Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತ್ರೆಯಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ...

ಜಾತ್ರೆಯಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ನಿರ್ಬಂಧ ಹೇರಿದ ಗ್ರಾಮಸ್ಥರು: ಹಾಸನದಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ

ವಾರ್ತಾಭಾರತಿವಾರ್ತಾಭಾರತಿ15 July 2022 10:11 PM IST
share
ಜಾತ್ರೆಯಲ್ಲಿ ಪಾಲ್ಗೊಳ್ಳದಂತೆ ದಲಿತರಿಗೆ ನಿರ್ಬಂಧ ಹೇರಿದ ಗ್ರಾಮಸ್ಥರು: ಹಾಸನದಲ್ಲಿ ಅಸ್ಪೃಶ್ಯತೆ ಪ್ರಕರಣ ಬೆಳಕಿಗೆ

ಹಾಸನ: ಹಾಸನ ಜಿಲ್ಲೆಯ ಗಂಗೂರ ಗ್ರಾಮದಲ್ಲಿ ಜಾತಿ ತಾರತಮ್ಯದ ಘಟನೆ ವರದಿಯಾಗಿದೆ, ಗ್ರಾಮದ ಸವರ್ಣೀಯರು ದಲಿತರನ್ನು ಧಾರ್ಮಿಕ ಸಮಾರಂಭದಲ್ಲಿ ಭಾಗವಹಿಸದಂತೆ ಆದೇಶಿಸಿದ್ದಾರೆ ಎಂದು ವರದಿಯಾಗಿದೆ. ಅಲ್ಲದೆ,  ಈ ಬಗ್ಗೆ ದಲಿತರಿಂದ ಬಲವಂತವಾಗಿ ಪ್ರತಿಜ್ಞೆಯನ್ನೂ ತೆಗೆದುಕೊಳ್ಳಲಾಗಿದೆ ಎಂದು nationalheraldindia.com ವರದಿ ಮಾಡಿದೆ.

ಮುಜರಾಯಿ ಇಲಾಖೆಗೆ ಒಳಪಡುವ ಮುಖ್ಯ ದೇವಸ್ಥಾನದ ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಗಂಗೂರ ಗ್ರಾಮಸ್ಥರು ‘ಅಡ್ಡೆ ಉತ್ಸವ’ ಎಂಬ ಆಚರಣೆಗೆ ಮುಂದಾಗಿದ್ದಾರೆ. ಈ ಆಚರಣೆಯ ಸಮಯದಲ್ಲಿ, ಆದಿಬೈಲು ಬಿಂದಿಗೆಯಮ್ಮ ರಂಗನಾಥಸ್ವಾಮಿ ದೇವಸ್ಥಾನದಿಂದ ದೇವರನ್ನು 28 ದಿನಗಳ ನಂತರ ಧಾರ್ಮಿಕ ಜಾತ್ರೆಯಲ್ಲಿ ಸಮಾಪ್ತಿಗೊಳಿಸುವ ಮೊದಲು 28 ಹಳ್ಳಿಗಳಿಗೆ ಕರೆದೊಯ್ಯಲಾಗುತ್ತದೆ. ಆದರೆ, ದೇವಸ್ಥಾನ ಸರ್ಕಾರದ ಅಧೀನದಲ್ಲಿ ಇದ್ದರೂ ಗ್ರಾಮದ ಸವರ್ಣೀಯರು ಪಂಚಾಯ್ತಿ ನಡೆಸಿ ದೇವರನ್ನು ಗ್ರಾಮಕ್ಕೆ ಕರೆತರುವ ಸಂದರ್ಭದಲ್ಲಿ ದಲಿತರು ಯಾವುದೇ ಧಾರ್ಮಿಕ ಕಾರ್ಯಗಳಲ್ಲಿ ಭಾಗವಹಿಸಬಾರದು ಎಂದು ತೀರ್ಮಾನಿಸಿದ್ದಾರೆ ಎಂದು ವರದಿಯಾಗಿದೆ. 

