Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಚೇರಿಗಳಲ್ಲಿ ಫೋಟೋ, ವೀಡಿಯೊ ಚಿತ್ರೀಕರಣ...

ಕಚೇರಿಗಳಲ್ಲಿ ಫೋಟೋ, ವೀಡಿಯೊ ಚಿತ್ರೀಕರಣ ನಿಷೇಧ; ಸರಕಾರದ ಆದೇಶ ಹೊಣೆಗೇಡಿ ಕ್ರಮ: ಸಿದ್ದರಾಮಯ್ಯ ಟೀಕೆ

ವಾರ್ತಾಭಾರತಿವಾರ್ತಾಭಾರತಿ15 July 2022 6:00 PM IST
share
ಕಚೇರಿಗಳಲ್ಲಿ ಫೋಟೋ, ವೀಡಿಯೊ ಚಿತ್ರೀಕರಣ ನಿಷೇಧ; ಸರಕಾರದ ಆದೇಶ ಹೊಣೆಗೇಡಿ ಕ್ರಮ: ಸಿದ್ದರಾಮಯ್ಯ ಟೀಕೆ

ಬೆಂಗಳೂರು, ಜು.15: ರಾಜ್ಯ ಸರಕಾರದ ಎಲ್ಲ ಇಲಾಖೆಗಳ ಕಚೇರಿ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ಅನಧಿಕೃತವಾಗಿ ಫೋಟೋ, ವೀಡಿಯೊ ಮಾಡದಂತೆ ನಿಷೇಧಿಸಿ ಆದೇಶ ಹೊರಡಿಸಿರುವುದು ಸರಕಾರದ ಹೊಣೆಗೇಡಿ ಕ್ರಮವಾಗಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದ್ದಾರೆ.

40 ಪರ್ಸೆಂಟ್ ಲಂಚಾವತಾರ, ಪಿಎಸ್‍ಐ ನೇಮಕಾತಿ ಹಗರಣ ಸೇರಿದಂತೆ ಬಿಜೆಪಿ ಸರಕಾರದಲ್ಲಿ ನಡೆಯುತ್ತಿರುವ ನೂರಕ್ಕೂ ಹೆಚ್ಚು ದೊಡ್ಡ ದೊಡ್ಡ ಲಂಚಗುಳಿತನ ಪ್ರಕರಣಗಳು ಬೆಳಕಿಗೆ ಬಂದಿವೆ. ದಿನನಿತ್ಯ ಬೆಳಗ್ಗೆ ಪತ್ರಿಕೆಗಳನ್ನು ತೆರೆದರೆ ಸರಕಾರದ ನಾನಾ ಇಲಾಖೆಗಳ ಭ್ರಷ್ಟಾಚಾರಗಳು, ದುರಾಡಳಿತಗಳ ವರದಿಗಳೆ ತುಂಬಿರುತ್ತವೆ. ದಿನ ಬೆಳಗಾದರೆ ನಾಡಿನ ಜನತೆ ರೋಸಿ ಹೋಗುವಷ್ಟು ಸರಕಾರದ ಭ್ರಷ್ಟಾಚಾರ ಪ್ರಕರಣಗಳು ಬಹಿರಂಗಗೊಳ್ಳುತ್ತಿರುವ ಹೊತ್ತಲ್ಲೇ ಸರಕಾರ ಈ ಆದೇಶ ಹೊರಡಿಸಿದೆ ಎಂದು ಅವರು ದೂರಿದ್ದಾರೆ.

