ಬೆಂಗಳೂರು | ಭಿಕ್ಷುಕರಿಗೆ ಬಿಸಿ ಮುಟ್ಟಿಸಿದ ಸಿಸಿಬಿ: 43 ಭಿಕ್ಷುಕರ ಬಂಧನ, 28 ಮಕ್ಕಳ ರಕ್ಷಣೆ
ಬೆಂಗಳೂರು, ಜು.15: ರಾಜಧಾನಿ ಬೆಂಗಳೂರಿನ ಪ್ರಮುಖ ರಸ್ತೆಗಳಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ್ದ 43 ಮಂದಿಯನ್ನು ಸಿಸಿಬಿ ಪೊಲೀಸರು ಬಂಧಿಸಿ, ತನಿಖೆ ಚುರುಕುಗೊಳಿಸಿದ್ದಾರೆ.
ಗುರುವಾರ ನಗರದ ಎಂಟು ವಲಯಗಳಲ್ಲಿ ವಿವಿಧ ಸಂಘಟನೆಗಳ ಸಹಯೋಗದೊಂದಿಗೆ ಕಾರ್ಯಾಚರಣೆ ನಡೆಸಿದ ಸಿಸಿಬಿ ಪೊಲೀಸರು, 43 ಜನರನ್ನು ವಶಕ್ಕೆ ಪಡೆದಿದ್ದಾರೆ. ಈ ಪೈಕಿ 15 ಜನ ತಾಯಂದಿರು ಆಗಿದ್ದು, 28 ಮಕ್ಕಳನ್ನು ರಕ್ಷಣೆ ಮಾಡಲಾಗಿದೆ.
ಸದ್ಯ ಅವರನ್ನು ಸ್ವಯಂ ಸೇವಾ ಸಂಘಗಳೊಂದಿಗೆ ಆಶ್ರಮ ಕಲ್ಪಿಸಲಾಗಿದ್ದು, ಕಾನೂನು ಉಲ್ಲಂಘನೆ ಮಾಡಿದ ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಸಿಸಿಬಿ ತಿಳಿಸಿದೆ.
Next Story