ನಾಗರಿಕರು ಪ್ರಾಣಿ, ಪರಿಸರ ರಕ್ಷಣೆಯ ರಾಯಭಾರಿಗಳಂತೆ ಕೆಲಸ ಮಾಡಬೇಕು: ದ.ಕ.ಜಿಲ್ಲಾಧಿಕಾರಿ

ಮಂಗಳೂರು: ಪ್ರತಿಯೊಬ್ಬ ನಾಗರಿಕರು ಪ್ರಾಣಿ ಹಾಗೂ ಪರಿಸರ ರಕ್ಷಣೆಯ ರಾಯಭಾರಿಗಳಂತೆ ಕಾರ್ಯ ನಿರ್ವಹಿಸಬೇಕು ಎಂದು ದ.ಕ. ಜಿಲ್ಲಾಧಿಕಾರಿಡಾ.ರಾಜೇಂದ್ರ ಕೆ.ವಿ. ಕರೆ ನೀಡಿದರು.
ದ.ಕ.ಜಿಲ್ಲಾ ಪ್ರಾಣಿದಯಾ ಸಂಘ ಮತ್ತು ಎಸ್‌ಡಿಎಂ ಕಾನೂನು ಕಾಲೇಜು ಹಾಗೂ ಮಂಗಳೂರು ಸ್ನಾತಕೋತ್ತರ ಅಧ್ಯಯನ ಮತ್ತು ಸಂಶೋಧನಾ ಕೇಂದ್ರದ ಸಂಯುಕ್ತಾಶ್ರಯದಲ್ಲಿ ನಗರದ ಎಸ್‌ಡಿಎಂ ಕಾನೂನು ಕಾಲೇಜಿನಲ್ಲಿ ಶನಿವಾರ ನಡೆದ ಪ್ರಾಣಿ ರಕ್ಷಾ ಜಾಗೃತಿ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಪ್ರಕೃತಿ ವಿಕೋಪ ಸಂಭವಿಸಿದಾಗ ಸಂಕಷ್ಟಕ್ಕೆ ಸಿಲುಕಿದ ಮನುಷ್ಯರ ರಕ್ಷಣೆಗೆ ಮುಂದಾದಂತೆ ಸಂಕಷ್ಟಕ್ಕೆ ಸಿಲುಕುವ ಮೂಕ ಪ್ರಾಣಿಗಳ ರಕ್ಷಣೆಗೂ ಮುಂದಾಗಬೇಕು. ಕಾಡುಪ್ರಾಣಿ, ಪಕ್ಷಿಗಳು ಹಾಗೂ ನೈಸರ್ಗಿಕ ಸಂಪತ್ತಿನ ಜವಾಬ್ದಾರಿಯ ಅರಿವನ್ನು ಮಕ್ಕಳಲ್ಲಿ ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ನುಡಿದರು.
ಪಶುಪಾಲನಾ ಮತ್ತು ಪಶು ವೈದ್ಯಕೀಯ ಸೇವಾ ಇಲಾಖೆಯ ಉಪ ನಿರ್ದೇಶಕ ಡಾ.ಪ್ರಸನ್ನ ಕುಮಾರ್, ಮುಖ್ಯ ಪಶು ವೈದ್ಯಾಧಿಕಾರಿಡಾ. ವಸಂತ ಕುಮಾರ್ ಶೆಟ್ಟಿ, ಸಂಪನ್ಮೂಲ ವ್ಯಕ್ತಿಗಳಾದ ದಿನೇಶ್ ಪೈ, ಶಶಿಧರ್ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.





