Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಜಾತಿಯಿಂದ ವ್ಯಕ್ತಿಯ ಯೋಗ್ಯತೆ...

ಜಾತಿಯಿಂದ ವ್ಯಕ್ತಿಯ ಯೋಗ್ಯತೆ ಅಳೆಯಬಾರದು: ವಿಪಕ್ಷ ನಾಯಕ ಸಿದ್ದರಾಮಯ್ಯ

ವಾರ್ತಾಭಾರತಿವಾರ್ತಾಭಾರತಿ16 July 2022 6:43 PM IST
share
ಜಾತಿಯಿಂದ ವ್ಯಕ್ತಿಯ ಯೋಗ್ಯತೆ ಅಳೆಯಬಾರದು: ವಿಪಕ್ಷ ನಾಯಕ ಸಿದ್ದರಾಮಯ್ಯ

ಬೆಂಗಳೂರು, ಜು. 16: ‘ಜಾತಿಯಿಂದ ವ್ಯಕ್ತಿಯ ಯೋಗ್ಯತೆಯನ್ನು ಅಳೆಯುವ ಬದಲಿಗೆ ಆತ ಎಷ್ಟು ಸಮಾಜಮುಖಿಯಾಗಿದ್ದಾನೆ ಎಂಬುದನ್ನು ಆಧರಿಸಿ ಮನುಷ್ಯನ ವ್ಯಕ್ತಿತ್ವವನ್ನು ಅಳೆಯುವಂತೆ ಆಗಬೇಕು' ಎಂದು ವಿಪಕ್ಷ ನಾಯಕ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದಿಲ್ಲಿ ಪ್ರತಿಪಾದಿಸಿದ್ದಾರೆ.

ಶನಿವಾರ ನಗರದ ಗಾಂಧಿ ಭವನದಲ್ಲಿ ಪ್ರೊ.ಬಿ.ಕೃಷ್ಣಪ್ಪ ಟ್ರಸ್ಟ್ ವತಿಯಿಂದ ಏರ್ಪಡಿಸಿದ್ದ ನಿವೃತ್ತ ಅಧಿಕಾರಿ ರುದ್ರಪ್ಪ ಹನಗವಾಡಿ ಅವರ ಆತ್ಮಕಥೆ ‘ಋಣದ ಗಣಿ' ಕೃತಿ ಲೋಕಾರ್ಪಣೆ ಮಾಡಿ ಮಾತನಾಡಿದ ಅವರು, ‘ಯಾವುದೇ ಒಂದು ಸಮಾಜದಲ್ಲಿ ಮನುಷ್ಯತ್ವ, ಮಾನವೀಯತೆ ಇಲ್ಲದಿದ್ದರೆ ಆ ಸಮಾಜದಲ್ಲಿ ಹಿಂಸೆ, ದೌರ್ಜನ್ಯಗಳು ಮಿತಿ ಮೀರುತ್ತವೆ. ಸಮಾಜದಲ್ಲಿ ಬದುಕನ್ನು ಪ್ರೀತಿಸುವ ಮತ್ತು ಮನುಷ್ಯರ ನಡುವೆ ಪರಸ್ಪರ ವಿಶ್ವಾಸವಿದ್ದರೆ ಮಾತ್ರವೇ ನೆಮ್ಮದಿ ಮೂಡಲು ಸಾಧ್ಯ' ಎಂದು ಹೇಳಿದರು.

‘ಬಹುತೇಕ ಹಳ್ಳಿಗಳಲ್ಲಿಯೂ ಸಹಜವಾಗಿಯೇ ಜಾತಿ-ಜಾತಿಗಳ ಮಧ್ಯೆ ಸಾಮರಸ್ಯ ಇರುತ್ತದೆ. ವಿದ್ಯೆಯಿಂದ ಜಾತಿಯ ಅಸಮಾನತೆ ಹೋಗಬೇಕಿತ್ತು. ಆದರೆ, ಶೇ.78ರಷ್ಟು ಮಂದಿ ವಿದ್ಯಾವಂತರಾಗಿದ್ದರೂ ಜಾತೀಯತೆ ಮತ್ತಷ್ಟು ಗಟ್ಟಿಗೊಳ್ಳುತ್ತಿರುವುದು ನೋವಿನ ಸಂಗತಿ' ಎಂದು ಬೇಸರ ವ್ಯಕ್ತಪಡಿಸಿದ ಸಿದ್ದರಾಮಯ್ಯ, ‘ಯಾವುದೇ ಒಬ್ಬ ವ್ಯಕ್ತಿಗೆ ಜಾತಿಯ ಅಸಮಾನತೆ, ಅಸ್ಪೃಶ್ಯತೆಯ ನೋವು ಕಾಡಿದರೆ ಆತನಲ್ಲಿ ಸಾಧನೆ ಮಾಡಬೇಕೆಂಬ ಛಲ ಬೆಳೆಯುತ್ತದೆ' ಎಂದು ತಿಳಿಸಿದರು.