ಅಲ್ಲಿ ಕೇಂದ್ರ ಸರಕಾರ ಲೋಕಸಭಾ ಅಧಿವೇಶನದ ಚರ್ಚೆ ಸಂದರ್ಭದಲ್ಲಿ ಬಳಸಬಾರದ ಪದಗಳನ್ನು ಪಟ್ಟಿ ಮಾಡಿ ಡೈರಿ ಬಿಡುಗಡೆಗೊಳಿಸಿದೆ. ಅದರಲ್ಲಿ ಭ್ರಷ್ಟ, ಜುಮ್ಲಾಜೀವಿ, ಕೋವಿಡ್ ಸ್ಪ್ರೆಡ್ಡರ್, ಸ್ನೂಪ್‍ಗೇಟ್, ಅಶೇಮ್ಡ್(ನಾಚಿಕೆಗೇಡು), ಹಿಪಾಕ್ರಸಿ, ಡ್ರಾಮಾ, ಅಸಮರ್ಥ ಸೇರಿದಂತೆ ಸರಕಾರದ ಯೋಗ್ಯತೆಯನ್ನು ಎತ್ತಿ ಹಿಡಿಯುವ ಪದಗಳನ್ನು ಸೇರಿಸಲಾಗಿದೆ. ಜತೆಗೆ ಲೋಕಸಭಾ ಆವರಣದಲ್ಲಿ ವಿರೋಧ ಪಕ್ಷಗಳು ಸರಕಾರದ ವಿರುದ್ಧ ಯಾವುದೇ ಪ್ರತಿಭಟನೆಗಳನ್ನು ನಡೆಸದಂತೆ ನಿಷೇಧಿಸಿ ಸರ್ವಾಧಿಕಾರಿ ಧೋರಣೆ ಮೆರೆಯುತ್ತಿದೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರಕಾರಗಳ ಈ ಕ್ರಮ ತಮ್ಮ ದುರಾಡಳಿತ ಮತ್ತು ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಹೇಡಿತನದ್ದಾಗಿದೆ. ರಾಜ್ಯ ಸರಕಾರಿ ನೌಕರರ ಸಂಘ ಮಾಡಿದ್ದ ಮನವಿಯನ್ನು ನೆಪವಾಗಿಟ್ಟುಕೊಂಡು ಸರಕಾರ ಈ ಮನವಿಯನ್ನು ತನ್ನ ಮೂಗಿನ ನೇರಕ್ಕೆ ಅರ್ಥೈಸಿಕೊಂಡು ತನ್ನ ಹುಳುಕುಗಳನ್ನು ಮುಚ್ಚಿಕೊಳ್ಳಲು ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.

ಸರಕಾರಿ ನೌಕರರಿಗೆ ಕರ್ತವ್ಯದ ವೇಳೆಯಲ್ಲಿ ಖಾಸಗಿ ವ್ಯಕ್ತಿಗಳು ದುರುದ್ದೇಶದಿಂದ ತೊಂದರೆ ಕೊಟ್ಟರೆ, ಬ್ಲಾಕ್‍ಮೇಲ್ ಮುಂತಾದ ಕಿಡಿಗೇಡಿ ಕೃತ್ಯದ ಕಾರಣಕ್ಕೆ ವೀಡಿಯೊ ಚಿತ್ರೀಕರಣ, ಮೊಬೈಲ್ ಚಿತ್ರೀಕರಣ ಮಾಡಿದರೆ ಅಂತಹ ದುಷ್ಟ ದುಷ್ಕರ್ಮಿಗಳ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಲು ಕಾನೂನಿನಲ್ಲಿ ಈಗಲೇ ಸಾಕಷ್ಟು ಅವಕಾಶಗಳಿವೆ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. 

ಈ ಕಾನೂನುಗಳನ್ನು ಪರಿಣಾಮಕಾರಿಯಾಗಿ ಬಳಸುವ ಮೂಲಕ ಪ್ರಾಮಾಣಿಕ ಮತ್ತು ಶ್ರದ್ದೆಯಿಂದ ದುಡಿಯುವ ಸರಕಾರಿ ನೌಕರರಿಗೆ ಆತ್ಮಸ್ಥೈರ್ಯ ತುಂಬುವ ನಿಷ್ಠುರ ನಡೆಯನ್ನು ಸರಕಾರ ಇದುವರೆಗೂ ಪ್ರದರ್ಶಿಸಿಲ್ಲ. ಹೀಗಾಗಿ ಸರಕಾರದ ಈ ಆದೇಶ ಸರಕಾರಿ ನೌಕರರ ಹಿತಾಸಕ್ತಿಯನ್ನು ಕಾಪಾಡುವ ಉದ್ದೇಶ ಇಲ್ಲದ, ತನ್ನ ಭ್ರಷ್ಟಾಚಾರವನ್ನು ಮುಚ್ಚಿಕೊಳ್ಳುವ ಉದ್ದೇಶ ಹೊಂದಿದೆ ಎಂದೇ ಅರ್ಥೈಸಿಕೊಳ್ಳಬೇಕಿದೆ ಎಂದು ಅವರು ಟೀಕಿಸಿದ್ದಾರೆ.

