Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಡೆದರೆ...

ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಡೆದರೆ ಅಧಿಕಾರಿಗಳೇ ಹೊಣೆ: ಆರಗ ಜ್ಞಾನೇಂದ್ರ ಎಚ್ಚರಿಕೆ

ವಾರ್ತಾಭಾರತಿವಾರ್ತಾಭಾರತಿ16 July 2022 8:31 PM IST
share
ಕಾರಾಗೃಹಗಳಲ್ಲಿ ಅಕ್ರಮ ಚಟುವಟಿಕೆ ನಡೆದರೆ ಅಧಿಕಾರಿಗಳೇ ಹೊಣೆ: ಆರಗ ಜ್ಞಾನೇಂದ್ರ ಎಚ್ಚರಿಕೆ

ಬೆಂಗಳೂರು, ಜು. 16: ‘ಕಾರಾಗೃಹಗಳಲ್ಲಿ ಯಾವುದೇ ರೀತಿಯ ಕಾನೂನುಬಾಹಿರ ಚಟುವಟಿಕೆಗಳು ನಡೆದರೆ ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳನ್ನೆ ಹೊಣೆ ಮಾಡಲಾಗುವುದು' ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಇಂದಿಲ್ಲಿ ಎಚ್ಚರಿಕೆ ನೀಡಿದ್ದಾರೆ.

ಶನಿವಾರ ವಿಕಾಸಸೌಧದಲ್ಲಿ ‘ಕಾರಾಗೃಹ ಅಭಿವೃದ್ಧಿ ಮಂಡಳಿ'ಯ ಸಭೆ ನಡೆಸಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ‘ಬೆಂಗಳೂರಿನ ಪರಪ್ಪನ ಅಗ್ರಹಾರ, ಬೆಳಗಾವಿಯ ಹಿಂಡಲಗ, ಬಳ್ಳಾರಿ ಕೇಂದ್ರ ಕಾರಾಗೃಹಗಳಲ್ಲಿ ಮೊಬೈಲ್ ಬಳಕೆ ಮತ್ತು ಮಾದಕ ವಸ್ತುಗಳ ಪೂರೈಕೆ ಸೇರಿದಂತೆ ಅಕ್ರಮ ಚಟುವಟಿಕೆಗಳ ಬಗ್ಗೆ ಮಾಧ್ಯಮಗಳ ವರದಿಗಳ ಹಿನ್ನೆಲೆಯಲ್ಲಿ ಅವುಗಳ ನಿಯಂತ್ರಣಕ್ಕೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕೆಂದು ಸೂಚನೆ ನೀಡಲಾಗಿದೆ' ಎಂದರು.

‘ಅಪರಾಧ ಕೃತ್ಯಗಳನ್ನು ಎಸಗಿದ ಕೈದಿಗಳಿಗೆ ಮದ್ಯ, ಮಾದಕ ದ್ರವ್ಯ ಹಾಗೂ ಮೊಬೈಲ್ ಸೇರಿದಂತೆ ಇನ್ನಿತರ ಸವಲತ್ತುಗಳನ್ನು ನೀಡಲಾಗುತ್ತದೆ. ಕೆಲವು ಸಂದರ್ಭಗಳಲ್ಲಿ ಕೈದಿಗಳು ಜೈಲಿನಲ್ಲೇ ಹುಟ್ಟುಹಬ್ಬ ಆಚರಣೆ ಮಾಡಿಕೊಳ್ಳುವುದು ಬೆಳಕಿಗೆ ಬಂದಿದೆ. ಅಧಿಕಾರಿಗಳಿಂದ ಸರಕಾರಕ್ಕೆ ಕೆಟ್ಟ ಹೆಸರು ಬರುವಂತೆ ಆಗಿದೆ' ಎಂದು ಆರಗ ಜ್ಞಾನೇಂದ್ರ, ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆನ್ನಲಾಗಿದೆ.

‘ಹರ್ಷನ ಕೊಲೆ ಪ್ರಕರಣದ ಆರೋಪಿಗಳಿಗೆ ಪರಪ್ಪನ ಅಗ್ರಹಾರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ಮಾಡಲು ಅವಕಾಶ ನೀಡಿದವರು ಯಾರು? ಒಬ್ಬ ಅಪರಾಧಿ ಇಲ್ಲಿ ಇರಬೇಕಾದರೆ ಆತನು ತಾನು ಮಾಡಿದ್ದು ತಪ್ಪು ಎಂದು ಮನಃಪರಿವರ್ತನೆಯಾಗಬೇಕು. ಆದರೆ, ಕಾರಾಗೃಹಗಳಲ್ಲಿ ನಡೆಯುತ್ತಿರುವುದು ಅಧಿಕಾರಿಗಳಿಗೆ ಶೋಭೆ ತರುವುದಿಲ್ಲ' ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

