ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾಗೆ ಆಮ್ ಆದ್ಮಿ ಪಕ್ಷ ಬೆಂಬಲ

Photo:PTI
ಹೊಸದಿಲ್ಲಿ: ಜುಲೈ 18 ರಂದು ನಡೆಯಲಿರುವ ರಾಷ್ಟ್ರಪತಿ ಚುನಾವಣೆಯಲ್ಲಿ ವಿರೋಧ ಪಕ್ಷದ ರಾಷ್ಟ್ರಪತಿ ಅಭ್ಯರ್ಥಿ ಯಶವಂತ್ ಸಿನ್ಹಾ ಅವರನ್ನು ಬೆಂಬಲಿಸುವುದಾಗಿ ಆಮ್ ಆದ್ಮಿ ಪಕ್ಷ ಇಂದು ಘೋಷಿಸಿದೆ.
ಆಮ್ ಆದ್ಮಿ ಪಕ್ಷದ ರಾಜ್ಯಸಭಾ ಸಂಸದ ಸಂಜಯ್ ಸಿಂಗ್ ಈ ಘೋಷಣೆ ಮಾಡಿದ್ದಾರೆ.
"ನಮಗೆ ದ್ರೌಪದಿ ಮುರ್ಮು ಬಗ್ಗೆ ಗೌರವವಿದೆ. ಆದರೆ ನಾವು ಯಶವಂತ್ ಸಿನ್ಹಾಜಿಯನ್ನು ಬೆಂಬಲಿಸುತ್ತೇವೆ" ಎಂದು ಅವರು ಹೇಳಿದರು.
Next Story





