿಗದಿಪಡಿಸಿ 2022ರ ಮೇ 20ರಂದು ಸುತ್ತೋಲೆ ಹೊರಡಿಸಿತ್ತು.

ಗದಗ, ಹಾವೇರಿ, ಬಾಗಲಕೋಟೆ ಮತ್ತು ಚಾಮರಾಜನಗರ ಜಿಲ್ಲೆಗಳ 9-10ನೇ ತರಗತಿಗಳ ಮಕ್ಕಳಿಗೆ ಬೇಯಿಸಿದ ಮೊಟ್ಟೆ ನೀಡಲು ಬಿಡಿಗಾಸಿನ ಅನುದಾನವನ್ನೂ ನೀಡಿರಲಿಲ್ಲ. ಮೊಟ್ಟೆ ಸೇವಿಸಲು ಹೆಚ್ಚಿನ ಬೆಂಬಲ ವ್ಯಕ್ತವಾಗಿದ್ದ ಹಿನ್ನೆಲೆಯಲ್ಲಿ ಬಾಗಲಕೋಟೆ ಸೇರಿದಂತೆ  ಇನ್ನೂ 4 ಜಿಲ್ಲೆಗಳಿಗೆ ಮೊಟ್ಟೆ ವಿತರಣೆ ಯೋಜನೆಯನ್ನು  ವಿಸ್ತರಿಸಲು ಶಿಕ್ಷಣ ಇಲಾಖೆಯು ಪ್ರಸ್ತಾಪಿಸಿತ್ತು.

ಆದರೆ ಕೇಂದ್ರ ಸರಕಾರದಿಂದ ನಿಗದಿಪಡಿಸಿರುವ ಅನುದಾನದಿಂದ ಸೀಮಿತ ದಿನ ಮತ್ತು ಸೀಮಿತ ಜಿಲ್ಲೆಗಳಲ್ಲಿ ಮಾತ್ರ ಮೊಟ್ಟೆ ವಿತರಣೆ ಯೋಜನೆಯು ಅನುಷ್ಠಾನ ಮಾಡಬಹುದೇ ವಿನಃ ಹೆಚ್ಚಿನ ಜಿಲ್ಲೆಗಳಿಗೆ ವಿಸ್ತರಿಸಲು ಸಾಧ್ಯವಾಗುವುದಿಲ್ಲ ಎಂದು ಪ್ರಸ್ತಾವನೆಯಲ್ಲಿ ಹೇಳಿತ್ತು.  ಈ ಕುರಿತು ''the-file.in'' ಮತ್ತು ‘ವಾರ್ತಾಭಾರತಿ’ಯು 2022ರ ಫೆಬ್ರವರಿ 12ರಂದು  ವರದಿ  ಪ್ರಕಟಿಸಿತ್ತು.

 2022-23ನೇ ಸಾಲಿಗೆ ಕೇಂದ್ರ ಸರಕಾರದಿಂದ 28.45 ಕೋಟಿ ಅನುದಾನದ ಎದುರು ನೋಡುತ್ತಿರುವ ಇಲಾಖೆಯು ರಾಜ್ಯ ಸರಕಾರವೇ 164.37 ಕೋಟಿ ರೂ. ಅನುದಾನ ಭರಿಸಬೇಕಿದೆ ಎಂದೂ ಹೇಳಿತ್ತು.

ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ ಯಾದಗಿರಿ, ರಾಯಚೂರು, ಬೀದರ್, ಬಳ್ಳಾರಿ, ಕಲಬುರಗಿ, ಕೊಪ್ಪಳ ಮತ್ತು ವಿಜಯಪುರ ಜಿಲ್ಲೆಗಳಲ್ಲಿ 1ರಿಂದ 8ನೇ ತರಗತಿಯ ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟದಲ್ಲಿ ಮೊಟ್ಟೆ ವಿತರಿಸುವ ಬಗ್ಗೆ ಪ್ರಾಯೋಗಿಕ ಅಧ್ಯಯನದ ಭಾಗವಾಗಿ 4 ಲಕ್ಷದ 44 ಸಾವಿರದ 322 ಮಕ್ಕಳಿಗೆ ಮಧ್ಯಾಹ್ನ ಬಿಸಿಯೂಟ ವಿತರಿಸುವ ಯೋಜನೆ ಜಾರಿಗೊಳಿಸಿತ್ತು. 

ರಾಜ್ಯದ ಶೇ.32ರಷ್ಟು ಮಕ್ಕಳು ಕಡಿಮೆ ತೂಕ ಹಾಗೂ ಕುಂಠಿತ ಬೆಳವಣಿಗೆ ಹೊಂದಿದ್ದು, ಶೇ.45.2ರಷ್ಟು ಮಕ್ಕಳು ಮತ್ತು ಮಹಿಳೆಯರು ರಕ್ತಹೀನತೆಯಿಂದ ಬಳಲುತ್ತಿದ್ದಾರೆ ಎಂದು 2020-21ರ ‘ನೀತಿ ಆಯೋಗ’ದ ವರದಿಯಲ್ಲಿ ವಿವರಿಸಿತ್ತು. ಹೀಗಾಗಿ ಅಪೌಷ್ಠಿಕತೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಮೊಟ್ಟೆ ನೀಡುವ ಕಾರ್ಯಕ್ರಮ ಜಾರಿಗೊಂಡಿದ್ದನ್ನು ಸ್ಮರಿಸಬಹುದು.

share
ಜಿ.ಮಹಾಂತೇಶ್
ಜಿ.ಮಹಾಂತೇಶ್
Next Story
X