Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರಪತಿ ಚುನಾವಣೆ: ದ್ರೌಪದಿ...

ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ ಘೋಷಣೆ

ಶಾಸಕಾಂಗ ಪಕ್ಷದ ಸಭೆಯಲ್ಲಿ ಒಮ್ಮತದ ತೀರ್ಮಾನ

ವಾರ್ತಾಭಾರತಿವಾರ್ತಾಭಾರತಿ15 July 2022 9:38 PM IST
share
ರಾಷ್ಟ್ರಪತಿ ಚುನಾವಣೆ: ದ್ರೌಪದಿ ಮುರ್ಮುಗೆ ಜೆಡಿಎಸ್‌ ಬೆಂಬಲ ಘೋಷಣೆ

ಬೆಂಗಳೂರು: ರಾಷ್ಟ್ರಪತಿ ಚುನಾವಣೆಯಲ್ಲಿ ಸ್ಪರ್ಧಿಸಿರುವ ದ್ರೌಪದಿ ಮುರ್ಮು ಅವರಿಗೆ ಪಕ್ಷ ರಾಜಕಾರಣವನ್ನು ಮೀರಿ ಬೆಂಬಲ ನೀಡಲು ಜಾತ್ಯತೀತ ಜನತಾದಳ ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ವಿಧಾನಸೌಧದಲ್ಲಿ ಇಂದು ಸಂಜೆ ನಡೆದ ಜೆಡಿಎಸ್‌ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಶಾಸಕಾಂಗ ಪಕ್ಷದ ಉಪ ನಾಯಕ ಬಂಡೆಪ್ಪ ಕಾಶೆಂಪೂರ್ ಅವರು ಮಾಧ್ಯಮಗಳಿಗೆ ತಿಳಿಸಿದರು.

ಕೋವಿಡ್ ಪಾಸಿಟಿವ್ ಕಾರಣಕ್ಕೆ ಹೊಮ್ ಐಸೋಲೇಷನ್ ಆಗಿರುವ ಶಾಸಕಾಂಗ ಪಕ್ಷದ ನಾಯಕರು ಹಾಗೂ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹಾಗೂ ತಮ್ಮ ಪುತ್ರಿಯ ವಿವಾಹ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದ ಜೆಡಿಎಸ್ ರಾಜ್ಯಾಧ್ಯಕ್ಷ ಸಿ.ಎಂ.ಇಬ್ರಾಹಿಂ ಹಾಗೂ ಮಳೆ, ನೆರೆ ಕಾರಣಕ್ಕೆ ತಮ್ಮ ಕ್ಷೇತ್ರಗಳಲ್ಲಿಯೇ ಬೀಡುಬಿಟ್ಟಿರುವ ಪಕ್ಷದ ಎಲ್ಲ ಶಾಸಕರು ವರ್ಚುಯಲ್ ವೇದಿಕೆ ಮೂಲಕ ಸಭೆಯಲ್ಲಿ ಭಾಗಿಯಾಗಿದ್ದರು ಎಂದು ಅವರು ಮಾಹಿತಿ ನೀಡಿದರು.

ಹೆಚ್.ಡಿ.ದೇವೇಗೌಡರು ಪ್ರಧಾನಿಯಾಗಿದ್ದಾಗ ಮಹಿಳೆಯರಿಗೆ ಮೀಸಲು ಸೌಲಭ್ಯ ಕಲ್ಪಿಸಿ ಮಹಿಳಾ ಸಬಲೀಕರಣಕ್ಕೆ ಐತಿಹಾಸಿಕ ಒತ್ತು ನೀಡಿದ್ದರು. ಮೊತ್ತ ಮೊದಲ ಬಾರಿಗೆ ಆದಿವಾಸಿ ಮಹಿಳೆಯೊಬ್ಬರು ರಾಷ್ಟ್ರಪತಿ ಆಗುತ್ತಿರುವುದು ಹೆಮ್ಮೆಯ ಸಂಗತಿ. ಇದು ದೇವೇಗೌಡರ ಆಶಯಕ್ಕೆ ಅನುಗುಣವಾಗಿದೆ. ಶ್ರೀಮತಿ ಮುರ್ಮು ಅವರ ಹಿನ್ನೆಲೆ, ಅವರು ಪ್ರತಿನಿಧಿಸುವ ಸಮುದಾಯವನ್ನು ಗಮನದಲ್ಲಿ ಇಟ್ಟುಕೊಂಡು ಅವರಿಗೆ ಬೆಂಬಲ ನೀಡಲಾಗುತ್ತಿದೆ. ಇದರಲ್ಲಿ ಆ ಪಕ್ಷ ಈ ಪಕ್ಷ ಎನ್ನುವ ಮಾತಿಲ್ಲ. ಅಭ್ಯರ್ಥಿಯನ್ನು ಮಾನದಂಡವಾಗಿಟ್ಟುಕೊಂಡು ಬೆಂಬಲ ಘೋಷಣೆ ಮಾಡಲಾಗಿದೆ ಎಂದು ಅವರು ತಿಳಿಸಿದರು. 