‘ಬಿಗಿ ಬಿಗಿಬಂದೋಸ್ತ್ ಕಲ್ಪಿಸಲಾಗಿದ್ದರೂ ಕೈದಿಗಳಿಗೆ ಎಲ್ಲ ಸವಲತ್ತುಗಳು ಹೇಗೆ ಸಿಗುತ್ತಿವೆ. ಇದಕ್ಕೆ ಯಾರನ್ನು ಹೊಣೆ ಮಾಡಬೇಕು? ಕೈದಿಗಳನ್ನು ನೋಡಲು ಬರುವ ಸಂಬಂಧಿಕರೇ?' ಎಂದು ಪ್ರಶ್ನಿಸಿದ ಅವರು, ‘ಪೊಲೀಸ್ ಅಧಿಕಾರಿಗಳ ಸಹಕಾರವಿಲ್ಲದೆ ಇಂತಹ ಚಟುವಟಿಕೆಗಳು ನಡೆಯಲು ಸಾಧ್ಯವೇ ಇಲ್ಲ' ಎಂದು ಎಚ್ಚರಿಸಿದರು ಎಂದು ಮೂಲಗಳು ತಿಳಿಸಿವೆ.

‘ಕೈದಿಗಳನ್ನು ನೋಡಲು ಬರುವ ಸಂಬಂಧಿಕರನ್ನು ತಪಾಸಣೆ ನಡೆಸಿ ಒಳಗೆ ಬಿಡಬೇಕು. ಇತ್ತೀಚೆಗೆ ಇಬ್ಬರು ಮಹಿಳೆಯರೇ ಮಾದಕ ದ್ರವ್ಯವನ್ನು ತಂದು ಸಿಕ್ಕಿಬಿದ್ದಿರುವುದು ಮಾಧ್ಯಮಗಳಲ್ಲಿ ವರದಿಯಾಗಿದೆ. ಇದಕ್ಕೆ ಕುಮ್ಮಕ್ಕು ಕೊಟ್ಟ ಅಧಿಕಾರಿಗಳ ಮೇಲೆ ಶಿಸ್ತುಕ್ರಮ ಜರುಗಿಸಿಲ್ಲ ಏಕೆ' ಎಂದು ಪ್ರಶ್ನಿಸಿದ್ದಾರೆ.

‘ಹಿರಿಯ ಅಧಿಕಾರಿಗಳು ಪ್ರತಿ ತಿಂಗಳು ಎಲ್ಲ ಬಂದೀಖಾನೆಗಳಿಗೆ ಖುದ್ದು ಭೇಟಿ ನೀಡಬೇಕು. ಪ್ರತಿಯೊಂದು ಜೈಲಿನಲ್ಲಿ ಮೊಬೈಲ್ ಜಾಮರ್ ಅಳವಡಿಕೆ, ಕೈದಿಗಳನ್ನು ನೋಡಲು ಬರುವ ಸಂಬಂಧಿಕರನ್ನು ಕಟ್ಟುನಿಟ್ಟಾಗಿ ತಪಾಸಣೆ ನಡೆಸಿಯೇ ಒಳಗೆ ಬಿಡುವುದು ಸೇರಿದಂತೆ ಅಗತ್ಯ ಸುಧಾರಣೆ ಕ್ರಮ ಕೈಗೊಳ್ಳಬೇಕು ಎಂದು ಅವರು ನಿರ್ದೇಶನ ನೀಡಿದ್ದಾರೆಂದು ಗೊತ್ತಾಗಿದೆ.

‘ಪಿಎಸ್ಸೈ ಅಕ್ರಮ ನೇಮಕಾತಿ ಪ್ರಕರಣಕ್ಕೆ ಸಂಬಂಧಿಸಿದಂತೆ ನಿಷ್ಪಕ್ಷಪಾತವಾಗಿ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಕಾಲದಲ್ಲಿ ಎಷ್ಟು ದುರ್ನಾತ ಬಡಿಯುತ್ತಿತ್ತು ಎಂಬ ಬಗ್ಗೆ ನಾನು ದಾಖಲೆ ನೀಡಬಲ್ಲೆ. ದೇಶದಲ್ಲೇ ಮೊದಲ ಬಾರಿಗೆ ಎಡಿಜಿಪಿ ದರ್ಜೆ ಅಧಿಕಾರಿಯನ್ನು ಬಂಧಿಸಿದ್ದು, ಅಕ್ರಮದ ತನಿಖೆಯನ್ನು ಅತ್ಯಂತ ಗಂಭೀರವಾಗಿ ತನಿಖೆ ನಡೆಸಲಾಗುತ್ತಿದೆ. ಇದರಲ್ಲಿ ಯಾರೇ ಭಾಗಿಯಾದರೂ ಸುಮ್ಮನೆ ಬಿಡುವುದಿಲ್ಲ'
-ಆರಗ ಜ್ಞಾನೇಂದ್ರ, ಗೃಹ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X