‘ಜಾತಿಗೆ ಚಲನಶೀಲತೆ ಇಲ್ಲವಾಗಿದ್ದು, ಜಡತ್ವ ಆವರಿಸಿದೆ. ಹೀಗಾಗಿ ದಿನದಿಂದ ದಿನಕ್ಕೆ ಜಾತಿ ಗಟ್ಟಿಗೊಳ್ಳುತ್ತಿದೆ. ಹೀಗಾಗಿ ಜಾತಿಯ ಅಸಮಾನತೆ, ಅಸ್ಪೃಶ್ಯತೆ ಮತ್ತು ಶೋಷಣೆ ಸುಳಿಗೆ ಸಿಲುಕಿರುವ ಜನರಲ್ಲಿ ಸಾಮಾಜಿಕ ಹಾಗೂ ಆರ್ಥಿಕ ಸಬಲತೆ ಬರಬೇಕಿದೆ. ಆಗ ಮಾತ್ರ ಜಾತೀಯತೆ ತೊಲಗಲು ಸಾಧ್ಯ' ಎಂದು ಸಿದ್ದರಾಮಯ್ಯ ಇದೇ ವೇಳೆ ಪ್ರತಿಪಾದಿಸಿದರು.

‘1994-95ರಲ್ಲಿ ನಾನು ಮೊದಲ ಬಾರಿಗೆ ಹಣಕಾಸು ಸಚಿವನಾಗಿದ್ದ ಸಂದರ್ಭದಲ್ಲಿ ಬಜೆಟ್ ಮಂಡಿಸಿದ್ದೆ. ಆಗ ನಾನು ಬಜೆಟ್ ಮಂಡನೆ ಮಾಡಿದ್ದಕ್ಕೆ ಲಂಕೇಶ್ ಪತ್ರಿಕೆಯಲ್ಲೇ ‘ನೂರು ಕುರಿಗಳ ಲೆಕ್ಕ ಹಾಕದ ವ್ಯಕ್ತಿ ಬಜೆಟ್ ಮಂಡನೆ ಮಾಡಲು ಹೇಗೆ ಸಾಧ್ಯ?' ಎಂದು ಪ್ರಶ್ನಿಸಿದ್ದರು. ನಾನು ಅದನ್ನು ಸವಾಲಾಗಿ ಸ್ವೀಕರಿಸಿ ಆರ್ಥಿಕ ತಜ್ಞರಿಂದ ಅರ್ಥಶಾಸ್ತ್ರವನ್ನು ಅರಿತು ಅತ್ಯಂತ ಸಮರ್ಥವಾಗಿ ಈವರೆಗೂ 13 ಆಯವ್ಯಯ ಮಂಡನೆ ಮಾಡಿದ್ದೇನೆ' ಎಂದ ಅವರು, ‘ಸಮಾಜದ ಋಣ ನಮ್ಮ-ನಿಮ್ಮೆಲ್ಲರ ಮೇಲಿದೆ. ಆ ಋಣವನ್ನು ತೀರಿಸುವ ನಿಟ್ಟಿನಲ್ಲಿ ಜನಪರ ಕೆಲಸಗಳನ್ನು ನಾವೆಲ್ಲರೂ ಶ್ರಮಿಸಬೇಕು' ಎಂದು ಕರೆ ನೀಡಿದರು.

ಕೃತಿಯ ಕುರಿತು ಮಾತನಾಡಿದ ವಿಮರ್ಶಕ ಡಾ.ಕೆ.ವೈ.ನಾರಾಯಣಸ್ವಾಮಿ, ‘ದಲಿತ ಸಮುದಾಯಗಳ ಆತ್ಮಕಥೆಗಳಲ್ಲಿ ‘ಸ್ವಮರುಕ' ಸಹಜ. ಆದರೆ, ರುದ್ರಪ್ಪ ಹನಗವಾಡಿಯವರ ಆತ್ಮಕಥನ ಅದನ್ನು ಮೀರಿದ್ದು ಬದುಕನ್ನು ಪ್ರೀತಿಸುವ ಭಿನ್ನದಾರಿಯಲ್ಲಿದೆ. ಹಳ್ಳಿಗಳಲ್ಲಿ ಸಾಮರಸ್ಯ ಸಹಜವಾಗಿದೆ. ಆದರೆ, ನಮ್ಮ ಶಿಕ್ಷಣ ವ್ಯವಸ್ಥೆಯಿಂದ ಮಾನವೀಯತೆಯ ಸಮಾಧಿ ಮಾಡುವ ಕೆಲಸವನ್ನು ವಿವಿಗಳು ವ್ಯವಸ್ಥಿತವಾಗಿ ಮಾಡುತ್ತಿರುವುದು ಅಪಾಯಕಾರಿ. ರುದ್ರಪ್ಪ ಅವರ ಆತ್ಮಕಥೆ ಅಧಿಕಾರಿ ದಾಟಿಯಲ್ಲಿದ್ದು, ಕಾವ್ಯರೂಪದಲ್ಲಿ ಅವರು ಇನ್ನೂ ಹೆಚ್ಚೆಚ್ಚು ಬರೆಯಬೇಕು' ಎಂದು ಹೇಳಿದರು.

