ಕ್ಯಾಂಪ್ಕೋದಿಂದ ಡಾ.ವೀರೇಂದ್ರ ಹೆಗ್ಗಡೆಯವರಿಗೆ ಅಭಿನಂದನೆ

ಮಂಗಳೂರು, ಜ.15: ಶ್ರೀಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ರಾಜ್ಯಸಭಾ ಸದಸ್ಯರಾಗಿ ನಾಮನಿರ್ದೇಶನಗೊಂಡ ಹಿನ್ನೆಲೆಯಲ್ಲಿ ಅವರನ್ನು ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕುಮಾರ್ ಕೊಡ್ಗಿ ನೇತೃತ್ವದಲ್ಲಿ ಆಡಳಿತ ಮಂಡಳಿಯು ಶುಕ್ರವಾರ ಗೌರವಿಸಿ ಅಭಿನಂದಿಸಿತು.
ಈ ವೇಳೆ ಕ್ಯಾಂಪ್ಕೊ ಉಪಾಧ್ಯಕ್ಷ ಶಂಕರನಾರಾಯಣ ಭಟ್ ಕೆ., ವ್ಯವಸ್ಥಾಪಕ ನಿರ್ದೇಶಕ ಎಚ್.ಎಂ.ಕೃಷ್ಣ ಕುಮಾರ್, ನಿರ್ದೇಶಕರಾದ ಕೆ.ಬಾಲಕೃಷ್ಣ ರೈ, ರಾಧಾಕೃಷ್ಣ ಕೆ., ರಾಘವೇಂದ್ರ ಭಟ್, ಪದ್ಮರಾಜ್ ಪತ್ತಾಜೆ, ಜಯಪ್ರಕಾಶ್ ನಾರಾಯಣ ಟಿ.ಕೆ., ಎಸ್.ಆರ್.ಸತೀಶ್ಚಂದ್ರ, ದಯಾನಂದ ಹೆಗ್ಡೆ, ಸತ್ಯಾನಾರಾಯಣ ಪ್ರಸಾದ್, ಸುರೇಶ್ ಕುಮಾರ್ ಶೆಟ್ಟಿ ಪಿ. ಹಾಗೂ ಕಾರ್ಯನಿರ್ವಾಹಕ ಅಧಿಕಾರಿ ಕೇಶವ ಭಟ್ ಉಪಸ್ಥಿತರಿದ್ದರು.
Next Story





