Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಏರುತ್ತಿರುವ ನೆರೆ : ಉತ್ತರ ಕನ್ನಡ...

ಏರುತ್ತಿರುವ ನೆರೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ

ವಾರ್ತಾಭಾರತಿವಾರ್ತಾಭಾರತಿ16 July 2022 10:19 PM IST
share
ಏರುತ್ತಿರುವ ನೆರೆ : ಉತ್ತರ ಕನ್ನಡ ಜಿಲ್ಲೆಯಲ್ಲಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಪ್ರವಾಸ

ಭಟ್ಕಳ; ಸತತವಾಗಿ ಸುರಿಯುತ್ತಿರುವ ಮಳೆಯಿಂದ ವ್ಯಾಪಕವಾಗಿ ನೆರೆ ಏರುತ್ತಿರುವ ಹಿನ್ನೆಲೆಯಲ್ಲಿ ಕದ್ರಾ ಡ್ಯಾಂ ತುಂಬಿದ್ದು, ನೀರನ್ನು ಹೊರಬಿಡುವ ಹಿನ್ನೆಲೆಯಲ್ಲಿ ಮತ್ತು ವಿವಿಧೆಡೆ ಸುರಿಯುತ್ತಿರುವ ಭಾರೀ ಮಳೆಯಿಂದ ಉತ್ತರ ಕನ್ನಡ ಜಿಲ್ಲೆಯಾದ್ಯಂತ ಪ್ರವಾಹ ಪರಿಸ್ಥಿತಿ ಉದ್ಭವಿಸಿದ್ದು ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭಟ್ಕಳ, ಕುಮಟಾ, ಹೊನ್ನಾವರ ಸೇರಿದಂತೆ ಜಿಲ್ಲೆಯಾದ್ಯಂತ ಬಿರುಸಿನ ಪ್ರವಾಸ ಕೈಗೊಂಡು ಪ್ರವಾಹ ಪರಿಸ್ಥಿತಿಯನ್ನು ಅವಲೋಕಿಸಿದರು.

ಭಟ್ಕಳದ ಮಿನಿ ವಿಧಾನಸೌಧದಲ್ಲಿ ಹಾಗೂ ಕುಮಟಾ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆದ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ಹಿರಿಯ ಅಧಿಕಾರಿಗಳ ಸಭೆಯಲ್ಲಿ ಶಾಸಕ ಸುನಿಲ್ ನಾಯ್ಕ್ ಮತ್ತು ದಿನಕರ ಶೆಟ್ಟಿಯವರ ಜೊತೆಗೆ ಸುದೀರ್ಘವಾಗಿ ಚರ್ಚಿಸಿದ ಸಚಿವ ಕೋಟ ಪ್ರತೀ ಗ್ರಾಮ ಪಂಚಾಯತ್ ನೋಡಲ್ ಅಧಿಕಾರಿಗಳೊಂದಿಗೆ ಇನ್ನು ಮುಂದೆ ಪಂಚಾಯತ್ ಅಭಿವೃದ್ಧಿ ಅಧಿಕಾರಿಯನ್ನು ಕೂಡಾ ಜಂಟಿಯಾಗಿ ನೋಡಲ್ ಅಧಿಕಾರಿಗಳಾಗಿ ಆದೇಶ ಹೊರಡಿಸಿ ಎಂದು ಸೂಚನೆ ನೀಡಿದರು.

ಎಂತಹ ಪರಿಸ್ಥಿತಿಯಲ್ಲೂ ಕೂಡಾ ಜನರು ಕಾಳಜಿ ಕೇಂದ್ರಕ್ಕೆ ಬಂದರೆ ಉತ್ತಮ ಗುಣಮಟ್ಟದ ಊಟ, ಉಪಾಹಾರ, ವಸತಿ ಸೇರಿದಂತೆ ಸಂತ್ರಸ್ತ ಕುಟುಂಬಕ್ಕೆ ಅಗತ್ಯವಾದ ಆಹಾರ ವಸ್ತುಗಳನ್ನು ಸರಬರಾಜು ಮಾಡಲು ನಿರ್ದೇಶಿಸಿದರು. ಪ್ರತೀ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಬಿದ್ದಿರುವ ಮನೆಗಳು, ನೀರು ನುಗ್ಗಿರುವ ವಸತಿ ವ್ಯವಸ್ಥೆಗಳು, ಶಾಲಾ - ಕಾಲೇಜು, ಅಂಗನವಾಡಿ ಮುಂತಾದವುಗಳಿಗೆ ನುಗ್ಗಿದ ನೀರಿನ ಪ್ರಮಾಣ ಇವುಗಳ ಬಗ್ಗೆ ಗ್ರಾಮ ಪಂಚಾಯತಿವಾರು ಸಮಗ್ರ ಮಾಹಿತಿ ಪಡೆದ ಸಚಿವ ಕೋಟ ಎಲ್ಲಾ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ದಿನದ 24 ಗಂಟೆ ದೂರವಾಣಿ ಕರೆಗಳನ್ನು ಸ್ವೀಕರಿಸಿ ಸಾರ್ವಜನಿಕರ ನೆರವಿಗೆ ಧಾವಿಸಿ ತಮ್ಮ ತಮ್ಮ ಜವಾಬ್ದಾರಿ ನಿರ್ವಹಿಸುವಂತೆ ಸೂಚನೆ ನೀಡಿದರು.

ಸ್ವತಃ ಸಚಿವ ಕೋಟ ಶಾಸಕರು ಮತ್ತು ಹಿರಿಯ ಅಧಿಕಾರಿಗಳೊಂದಿಗೆ ಉತ್ತರ ಕನ್ನಡ ಜಿಲ್ಲೆಯ ನೆರೆಪೀಡಿತ ಗ್ರಾಮಗಳಾದ ಕಡಗೇರಿ, ನಾತಾಗೇರಿ, ಚಿಕ್ಕನಕೋಡು, ಮುಟ್ಟ, ಹಾಡಗೇರಿ, ಗುಂಡಿಬೈಲ್, ಹಡಿನಬಾಳ ಗ್ರಾಮಗಳಿಗೆ ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು. ಜಿಲ್ಲೆಯಾದ್ಯಂತ ಏರುತ್ತಿರುವ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ಜಿಲ್ಲಾಡಳಿತ ಸಜ್ಜಾಗಿದ್ದು ಸಾರ್ವಜನಿಕರಿಗೆ ಯಾವುದೇ ಆತಂಕ ಬೇಡ ಎಂದು ಸಚಿವ ಕೋಟ ಸ್ಪಷ್ಟಪಡಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X