ದ್ರೌಪದಿ ಮುರ್ಮು ಅವರು ರಾಷ್ಟ್ರಪತಿ ಅಭ್ಯರ್ಥಿಯಾಗಿ ಆಯ್ಕೆಯಾದ ಮರುದಿನವೇ ನಮ್ಮ ಪಕ್ಷದ ವರಿಷ್ಠ ನಾಯಕರಾದ ಹೆಚ್.ಡಿ.ದೇವೇಗೌಡರಿಗೆ ದೂರವಾಣಿ ಕರೆ ಮಾಡಿ ಬೆಂಬಲ ಯಾಚಿಸಿದ್ದರು. ತದ ನಂತರ ಬೆಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಖುದ್ದು ಅವರೇ ತೆರಳಿ ದೇವೇಗೌಡರು ಹಾಗೂ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮತ ಕೇಳಿದ್ದರು. ಈ ಹಿನ್ನೆಲೆಯಲ್ಲಿ ನಮ್ಮ ಪಕ್ಷ ಶ್ರೀಮತಿ ದ್ರೌಪದಿ ಮುರ್ಮು ಅವರಿಗೆ ಬೆಂಬಲ ನೀಡಲು ತೀರ್ಮಾನ ಕೈಗೊಂಡಿದೆ ಎಂದು ಬಂಡೆಪ್ಪ ಅವರು ಪ್ರಶ್ನೆಯೊಂದಕ್ಕೆ ಉತ್ತರ ನೀಡಿದರು.

ಜುಲೈ 18ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ಶ್ರೀಮತಿ ದ್ರೌಪದಿ ಮುರ್ಮು ಅವರಿಗೇ ಮತ ಹಾಕುತ್ತೇವೆ ಎಂದು ಅವರು ತಿಳಿಸಿದರು.

ಫೋಟೊ ವಿಡಿಯೋ ಬಗ್ಗೆ ಹೆದರಿಕೆ ಯಾಕೆ?: ಸರಕಾರಿ ಕಚೇರಿಯಲ್ಲಿ ಫೋಟೋ, ವಿಡಿಯೋ ನಿಷೇಧ ಮಾಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿದ ಬಂಡೆಪ್ಪ ಕಾಶೆಂಪೂರ್‌ ಅವರು, ನಾವು ಸರಿಯಾಗಿದ್ದರೆ ಫೋಟೊ ವಿಡಿಯೋಗೆ ಯಾಕೆ ಹೆದರಬೇಕು? ಹೀಗೆ ನಿಷೇಧ ಮಾಡಿದ್ರೆ 40% ಆರೋಪ ನಿಜ ಆಗುತ್ತದೆ. ಸರಕಾರ ಪಾರದರ್ಶಕವಾಗಿ ಇದ್ದರೆ ಭಯ ಯಾಕೆ? ಆ ಆದೇಶವನ್ನು  ಕೂಡಲೇ ಸರಕಾರ ವಾಪಸ್ ಪಡೆಯಬೇಕು ಎಂದು ಒತ್ತಾಯಿಸಿದರು.

ಜನತಾಮಿತ್ರ ಸಮಾವೇಶ ಮುಂದಕ್ಕೆ: ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಕೋವಿಡ್ ಪಾಸಿಟಿವ್ ಬಂದ ಹಿನ್ನೆಲೆಯಲ್ಲಿ ಇದೇ ತಿಂಗಳು ೧೭ರಂದರ ಹಮ್ಮಿಕೊಳ್ಳಲು ನಿರ್ಧರಿಸಲಾಗಿದ್ದ ʼಜನತಾಮಿತ್ರʼ ಕಾರ್ಯಕ್ರಮವನ್ನು 10 ದಿನಗಳ ಕಾಲ ಮುಂದೂಡಲಾಗಿದೆ ಎಂದು ಅವರು ಬಂಡೆಪ್ಪ ಅವರು ತಿಳಿಸಿದರು.