ಯಾವುದೇ ಧಾರ್ಮಿಕ ಆಚರಣೆಗಳಲ್ಲಿ ಪಾಲ್ಗೊಳ್ಳಬಾರದು, ದೇವರ ಪೂಜೆ ಮಾಡಬಾರದು ಎಂದು ದಲಿತ ಕುಟುಂಬಗಳಿಗೆ ಸ್ಪಷ್ಟ ಸೂಚನೆ ನೀಡಿದ್ದಾರೆ. ಈ ಬಗ್ಗೆ ಜಿಲ್ಲಾಧಿಕಾರಿ ಅಥವಾ ಇತರೆ ಯಾವುದೇ ಸರ್ಕಾರಿ ಅಧಿಕಾರಿಗಳಿಗೆ ಅನಾಮಧೇಯ ಮನವಿ ಪತ್ರ ಬರೆಯದಂತೆ ಬೆದರಿಕೆ ಹಾಕಲಾಗಿದೆ ಎಂದು ವರದಿ ಹೇಳಿದೆ.

ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ, ‘ಅಡ್ಡೆ ಉತ್ಸವ’ಕ್ಕೆ ಸಂಬಂಧಿಸಿದಂತೆ ಯಾವುದೇ ಸಮಸ್ಯೆ ಎದುರಾದರೆ ಗ್ರಾಮಸ್ಥರಲ್ಲೇ ಬಗೆಹರಿಸಿಕೊಳ್ಳುವುದಾಗಿ ಗ್ರಾಮದ ಸವರ್ಣೀಯರು ದಲಿತರಿಂದ ಮಾತು ಪಡೆದಿದ್ದಾರೆ ಎನ್ನಲಾಗಿದೆ.

ಹಳ್ಳಿಯ ದಲಿತ ಸಮುದಾಯಕ್ಕೆ ಸೇರಿದ ವಿದ್ಯಾವಂತ ಯುವಕರು ಮೇಲ್ಜಾತಿ ಕಟ್ಟುಪಾಡುಗಳ ಬಗ್ಗೆ ಕಿಡಿಕಾರಿದ್ದಾರೆ. ಗ್ರಾಮದಲ್ಲಿ ಮೇಲ್ಜಾತಿಗೆ ಸೇರಿದ ಸುಮಾರು 300 ಮನೆಗಳಿದ್ದು, ದಲಿತ ಸಮುದಾಯಕ್ಕೆ ಸೇರಿದ 10 ಕುಟುಂಬಗಳು ಮಾತ್ರ ಇವೆ. ದಲಿತರು ಪ್ರತಿಭಟನೆ ನಡೆಸಲು ಸಾಧ್ಯವಿಲ್ಲ ಎಂದು ತಿಳಿದ ಶೋಷಕ ಜಾತಿಯ ಜನರು ಈ ವಿಚಾರದಲ್ಲಿ ಏಕಪಕ್ಷೀಯವಾಗಿ ನಡೆಯಲು ನಿರ್ಧರಿಸಿದ್ದಾರೆ ಎನ್ನಲಾಗಿದೆ.

"ನಾವು ಇಂದು ಗಣರಾಜ್ಯೋತ್ಸವವನ್ನು ಆಚರಿಸುತ್ತಿದ್ದೇವೆ. ಆದರೆ ನಮಗೆ ಇನ್ನೂ ಸ್ವಾತಂತ್ರ್ಯ ಸಿಕ್ಕಿಲ್ಲ. ದಮನಕಾರಿ ಜಾತಿ ವ್ಯವಸ್ಥೆ ನಮ್ಮನ್ನು ಇನ್ನೂ ಕಾಡುತ್ತಿದೆ. ಸಂವಿಧಾನಾತ್ಮಕವಾಗಿ ಎಲ್ಲಾ ಜಾತಿಗಳು ಸಮಾನವಾಗಿವೆ, ಹಾಗಾದರೆ ನಮ್ಮನ್ನು ಏಕೆ ಶೋಷಿಸಲಾಗುತ್ತಿದೆ?," ಎಂದು ಗ್ರಾಮನಿವಾಸಿಯಾಗಿರುವ ಆಕಾಶ್ ಎಂಬವರು ಪ್ರಶ್ನಿಸಿದ್ದಾರೆ. ಅಲ್ಲದೆ, "ನಾವು ಆಚರಣೆಯಲ್ಲಿ ಪಾಲ್ಗೊಳ್ಳುವುದನ್ನು ನಿಷೇಧಿಸಿದರೆ ನಮ್ಮ ಗ್ರಾಮಕ್ಕೆ 'ಅಡ್ಡೆ ಉತ್ಸವ' ಬರಲು ನಾವು ಬಯಸುವುದಿಲ್ಲ." ಎಂದು ಅವರು ಹೇಳಿದ್ದಾರೆ. 

