ಜೀವಮಾನ ಸಾಧನೆ, ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿ: ಅರ್ಜಿ ಆಹ್ವಾನ
ಉಡುಪಿ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿರಿಯ ಕ್ರೀಡಾಪಟು ಹಾಗೂ ತರಬೇತುದಾರ ರಾಗಿ ಸಾಧನೆ ಮಾಡಿರುವ ರಾಜ್ಯದ ಕ್ರೀಡಾಪಟುಗಳಿಂದ ಜೀವಮಾನ ಸಾಧನೆ ಪ್ರಶಸ್ತಿಗೆ ಹಾಗೂ ಗ್ರಾಮೀಣ ಪ್ರತಿಭೆಗಳಿಗೆ ಪ್ರೋತ್ಸಾಹ ನೀಡಲು ಕರ್ನಾಟಕ ಕ್ರೀಡಾರತ್ನ ಪ್ರಶಸ್ತಿಗೆ ಸೇವಾಸಿಂಧು ವೆಬ್‌ಸೈಟ್ -https://sevasindhu.karnataka.gov.in-ರಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್ ೧೦ ಕೊನೆಯ ದಿನ. ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಉಡುಪಿ ದೂ.ಸಂಖ್ಯೆ: ೦೮೨೦-೨೫೨೧೩೨೪, ಮೊ.ನಂ: ೯೪೮೦೮೮೬೪೬೭ಅನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
Next Story