ಜೊತೆಗೆ ಇದುವರೆಗೂ ಸಾರ್ವಜನಿಕರು ಮೊಬೈಲ್ ಕ್ಯಾಮರಾ ಮುಂತಾದವುಗಳ ಮೂಲಕ ಸರಕಾರಿ ನೌಕರರ ಕೆಲಸವನ್ನು ಅಡ್ಡಿಪಡಿಸಿದ ಪ್ರಕರಣಗಳೆಷ್ಟು? ಎಲ್ಲೆಲ್ಲಿ ಈ ರೀತಿಯ ಪ್ರಕರಣಗಳಾಗಿವೆ ಎಂಬ ಮಾಹಿತಿಯನ್ನು ಪ್ರಕಟಿಸಬೇಕು. ಸರಕಾರದ ಈ ನಿರ್ಧಾರದಿಂದ ಕೆಲವೆ ಕೆಲವು ನೌಕರರಿಗೆ, ಭ್ರಷ್ಟರಿಗೆ ಖುಷಿಯಾಗಬಹುದೆ ಹೊರತು ಎಲ್ಲ ಸರಕಾರಿ ನೌಕರರಿಗೆ ಅಲ್ಲ. ಅನೇಕ ಸಂದರ್ಭಗಳಲ್ಲಿ ಕಿಡಿಗೇಡಿಗಳು ದಾಂಧಲೆ ಮಾಡುವ ಸಂದರ್ಭದಲ್ಲಿ ನೌಕರರ ನೆರವಿಗೆ ಬಂದಿರುವುದು ಸಾರ್ವಜನಿಕರ ಮೊಬೈಲುಗಳು ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಪ್ರಾಮಾಣಿಕ ಸರಕಾರಿ ಅಧಿಕಾರಿಗಳು, ನೌಕರರು ಮತ್ತು ಸಿಬ್ಬಂದಿ ಮೇಲೆ ದುರುದ್ದೇಶದ ವರ್ತನೆ ತಡೆಗಟ್ಟಲು ಎಲ್ಲ್ಲ ಸರಕಾರಿ ಕಚೇರಿಗಳಲ್ಲಿ ಸಿಸಿಟಿವಿಗಳನ್ನು ಕಡ್ಡಾಯವಾಗಿ ಅಳವಡಿಸಬೇಕು. ಅದನ್ನು ವೆಬ್ ಕಾಸ್ಟಿಂಗ್ ಮಾಡಬೇಕು. ಸರಕಾರ ಇಷ್ಟನ್ನು ಮಾಡುವವರೆಗೆ ಕನಿಷ್ಠ ಪಾರದರ್ಶಕತೆಗಾಗಿಯಾದರೂ ಇದುವರೆಗೆ ಇದ್ದ ವ್ಯವಸ್ಥೆಯನ್ನು ಮುಂದುವರೆಸಬೇಕು ಎಂದು ಅವರು ಆಗ್ರಹಿಸಿದ್ದಾರೆ.

