ಅಕ್ರಮ ಹಣ ವರ್ಗಾವಣೆ ಪ್ರಕರಣ: ಮಂತ್ರಿ ಡೆವಲಪರ್ಸ್ ಸಿಇಒ ಸುಶೀಲ್ಮಂತ್ರಿಗೆ ಜಾಮೀನು

ಸಾಂದರ್ಭಿಕ ಚಿತ್ರ
ಬೆಂಗಳೂರು, ಜು.15: ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿದ್ದ ಮಂತ್ರಿ ಡೆವಲಪರ್ಸ್ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಸುಶೀಲ್ಮಂತ್ರಿ ಅವರಿಗೆ ಜಾಮೀನನ್ನು ಹಾಗೂ ಅವರ ಪುತ್ರ ಪ್ರತೀಕ್ಮಂತ್ರಿ ಅವರಿಗೆ ನಿರೀಕ್ಷಣಾ ಜಾಮೀನನ್ನು ನಗರದ ಸಿಟಿ ಸಿವಿಲ್ ಮತ್ತು ಸತ್ರ ನ್ಯಾಯಾಲಯವು ಮಂಜೂರು ಮಾಡಿದೆ.
ಸುಶೀಲ್ಮಂತ್ರಿ ಮತ್ತು ಅವರ ಪುತ್ರ ಪ್ರತೀಕ್ ಸಲ್ಲಿಸಿದ್ದ ಪ್ರತ್ಯೇಕ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಪೀಠ, ಸುಶೀಲ್ಮಂತ್ರಿಗೆ ಜಾಮೀನನ್ನು ಹಾಗೂ ಅವರ ಪುತ್ರನಿಗೆ ನಿರೀಕ್ಷಣಾ ಜಾಮೀನನ್ನು ಮಂಜೂರು ಮಾಡಿದೆ.
ಇಬ್ಬರು ಆರೋಪಿಗಳಿಗೂ ತಲಾ 25 ಲಕ್ಷ ರೂ.ಮೌಲ್ಯದ ವೈಯಕ್ತಿಕ ಬಾಂಡ್ ಅಷ್ಟೇ ಮೊತ್ತದ ಒಬ್ಬರ ಭದ್ರತೆ ನೀಡುವಂತೆ ನ್ಯಾಯಪೀಠವು ಷರತ್ತುಗಳನ್ನು ವಿಧಿಸಿದೆ.
ಪ್ರಕರಣವೇನು: ಬೆಂಗಳೂರಿನ ಫ್ಲಾಟ್ ಖರೀದಿದಾರರಿಂದ ಸಂಗ್ರಹಿಸಿದ ಹಣವನ್ನು ನಿರ್ಮಾಣ ಯೋಜನೆಗಳಿಗೆ ಖರ್ಚು ಮಾಡುವ ಬದಲು ಆ ಹಣವನ್ನು ಅಕ್ರಮವಾಗಿ ಬೇರೆಡೆಗೆ ವರ್ಗಾವಣೆ ಮಾಡಿದ್ದಾರೆ ಎಂದು ಆರೋಪಿಸಿ ನಗರದ ಸುಬ್ರಹ್ಮಣ್ಯನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಸುಶೀಲ್, ಪ್ರತೀಕ್ ವಿರುದ್ಧ ಪ್ರಕರಣ ದಾಖಲಾಗಿತ್ತು.







