Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ...

ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ ರದ್ದುಗೊಳಿಸಿ: ಸಿದ್ದರಾಮಯ್ಯ ಆಗ್ರಹ

ವಾರ್ತಾಭಾರತಿವಾರ್ತಾಭಾರತಿ16 July 2022 5:34 PM IST
share
ಮಂಡಕ್ಕಿ ಉತ್ಪಾದನೆ ಮೇಲಿನ ಜಿಎಸ್‍ಟಿ ರದ್ದುಗೊಳಿಸಿ: ಸಿದ್ದರಾಮಯ್ಯ ಆಗ್ರಹ

ಬೆಂಗಳೂರು: ಕೇಂದ್ರ ಸರಕಾರದ ತಲೆಕೆಳಗಾದ ಆರ್ಥಿಕ ನೀತಿಗಳಿಂದ ದೇಶದ ದುಡಿಯುವ ವರ್ಗಗಳು ಹೈರಾಣಾಗಿರುವಾಗ ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲೂ ಶೇ.5 ರಷ್ಟು ಜಿಎಸ್‍ಟಿ ವಿಧಿಸುತ್ತಿರುವುದು ಕ್ರೌರ್ಯದ ಪರಮಾವಧಿಯಾಗಿದೆ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. 

ಮುಖ್ಯಮಂತ್ರಿಗಳು ಕೂಡಲೇ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಮಂಡಕ್ಕಿ ಮತ್ತಿತರ ಬಡವರ ಆಹಾರ ಉತ್ಪಾದನೆ ಮೇಲಿನ ಜಿಎಸ್‍ಟಿಯನ್ನು ತಕ್ಷಣದಿಂದಲೇ ರದ್ದುಗೊಳಿಸಲು ಒತ್ತಾಯಿಸಬೇಕೆಂದು ಅವರು ಆಗ್ರಹಿಸಿದ್ದಾರೆ. 

ಈ ಸಂಬಂಧ ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯವರಿಗೆ ಬರೆದಿರುವ ಪತ್ರದ ಪೂರ್ಣಪಾಠ ಹೀಗಿದೆ :

ಮಂಡಕ್ಕಿ ಭಟ್ಟಿಯಲ್ಲಿ ದುಡಿಯುವ ಕೂಲಿ ಕಾರ್ಮಿಕರಿಗೆ ಎರಡು ಹೊತ್ತಿನ ಊಟಕ್ಕೆ ಆಗುವಷ್ಟೂ ಗಳಿಕೆ ಇರುವುದಿಲ್ಲ ಎನ್ನುವ ಕಾಮನ್ ಸೆನ್ಸ್ ಕೂಡ ಡಬಲ್ ಎಂಜಿನ್ ಸರ್ಕಾರಗಳಿಗೆ ಇದ್ದಂತಿಲ್ಲ. ಬಿಜೆಪಿ ಸರ್ಕಾರಗಳು ಜನತೆಯನ್ನು ಶತ್ರುಗಳೆಂದು ಭಾವಿಸಿ ಕೆಲಸ ಮಾಡುತ್ತಿವೆ ಎಂಬುದಕ್ಕೆ ಇದು ಉದಾಹರಣೆ.

ಮಂಡಕ್ಕಿ ಉತ್ಪಾದನೆಗೆ ತಗಲುವ ವೆಚ್ಚ, ಮಾರಾಟ ವೆಚ್ಚಕ್ಕಿಂತ ಹೆಚ್ಚಾಗಿದೆ. ಮಂಡಕ್ಕಿ ಉತ್ಪಾದಿಸಿ ಅದು ಗ್ರಾಹಕರ ಕೈಗೆ ತಲುಪುವವರೆಗೂ ಬೆಲೆಗಳ ಏರಿಳಿತ ಅತಿ ಸಾಮಾನ್ಯ ಅಗಿ ಬಿಟ್ಟಿದೆ. ಮಳೆಗಾಲದಲ್ಲಿ ಮಂಡಕ್ಕಿ ಉತ್ಪಾದನೆಗೆ ನಾನಾ ತೊಂದರೆಗಳಿವೆ. ಅಕ್ಕಿ ಒಣಗಿರುವುದಿಲ್ಲ, ಭತ್ತದ ಬೆಲೆ ಗಗನಕ್ಕೆ ಏರಿರುತ್ತದೆ. ಮಾರಾಟವೂ ಕುಸಿದಿರುತ್ತದೆ. 

ಮಳೆಗಾಲದಲ್ಲಿ ಅಕ್ಕಿ ನೆನೆದರೆ ಮಂಡಕ್ಕಿ ಭಟ್ಟಿಗಳನ್ನು ವಾರಗಟ್ಟಲೆ ಮುಚ್ಚಬೇಕಾಗುತ್ತದೆ. ಭಟ್ಟಿ ಮುಚ್ಚಿದರೆ ಮಂಡಕ್ಕಿ ಕಾರ್ಮಿಕರಿಗೆ ಬೇರೆ ಕಡೆ ಕೂಲಿ ಕೆಲಸ ಸಿಗುವುದಿಲ್ಲ. ಒಂದು ಹೊತ್ತಿನ ಊಟಕ್ಕೂ ಕೂಲಿ ಕಾರ್ಮಿಕರು ಪರದಾಡಬೇಕಾಗುತ್ತದೆ. ಸರ್ಕಾರಕ್ಕೆ ಕನಿಷ್ಠ ಮಾನವೀಯತೆ ಇದ್ದಿದ್ದರೂ ಮಂಡಕ್ಕಿ ಮತ್ತಿತರ ಸಣ್ಣ-ಪುಟ್ಟ ಬಡವರ ಆಹಾರ ಉತ್ಪಾದನೆ ಮೇಲೆ ಜಿಎಸ್‍ಟಿ ವಿಧಿಸುತ್ತಿರಲಿಲ್ಲ.ದಾವಣಗೆಯೊಂದರಲ್ಲೆ 5 ಸಾವಿರಕ್ಕೂ ಹೆಚ್ಚು ಕುಟುಂಬಗಳು ಮಂಡಕ್ಕಿ ಉತ್ಪಾದನೆಯನ್ನೆ ನೆಚ್ಚಿಕೊಂಡಿವೆ. 

ಇವರ ಅನ್ನದ ತಟ್ಟೆಗೆ ಕೈ ಹಾಕಿ ತುತ್ತು ಅನ್ನವನ್ನೂ ಕಿತ್ತುಕೊಳ್ಳುವುದು ಅಮಾನವೀಯ ಸಂಗತಿ. ದಾವಣಗೆರೆ ಮತ್ತಿತರ ಕಡೆಯ ಮಂಡಕ್ಕಿ ಉತ್ಪಾದಕರ ಕ್ಷೇಮಾಭಿವೃದ್ಧಿ ಸಂಘದವರು ನನ್ನನ್ನು ಭೇಟಿಯಾಗಿ ಮಂಡಕ್ಕಿಗೂ ಜಿಎಸ್‍ಟಿ ವಿಧಿಸಿರುವುದರಿಂದ ಆಗಿರುವ ಸಂಕಷ್ಟವನ್ನು ಹೇಳಿಕೊಂಡಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X