ಸ್ವತಃ ಗೃಹ ಸಚಿವ ಆರಗ ಜ್ಞಾನೇಂದ್ರ ಅವರೇ ತಮ್ಮ ಇಲಾಖೆಯ ಸಿಬ್ಬಂದಿ ಮತ್ತು ಅಧಿಕಾರಿಗಳು “ಎಂಜಲು ಕಾಸು ತಿನ್ನುತ್ತಾ ಬಿದ್ದಿದ್ದಾರೆ” ಎಂದು ಹೇಳಿಕೆ ನೀಡಿದ್ದರು. ಎಸಿಬಿ (ಭ್ರಷ್ಟಾಚಾರ ನಿಗ್ರಹ ದಳ)ಯೇ ಕಲೆಕ್ಷನ್ ಸೆಂಟರ್ ಆಗಿದೆ ಎಂದು ರಾಜ್ಯ ಹೈಕೋರ್ಟ್ ಇತ್ತೀಚಿಗೆ ಛೀಮಾರಿ ಹಾಕಿದೆ. ಪಿಎಸ್‍ಐ ನೇಮಕಾತಿ ಹಗರಣದಲ್ಲಿ ಪೊಲೀಸ್ ಪೇದೆಯಿಂದ ಹಿಡಿದು ಎಡಿಜಿಪಿ ಮಟ್ಟದ ಅಧಿಕಾರಿಗಳವರೆಗೂ ಬಂಧಿತರಾಗಿದ್ದಾರೆ. ಈ ಬಗ್ಗೆ ರಾಜ್ಯ ಹೈಕೋರ್ಟ್ ಆಘಾತ ವ್ಯಕ್ತಪಡಿಸಿದೆ. ಇವೆಲ್ಲವೂ ಸರಕಾರದ ಮುಖಕ್ಕೆ ಹಾಕಿದ ಛೀಮಾರಿಗಳು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ರಾಜ್ಯದಲ್ಲಿ ಆಡಳಿತ ಕುಸಿದಿದೆ. ಲಂಚವಿಲ್ಲದೆ ಯಾವುದೇ ಕೆಲಸಗಳು ಆಗುತ್ತಿಲ್ಲ. ಸರಕಾರದ ಅವಧಿ ಮುಗಿಯುತ್ತಾ ಬಂದರೂ ಪ್ರತಿ ಇಲಾಖೆಯಲ್ಲೂ ಸಾವಿರ ಸಾವಿರಗಟ್ಟಲೆ ಕಡತಗಳು ವಿಲೇವಾರಿ ಆಗದೆ ಬಾಕಿ ಉಳಿದಿವೆ. ಇದರಿಂದ ಸಹಜವಾಗಿ ಸಾರ್ವಜನಿಕರಲ್ಲಿ ಆಕ್ರೋಶ ಮಡುಗಟ್ಟಿದೆ. ಪ್ರತೀ ದಿನ ರಾಜ್ಯದಲ್ಲಿ 25ಕ್ಕೂ ಹೆಚ್ಚು ಪ್ರತಿಭಟನೆಗಳು ದಾಖಲಾಗುತ್ತಿವೆ. ತಿಂಗಳಿಗೆ 400ಕ್ಕೂ ಹೆಚ್ಚು ಸಂಘ ಸಂಸ್ಥೆಗಳು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಪ್ರತಿಭಟನೆಗಳನ್ನು ನಡೆಸುತ್ತಿವೆ. ಈ ಬೇಡಿಕೆಗಳು ಈಡೇರುತ್ತಿಲ್ಲ. ಇದೂ ಕೂಡ ನಾಡಿನಾದ್ಯಂತ ಜನರ ಸಿಟ್ಟು ನೆತ್ತಿಗೇರಲು ಕಾರಣವಾಗಿದೆ ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಿಟ್ಟಿಗೆದ್ದ ಸಾರ್ವಜನಿಕರು ಸರಕಾರಿ ಕಚೇರಿಗಳಿಗೆ ಹೋಗಿ ತಮ್ಮ ಹಕ್ಕುಗಳನ್ನು ಪ್ರತಿಪಾದಿಸಬಾರದು, ಕೆಲಸ ಮಾಡದ, ಲಂಚಕ್ಕಾಗಿ ಪೀಡಿಸುವ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಪ್ರಶ್ನಿಸಬಾರದು ಎನ್ನುವ ದುರುದ್ದೇಶದಿಂದ ಸರಕಾರ ಈ ಆದೇಶ ಹೊರಡಿಸಿದೆ. ಸರಕಾರದ ಕೆಲಸ ಮತ್ತು ಆಡಳಿತ ಪಾರದರ್ಶಕವಾಗಿ ಇರಬೇಕೆಂದು ಯುಪಿಎ ಸರಕಾರ ಮಾಹಿತಿ ಹಕ್ಕು ಕಾಯ್ದೆಯನ್ನು ಜಾರಿಗೆ ತಂದಿತು. ಈಗ ಮೋದಿ ನೇತೃತ್ವದ ಎನ್‍ಡಿಎ ಸರಕಾರ ಈ ಕಾಯ್ದೆಯನ್ನು ದುರ್ಬಲಗೊಳಿಸಲು ಯತ್ನಿಸುತ್ತಿರುವುದರ ಜತೆಗೆ ಲೋಕಸಭಾ ಅಧಿವೇಶನದ ಚರ್ಚೆಯಲ್ಲೂ ಭ್ರಷ್ಟ ಎನ್ನುವ ಪದವನ್ನೇ ಬಳಸದಂತೆ ನಿಷೇಧ ಹೇರಲು ಹುನ್ನಾರ ನಡೆಸಿದೆ ಎಂದು ಅವರು ದೂರಿದ್ದಾರೆ.

ಸರಕಾರ ಈ ಆದೇಶವನ್ನು ಹಿಂದಕ್ಕೆ ಪಡೆಯಬೇಕು. ದುರುದ್ದೇಶದಿಂದ ಸರಕಾರಿ ಕಚೇರಿಗಳಿಗೆ ನುಗ್ಗಿ ಸರಕಾರಿ ನೌಕರರ ಖಾಸಗಿತನಕ್ಕೆ, ಕರ್ತವ್ಯಕ್ಕೆ ಅಡ್ಡಿ ಪಡಿಸಿರುವ ಪ್ರಕರಣಗಳಲ್ಲಿ ಆರೋಪಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಿದ್ದರಾಮಯ್ಯ ಪ್ರಕಟಣೆಯಲ್ಲಿ ಆಗ್ರಹಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X