ಪ್ರೊ.ಎಸ್.ಜಿ.ಸಿದ್ದರಾಮಯ್ಯ ಮಾತನಾಡಿ, ‘ಜಾತಿಯ ಶ್ರೇಣೀಕರಣ ವ್ಯವಸ್ಥೆಯ ಪರ ಸ್ವಾರ್ಥಕ್ಕೆ ಕೆಲವರು ಹಿಂದೆ ಇದ್ದ ಬೌದ್ಧಿಕ ಮಲ ಹೊರುವ ಪದ್ಧತಿ ಇಂದು ಮಾನಸಿಕವಾಗಿಯೂ ಮಲ ಹೊರುವ ಕೆಲಸ ಮಾಡುತ್ತಿದ್ದಾರೆ. ಅದೇ ದಿಕ್ಕಿನಲ್ಲೇ ಪಠ್ಯ ಪುಸ್ತಕ ಪರಿಷ್ಕರಣೆ ನೆಪದಲ್ಲಿ ನಮ್ಮನ್ನು ಇನ್ನೂ 200 ವರ್ಷಗಳಷ್ಟು ಹಿಂದೆಕ್ಕೆ ಕರೆದುಕೊಂಡು ಹೋಗಲಾಗುತ್ತಿದೆ. ಆ ಮೂಲಕ ಇತಿಹಾಸಕ್ಕೆ ದ್ರೋಹ ಮಾಡಲಾಗುತ್ತಿದೆ' ಎಂದು ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕ್ರಮದಲ್ಲಿ ಮಾಜಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಹಿರಿಯ ಸಾಹಿತಿ ಡಾ.ಕೆ.ಮರುಳಸಿದ್ದಪ್ಪ, ಪ್ರೊ.ಬಿ.ಕೆ.ಟ್ರಸ್ಟ್‍ನ ಇಂದಿರಾ ಕೃಷ್ಣಪ್ಪ ಹಾಗೂ ಕೃತಿಯ ಲೇಖಕ ರುದ್ರಪ್ಪ ಹನಗವಾಡಿ ಹಾಗೂ ಗಾಯತ್ರಿ ರುದ್ರಪ್ಪ ಸೇರಿದಂತೆ ಹಲವು ಗಣ್ಯರು ಪಾಲ್ಗೊಂಡಿದ್ದರು.

‘ಜಾತಿಯ ಕಾರಣಕ್ಕೆ ಅಸ್ಪೃಶ್ಯತೆ ಮತ್ತು ಅವಮಾನಗಳನ್ನು ಜೀರ್ಣಿಸಿಕೊಂಡು ಅವುಗಳಿಂದ ಮಾನವೀಯತೆ ಪಾಠ ಕಲಿತಿದ್ದು, ಜಾತಿಯ ಸುಳಿಗೆ ಸಿಲುಕದೆ ಮನುಷ್ಯತ್ವದ ಮೂಲಕ ಕುಟುಂಬಗಳನ್ನು ಬೆಸೆಯುವ ಕೆಲಸವನ್ನು ನಮ್ಮ ತಂದೆಯವರು ಮಾಡಿದ್ದಾರೆ. ಆ ಮೂಲಕ ನಮ್ಮನ್ನು ಹೊಸ ಬದುಕಿಗೆ ತೆರೆದುಕೊಳ್ಳುವಂತೆ ಸಮಾಜಮುಖಿಯಾಗಿ ಬೆಳೆಸಿರುವುದು ಹೆಮ್ಮೆ ಎನಿಸುತ್ತದೆ'
-ಶಿಲ್ಪಾ ರುದ್ರಪ್ಪ, ರುದ್ರಪ್ಪ ಹನಗವಾಡಿ ಅವರ ಪುತ್ರಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X