ಸಿದ್ದರಾಮೋತ್ಸವ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಕಾಶೆಂಪೂರ್ ಅವರು, ನಾವು ಜನರ ಉತ್ಸವ ಮಾಡುತ್ತೇವೆ‌. ಪಕ್ಷ ಅಧಿಕಾರಕ್ಕೆ ಬಂದರೆ ಏನು ಮಾಡುತ್ತೇವೆ ಅಂತ ನಾವು ತೋರಿಸಿದ್ದೇವೆ. ನೀರಾವರಿ ವಿಚಾರದಲ್ಲಿ ನಮ್ಮ ಹೋರಾಟ ನಡೆಯುತ್ತಿದೆ. ಆದರೆ ಇವತ್ತು ಸುರಿಯುತ್ತಿರುವ ಮಳೆ ನೀರು ಸಮುದ್ರದ ಪಾಲಾಗುತ್ತಿದೆ. ನಮ್ಮ ದೃಷ್ಟಿ ಜನರ ಕಡೆಗೆ. ಹೀಗಾಗಿ ನಾವು ಯಾವುದೇ ಉತ್ಸವ ಮಾಡುವುದಿಲ್ಲ. ನಾವು ಜನರ ಉತ್ಸವ ಮಾಡಿದ್ದೇವೆ. ನಾವು ವಯಕ್ತಿಕ ಉತ್ಸವ ಮಾಡುವುದಿಲ್ಲ. ಜನರಿಗೆ ನಾವು ಏನು ಮಾಡುತ್ತೇವೆ ಎಂಬುದನ್ನು  ಹೇಳಿ ಜನರ ಮುಂದೆ ಹೋಗುತ್ತೇವೆ” ಎಂದು ಹೇಳಿದರು.

ಬಿಜೆಪಿಯವರಿಗೆ ಗಾಬರಿ: ಡಿಸೆಂಬರ್ ನಲ್ಲಿ ಎಲೆಕ್ಷನ್ ಆಗಬಹುದು ಎಂದು ಹೇಳುತ್ತಿದ್ದಾರೆ‌. ನಾವು ಚುನಾವಣಾ ತಯಾರಿಯಲ್ಲಿ  ತೊಡಗಿದ್ದೇವೆ.  ಬಿಜೆಪಿಯವರು ಗಾಬರಿಯಾಗಿ, ಎಲ್ಲೆಲ್ಲೂ ಹೋಗಿ ಸಭೆ ಮಾಡುತ್ತಿದ್ದಾರೆ. ನಮಗೆ ಗಾಬರಿ ಇಲ್ಲ, ಯಾಕೆಂದರೆ ಕುಮಾರಸ್ವಾಮಿ ಅವರು ರೈತರ ಸಾಲ ಮನ್ನ ಮಾಡಿದ್ದಾರೆ. ಹಾಗಾಗಿ ಡಿಸೆಂಬರ್ ನಲ್ಲೇ ಚುನಾವಣೆ ಆಗಲಿ, ಯಾವಾಗಲೇ ಆದರೂ ಚುನಾವಣೆ ನಾವು ಸಿದ್ದರಿದ್ದೇವೆ ಎಂದು ಹೇಳಿದರು.

ಶಾಸಕರಾದ ನಾಗನಗೌಡ ಕುಂದನೂರು, ವೆಂಕಟರಾವ್ ನಾಡಗೌಡ, ಡಾ.ಕೆ.ಅನ್ನದಾನಿ, ಅಶ್ವಿನ್ ಕುಮಾರ್,  ನಿಸರ್ಗ ನಾರಾಯಣಸ್ವಾಮಿ, ದೇವಾನಂದ ಚೌಹಾಣ್, ಸುರೇಶ್ ಗೌಡ, ವಿಧಾನ ಪರಿಷತ್ ಸದಸ್ಯರಾದ ಕೆ.ಎನ್.ತಿಪ್ಪೇಸ್ವಾಮಿ ಸೇರಿದಂತೆ ಹಲವು ಶಾಸಕರು ಸಭೆಯಲ್ಲಿ ಉಪಸ್ಥಿತರಿದ್ದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಶ್ರೀಮತಿ ದ್ರೌಪದಿ ಮುರ್ಮು ಅವರನ್ನು ಬೆಂಬಲಿಸಲು @JanataDal_S ಸರ್ವಾನುಮತದ ನಿರ್ಣಯ ಕೈಗೊಂಡಿದೆ.

ವಿಧಾನಸೌಧದಲ್ಲಿ ನಡೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಈ ಮಹತ್ವದ ನಿರ್ಣಯ ಕೈಗೊಳ್ಳಲಾಗಿದೆ. ಕೋವಿಡ್‌ ಪಾಸಿಟಿವ್‌ ಕಾರಣಕ್ಕೆ ನಾನು ವರ್ಚುಯಲ್‌ ವೇದಿಕೆ ಮೂಲಕ ಈ ಸಭೆಯಲ್ಲಿ ಪಾಲ್ಗೊಂಡಿದ್ದೆ. 1/5 pic.twitter.com/GLYYsifaYf

— H D Kumaraswamy (@hd_kumaraswamy) July 15, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X