ಕೋವಿಡ್‌ನಿಂದ ಹೆತ್ತವರನ್ನು ಕಳಕೊಂಡ ಮಕ್ಕಳ ವಿದ್ಯಾಭ್ಯಾಸಕ್ಕೆ ನೆರವು
ಮಂಗಳೂರು : ಕೋವಿಡ್-೧೯ ಸೋಂಕಿನಿಂದ ತಂದೆ ಮತ್ತು ತಾಯಿಯನ್ನು ಕಳೆದುಕೊಂಡು ಕುಟುಂಬದ ಇತರ ಸದಸ್ಯರ ಆರೈಕೆಯಲ್ಲಿರುವ ೧೧ ಮಕ್ಕಳನ್ನು ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಗುರುತಿಸಿದೆ. ಆ ಪೈಕಿ ಸುಳ್ಯದ ಒಬ್ಬ ಬಾಲಕನಿಗೆ ಡಿಪ್ಲೊಮಾ ಶಿಕ್ಷಣಕ್ಕೆ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜು ಹಾಗೂ ಉಪ್ಪಿನಂಗಡಿಯ ಬಾಲಕಿಗೆ ಉನ್ನತ ವ್ಯಾಸಂಗಕ್ಕಾಗಿ ದೇರಳಕಟ್ಟೆಯ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸ್‌ನಲ್ಲಿ ಜಿಲ್ಲಾಧಿಕಾರಿಯ ಕೋರಿಕೆಯ ಮೇರೆಗೆ ಉಚಿತ ವಿದ್ಯಾಭ್ಯಾಸಕ್ಕೆ ನೆರವು ನೀಡಿದೆ. ಅಲ್ಲದೆ ಉಚಿತ ವಸತಿ ವ್ಯವಸ್ಥೆಯನ್ನು ಕಲ್ಪಿಸಿದೆ ಎಂದು ಜಿಲ್ಲಾಡಳಿತದ ಪ್ರಕಟನೆ ತಿಳಿಸಿದೆ.
ಇದಕ್ಕೆ ಸ್ಪಂದಿಸಿದ ಸುಳ್ಯದ ನೆಹರೂ ಮೆಮೋರಿಯಲ್ ಕಾಲೇಜಿನ ಅಧ್ಯಕ್ಷ ಡಾ. ಕೆ.ವಿ. ಚಿದಾನಂದ ಹಾಗೂ ದೇರಳಕಟ್ಟೆಯ ನಿಟ್ಟೆ ಉಷಾ ಇನ್‌ಸ್ಟಿಟ್ಯೂಟ್ ಆಫ್ ನಸಿರ್ಂಗ್ ಸೈನ್ಸ್‌ನ ವ್ಯವಸ್ಥಾಪಕ ನಿರ್ದೇಶಕ ವಿಶಾಲ್ ಹೆಗ್ಡೆ ಅವರಿಗೆ ದ.ಕ.ಜಿಲ್ಲಾಧಿಕಾರಿ ಡಾ.ರಾಜೇಂದ್ರ ಕೆ.ವಿ. ಕೃತಜ್ಞತೆ ಸಲ್ಲಿಸಿದ್ದಾರೆ.
Next Story