Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಉಡುಪಿ ಜಿಲ್ಲೆಯಲ್ಲಿ ಉಚಿತ ಕೋವಿಡ್-19...

ಉಡುಪಿ ಜಿಲ್ಲೆಯಲ್ಲಿ ಉಚಿತ ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆ ನೀಡಿಕೆ

ವಾರ್ತಾಭಾರತಿವಾರ್ತಾಭಾರತಿ16 July 2022 7:34 PM IST
share

ಉಡುಪಿ: ಉಡುಪಿ ಜಿಲ್ಲೆ ಕೋವಿಡ್-೧೯ ಮೊದಲನೇ ಮತ್ತು ಎರಡನೇ ಡೋಸ್ ಲಸಿಕೆ ನೀಡುವಲ್ಲಿ ಈಗಾಗಲೇ ಶೇ.೧೦೦ ಗುರಿ ಸಾಧಿಸಿದ್ದು, ಕೋವಿಡ್-೧೯ರ ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭವಿಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ ೧೮ ವರ್ಷ ಮೇಲ್ಪಟ್ಟ ಎಲ್ಲರಿಗೂ ಮುಂಜಾಗ್ರತಾ ಡೋಸ್ ಲಸಿಕೆ ನೀಡುವುದು ಬಹಳ ಮುಖ್ಯವಾಗಿರುವುದರಿಂದ  ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ, ೧೮ ವರ್ಷದಿಂದ ೫೯ ವಷರ್ದ ವರೆಗಿನ ಸಾರ್ವಜನಿಕರಿಗೆ ಸೆಪ್ಟಂಬರ್ ೩೦ರವರೆಗೆ ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮಕ್ಕೆ ಜು.೧೮ರಂದು ಚಾಲನೆ ನೀಡಲಾಗುವುದು.  

ಜಿಲ್ಲೆಯಲ್ಲಿ ೨೦೨೧ರ ಜನವರಿ ೧೬ರಂದು ಕೋವಿಡ್-೧೯ ಲಸಿಕಾಕರಣ ಆರಂಭಗೊಂಡಿದ್ದು, ಪ್ರಾರಂಭದಲ್ಲಿ ಆರೋಗ್ಯ ಕಾರ್ಯಕರ್ತರಿಗೆ, ಭಾರತ ಸರಕಾರದಿಂದ ಗುರುತಿಸಲಾದ ಮುಂಚೂಣಿ ಕಾರ್ಯಕರ್ತರಿಗೆ ಲಸಿಕೆ ನೀಡಲಾಯಿತು. ಅದೇ ಮಾರ್ಚ್ ೧ರಿಂದ ೬೦ ವರ್ಷ ಮೇಲ್ಪಟ್ಟ ಸಾರ್ವಜನಿ ಕರಿಗೆ ಮತ್ತು ರಾಜ್ಯ ಸರಕಾರದಿಂದ ಗುರುತಿಸಿದ ಮುಂಚೂಣಿ ಕಾರ್ಯಕರ್ತೆಯರಿಗೆ ಕೋವಿಡ್-೧೯ ಲಸಿಕೆ ನೀಡಲು ಪ್ರಾರಂಭಿಸಲಾಯಿತು. ಜೂನ್ ೨೧ರಿಂದ ೧೮ ವಷರ್ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಲಸಿಕೆ ನೀಡಲು ಪ್ರಾರಂಭಿಸಲಾಯಿತು.

ಈಗಾಗಲೇ ೧೮ ವರ್ಷ ಮೇಲ್ಪಟ್ಟ ೧೦,೦೪,೭೧೨ ಫಲಾನುಭವಿಗಳು ಮೊದಲನೇ ಡೋಸ್ ಲಸಿಕೆ ಪಡೆದು ಶೇ.೧೦೦.೫೭ ಹಾಗೂ ೧೦,೦೦,೦೯೨ ಮಂದಿ ಎರಡನೇ ಡೋಸ್ ಕೋಡ್ ಲಸಿಕೆ ಪಡೆದಿದ್ದು, ಶೇ.೧೦೦.೧೧ ಸಾಧನೆ ಆಗಿದೆ. ಇದೀಗ ಮುನೆಚ್ಚರಿಕಾ ಡೋಸ್ ಪಡೆಯಲು ಜಿಲ್ಲೆಯಲ್ಲಿ ೧೮ರಿಂದ ೫೯ ವರ್ಷದ ೮,೦೦,೦೦೦ ಫಲಾನುಭವಿಗಳು ಇರುತ್ತಾರೆ.

ಜಿಲ್ಲೆಯಲ್ಲಿ ಜುಲೈ ೧೮ರಿಂದ ೧೮ ವಷರ್ ಮೇಲ್ಪಟ್ಟ, ೨ನೇ ಡೋಸ್ ಲಸಿಕೆ ಪಡೆದು ೬ ತಿಂಗಳು ದಾಟಿದ ಸಾರ್ವಜನಿಕರು ಕೂಡಲೇ ಹತ್ತಿರದ ಸರಕಾರಿ ಆರೋಗ್ಯ ಕೇಂದ್ರಗಳ ಲಸಿಕಾ ಕೇಂದ್ರಕ್ಕೆ ಹೋಗಿ ಉಚಿತವಾಗಿ ಲಸಿಕೆ ಪಡೆದು ಸ್ವಾತಂತ್ರ್ಯದ ಅಮೃತ ಮಹೋತ್ಸದ ಸಂಭ್ರಮದಲ್ಲಿ ಪಾಲ್ಗೊಳ್ಳಲು ಕೋರಲಾಗಿದೆ. ವಿದೇಶಕ್ಕೆ ತೆರಳುವ ೧೮ ವರ್ಷ ಮೇಲ್ಪಟ್ಟ ಫಲಾನುಭವಿಗಳು ಎರಡನೇ ಡೋಸ್ ಪಡೆದು ೩ ತಿಂಗಳು ದಾಟಿದಲ್ಲಿ ಮುಂಜಾಗ್ರತಾ ಡೋಸ್ ಲಸಿಕೆ ಪಡೆಯ ಬಹುದಾಗಿದೆ.

