ಎನ್ಡಿಎಯಿಂದ ಉಪರಾಷ್ಟ್ರಪತಿ ಚುನಾವಣೆ ಅಭ್ಯರ್ಥಿಯಾಗಿ ಜಗದೀಪ್ ಧಂಕರ್: ಜೆಪಿ ನಡ್ಡಾ

ಹೊಸದಿಲ್ಲಿ: ಪಶ್ಚಿಮ ಬಂಗಾಳದ ರಾಜ್ಯಪಾಲ ಜಗದೀಪ್ ಧಂಕರ್ ಅವರು ಭಾರತದ ಉಪರಾಷ್ಟ್ರಪತಿ ಹುದ್ದೆಗೆ ಆಡಳಿತಾರೂಢ ಎನ್‌ಡಿಎ ಅಭ್ಯರ್ಥಿಯಾಗಲಿದ್ದಾರೆ ಎಂದು ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ಇಂದು ಘೋಷಿಸಿದ್ದಾರೆ. "ಎಲ್ಲಾ ಪರಿಗಣನೆಗಳು ಮತ್ತು ಸಮಾಲೋಚನೆಗಳ ನಂತರ, ಕಿಸಾನ್ ಪುತ್ರ (ರೈತರ ಮಗ) ಜಗದೀಪ್ ಧಂಕರ್ ಅವರನ್ನು ಉಪರಾಷ್ಟ್ರಪತಿ ಹುದ್ದೆಗೆ ಎನ್ಡಿಎ ಅಭ್ಯರ್ಥಿಯಾಗಿ ಘೋಷಿಸಲು ನಾವು ನಿರ್ಧರಿಸಿದ್ದೇವೆ" ಎಂದು ಅವರು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.
ದಿಲ್ಲಿಯ ಪ್ರಧಾನ ಕಛೇರಿಯಲ್ಲಿ ನಡೆದ ಭಾರತೀಯ ಜನತಾ ಪಕ್ಷದ (ಬಿಜೆಪಿ) ಸಂಸದೀಯ ಮಂಡಳಿ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ನಿತಿನ್ ಗಡ್ಕರಿ ಮತ್ತು ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರಂತಹ ಹಲವಾರು ಉನ್ನತ ನಾಯಕರು ಸಭೆಯಲ್ಲಿ ಉಪಸ್ಥಿತರಿದ್ದರು.
Next Story