‘ಅಡ್ಡೆ ಉತ್ಸವ’ ಹಲವು ವರ್ಷಗಳಿಂದ ಸ್ಥಗಿತಗೊಂಡಿದ್ದು, ಈ ಬಾರಿ ಗ್ರಾಮಸ್ಥರು ಅದನ್ನು ನಡೆಸಬೇಕೆಂದು ಹೊರಟಿದ್ದಾರೆ ಎಂದು ಹೆಸರು ಹೇಳಲಿಚ್ಛಿಸದ ಗ್ರಾಮ ನಿವಾಸಿಯೊಬ್ಬರು ತಿಳಿಸಿದ್ದಾರೆ.

"ಆದರೆ ಇದು ಮೊದಲು ಸಂಭವಿಸಿದಾಗಲೆಲ್ಲಾ, ಮೇಲ್ವರ್ಗದ ಜನರು ದಲಿತರನ್ನು ದೇವರ ಬಳಿ ಹೋಗಲು ಬಿಡಲಿಲ್ಲ. ಅವರು ಈ ಬಾರಿ ನಮ್ಮ ಹಿರಿಯರಿಂದ ಸಹಿಗಳನ್ನು ಸಂಗ್ರಹಿಸುತ್ತಿದ್ದಾರೆ, ಅವರು ಗುರಿಯಾಗುತ್ತಾರೆ ಅಥವಾ ಬಹಿಷ್ಕಾರಕ್ಕೆ ಒಳಗಾಗುತ್ತಾರೆ ಎಂದು ಭಯಪಡುತ್ತಾರೆ" ಎಂದು ಅವರು ಹೇಳಿದ್ದಾರೆ.

“ಜಾತಿ ವ್ಯವಸ್ಥೆ ತುಂಬಾ ಜೀವಂತವಾಗಿದೆ... ಇದು ಪ್ರತಿ ಹಳ್ಳಿಯಲ್ಲೂ ಆಚರಣೆಯಲ್ಲಿದೆ, ವಿಪರ್ಯಾಸವೆಂದರೆ ಅಸ್ಪೃಶ್ಯತೆ ಹೇರುತ್ತಿರುವುದು ಬ್ರಾಹ್ಮಣರಲ್ಲ, ಆದರೆ ಬ್ರಾಹ್ಮಣರು ಕೀಳು ಎಂದು ಪರಿಗಣಿಸುವ ಇತರ ಜಾತಿ ಗುಂಪುಗಳು ಈ ವಿಷಯದಲ್ಲಿ ಆದೇಶಿಸುತ್ತಿವೆ. ದೇವಸ್ಥಾನ ಸರ್ಕಾರಕ್ಕೆ ಸೇರಿದ್ದು, ಇದು ಖಾಸಗಿ ಆಸ್ತಿಯಲ್ಲ, ನಮಗೆ ಪೂಜೆ ಮತ್ತು ಆಚರಣೆಗಳಲ್ಲಿ ಭಾಗವಹಿಸಲು ಅವಕಾಶ ನೀಡದಿದ್ದರೆ, ನಮ್ಮ ಗ್ರಾಮದಲ್ಲಿ 'ಅಡ್ಡೆ ಉತ್ಸವ' ನಮಗೆ ಬೇಡ," ಎಂದು ಅವರು ಹೇಳಿದರು.

20 ವರ್ಷಗಳ ಹಿಂದೆ ದಲಿತರೊಬ್ಬರು ಧಾರ್ಮಿಕ ವಿಧಿವಿಧಾನದಲ್ಲಿ ಪಾಲ್ಗೊಂಡಿದ್ದಕ್ಕೆ ದೊಡ್ಡ ಗಲಾಟೆ ನಡೆದು ‘ಅಡ್ಡೆ ಉತ್ಸವ’ವನ್ನು ನಿಲ್ಲಿಸಲಾಗಿತ್ತು. ಬಹಳ ಸಮಯದ ನಂತರ ಅದನ್ನು ದಲಿತರಿಲ್ಲದೆ ಪುನರಾರಂಭಿಸಲು ವ್ಯವಸ್ಥೆ ಮಾಡಲಾಗುತ್ತಿದೆ ಎಂದು ಸ್ಥಳೀಯರು ಹೇಳುತ್ತಾರೆ.

ಕೃಪೆ: nationalheraldindia.com/

share
ವಾರ್ತಾಭಾರತಿ
ವಾರ್ತಾಭಾರತಿ
Next Story
X