ಸೆಪ್ಟಂಬರ್ ೩೦ರ ಒಳಗೆ ೧೮ ವಷರ್ದಿಂದ ೫೯ ವಷರ್ದವರೆಗಿನ ಎಲ್ಲರಿಗೂ ಕೋವಿಡ್-೧೯ ಮುನ್ನೆಚ್ಚರಿಕಾ ಲಸಿಕೆ ನೀಡಲು ಪ್ರಾರಂಭದ ಹಂತದಲ್ಲಿ ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸೇರಿದಂತೆ ಎಲ್ಲಾ ಸರಕಾರಿ ವೈದ್ಯಕೀಯ ಕೇಂದ್ರಗಳಲ್ಲಿ ಲಸಿಕೆ ನೀಡಲು ಬೇಕಾದ ಎಲ್ಲಾ ವ್ಯವಸ್ಥೆ ಮಾಡಿಕೊಂಡಿದ್ದು, ಮುಂದಿನ ದಿನಗಳಲ್ಲಿ ಗ್ರಾಮಪಂಚಾಯತ್‌ಗಳ ಸಹಯೋಗದಲ್ಲಿ ಗ್ರಾಮೀಣ ಪ್ರದೇಶದಲ್ಲಿ ಹಾಗೂ ಹೆಚ್ಚಿನ ಸಂಖ್ಯೆಯ ಕಾರ್ಮಿಕರು ಕಾರ್ಯ ನಿರ್ವಹಿಸುವ ವಿವಿಧ ಖಾಸಗಿ ಸಂಸ್ಥೆಗಳಲ್ಲೂ ಸಹ ಸಮೀಪದ ಸರಕಾರಿ ಆರೋಗ್ಯ ಕೇಂದ್ರಗಳ ಮೂಲಕ ಮುನ್ನೆಚ್ಚರಿಕಾ ಡೋಸ್ ನೀಡುವ ಮೂಲಕ, ನಿಗದಿತ ಅವಧಿಯೊಳಗೆ ಮುನ್ನೆಚ್ಚರಿಕಾ ಲಸಿಕೆ ನೀಡುವಲ್ಲಿ ಸಂಪೂರ್ಣ ಗುರಿ ಸಾಧಿಸಲು ಆರೋಗ್ಯ ಇಲಾಖೆ ವತಿಯಿಂದ ಯೋಜನೆಗಳನ್ನು ರೂಪಿಸಲಾಗಿದೆ ಎಂದು ಇಲಾಖೆ ತಿಳಿಸಿದೆ. 

ಸೋಮವಾರ ಅಭಿಯಾನಕ್ಕೆ ಚಾಲನೆ: ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ೧೮ವರ್ಷ ಮೇಲ್ಪಟ್ಟವರಿಗೆ ಕೋವಿಡ್-೧೯ ಉಚಿತ ಮುನ್ನೆಚ್ಚರಿಕಾ ಡೋಸ್ ಲಸಿಕಾ ಅಭಿಯಾನಕ್ಕೆ ಜುಲೈ ೧೮ರ ಸೋಮವಾರ ಬೆಳಗ್ಗೆ ೧೦:೦೦ ಗಂಟೆಗೆ ನಗರದ ಅಜ್ಜರಕಾಡು ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಚಾಲನೆ ನೀಡಲಾಗುವುದು ಎಂದು ಪ್ರಕಟಣೆ ತಿಳಿಸಿದೆ.

ಜಿಲ್ಲೆಯಲ್ಲಿ ಕೋವಿಡ್-೧೯ ಸಂಭಾವ್ಯ ೪ನೇ ಅಲೆಯನ್ನು ಸಮರ್ಥವಾಗಿ ಎದುರಿಸಲು  ಸಾರ್ವಜನಿಕರು ಮುನ್ನೆಚ್ಚರಿಕಾ ಲಸಿಕೆ ಪಡೆಯುವುದು ಅತ್ಯಂತ ಅಗತ್ಯವಿದೆ. ಸ್ವಾತಂತ್ರ್ಯದ ಅಮೃತ ಮಹೋತ್ಸವದ ಪ್ರಯುಕ್ತ, ಜಿಲ್ಲೆಯಾದ್ಯಂತ ೧೮ ವರ್ಷದಿಂದ ೫೯ ವರ್ಷದೊಳಗಿನ ಎಲ್ಲಾ  ಸಾರ್ವಜನಿಕರಿಗೆ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಸೆಪ್ಟಂಬರ್ ೩೦ರವರೆಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯದಲ್ಲಿ ನಿಗದಿತ ಗುರಿಯಲ್ಲಿ ಸಂಪೂರ್ಣ ಪ್ರಗತಿ ಸಾಧಿಸುವಂತೆ ಸಂಬಂಧಪಟ್ಟ ಎಲ್ಲಾ ಅಧಿಕಾರಿಗಳಿಗೂ ನಿರ್ದೇಶನಗಳನ್ನು ನೀಡಲಾಗಿದೆ.
-ಕೂರ್ಮಾರಾವ್ ಎಂ., ಜಿಲ್ಲಾಧಿಕಾರಿ ಉಡುಪಿ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X