Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ವಿದ್ಯಾರ್ಥಿ ಚಳುವಳಿಗಳು ನೈಜ...

ವಿದ್ಯಾರ್ಥಿ ಚಳುವಳಿಗಳು ನೈಜ ನಾಯಕತ್ವವನ್ನು ಬೆಳೆಸಬೇಕಿದೆ: ಪ್ರೊ. ಚಂದ್ರ ಪೂಜಾರಿ

ಎಸ್‌ಎಫ್‌ಐ ದ.ಕ.ಜಿಲ್ಲಾ ಮಟ್ಟದ ಅಧ್ಯಯನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ16 July 2022 10:24 PM IST
share
ವಿದ್ಯಾರ್ಥಿ ಚಳುವಳಿಗಳು ನೈಜ ನಾಯಕತ್ವವನ್ನು ಬೆಳೆಸಬೇಕಿದೆ: ಪ್ರೊ. ಚಂದ್ರ ಪೂಜಾರಿ

ಮಂಗಳೂರು, ಜು.೧೬: ಭಾರತಕ್ಕೆ ನೈಜ ನಾಯಕತ್ವದ ಕೊರತೆ ಇದೆ. ವಿದ್ಯಾರ್ಥಿ ಚಳುವಳಿಗಳು ನೈಜ ನಾಯಕರನ್ನು ಬೆಳೆಸಬೇಕಾಗಿದೆ. ಅದಕ್ಕಾಗಿ ನಾಯಕತ್ವ ಗುಣಗಳನ್ನು ಯುವ ಸಮುದಾಯದ ನಡುವೆ ಬಿತ್ತರಿಸುವ ಅಗತ್ಯವೂ ಇದೆ ಎಂದು ಹಂಪಿ ವಿಶ್ವವಿದ್ಯಾನಿಲಯದ ನಿವೃತ್ತ ಪ್ರಾಧ್ಯಾಪಕ ಪ್ರೊ. ಚಂದ್ರ ಪೂಜಾರಿ ಅಭಿಪ್ರಾಯಪಟ್ಟರು.

ಸಮಾನ ಗುಣಮಟ್ಟದ ಶಿಕ್ಷಣಕ್ಕಾಗಿ ಮತ್ತು ವಿದ್ಯಾರ್ಥಿಗಳ ಐಕ್ಯತೆಗಾಗಿ ಭಾರತ ವಿದ್ಯಾರ್ಥಿ ಫೆಡರೇಶನ್ (ಎಸ್‌ಎಫಐ) ದ.ಕ.ಜಿಲ್ಲಾ ಸಮಿತಿಯು ನಗರದ ಬೋಳಾರದ ಎಕೆಜಿ ಭವನದಲ್ಲಿ ಆಯೋಜಿಸಿರುವ ಜಿಲ್ಲಾ ಮಟ್ಟದ ಅಧ್ಯಯನ ಶಿಬಿರವನ್ನು ಶನಿವಾರ ಉದ್ಘಾಟಿಸಿ  ಅವರು ಮಾತನಾಡಿದರು.

ಕನಿಕರವು ನಾಯಕತ್ವದ ನಿಜವಾದ ಗುಣವಲ್ಲ ಮತ್ತೊಬ್ಬರ ಜಾಗದಲ್ಲಿ ನಿಂತು ಯೋಚಿಸುವುದೇ ನಾಯಕತ್ವದ ಬಹು ದೊಡ್ಡ ಗುಣವಾಗಿದೆ. ಸತ್ಯ ಯಾವುದು, ಬಹುತೇಕರ ಆಸಕ್ತಿಗೆ ಪೂರಕವಾದದ್ದು ಯಾವುದು, ಯಾರ ಮೇಲೆ ದಬ್ಬಾಳಿಕೆಗಳು ಆಗುತ್ತಿವೆ, ಯಾರ ಮೇಲೆ ಯಜಮಾನಿಕೆ, ಅನ್ಯಾಯ, ದೌರ್ಜನ್ಯ ಆಗುತ್ತಿದೆ ಎಂಬ ಅರಿವು ಬೇಕಾಗಿದೆ. ಅಲ್ಲದೆ ಅವುಗಳನ್ನು ಪ್ರಶ್ನಿಸುವ ಧೈರ್ಯ ಮತ್ತು ಪ್ರಾಮಾಣಿಕತೆ ನಾಯಕನಿಗಿರಬೇಕು. ನಾಯಕನಿಗೆ ಮತ್ತೊಬ್ಬರನ್ನು ಅರ್ಥ ಮಾಡಿಕೊಳ್ಳುವ ಮನಸ್ಸು ಇರಬೇಕು. ಆದರೆ ಇಂದಿನ ನಾಯಕರೆನ್ನುವ ರಾಜಕಾರಣಿಗಳಲ್ಲಿ ಈ ಯಾವ ಗುಣಗಳು ಇಲ್ಲ ಎಂದರು.

ಬೆಳಗಾವಿನಲ್ಲಿ ನೆರೆಯಿಂದ ಜನ ಕಷ್ಟಪಡುತ್ತಿರುವಾಗ ಪ್ರಧಾನಿ ಬೆಂಗಳೂರಿಗೆ ಆಗಮಿಸಿ ಉದ್ಘಾಟನೆ ಮತ್ತಿತರ ಕಾರ್ಯಕ್ರಮದಲ್ಲಿ ಭಾಗವಹಿಸಿ ದೆಹಲಿಗೆ ಮರಳುತ್ತಾರೆ. ಆದರೆ ಬೆಳಗಾವಿಯ ನೆರೆಪೀಡಿತ ಪ್ರದೇಶಗಳಿಗೆ ಭೇಟಿ ನೀಡಬೇಕು ಮತ್ತು ಅಲ್ಲಿನ ಜನರ ನೋವುಗಳಿಗೆ ಸ್ಪಂದಿಸಬೇಕೆಂದು ಪ್ರಧಾನಿಗೆ ಅನಿಸಲೇ ಇಲ್ಲ ಎಂದ ಪ್ರೊ. ಚಂದ್ರ ಪೂಜಾರಿ ಭಾರತದ ಶಿಕ್ಷಣದಲ್ಲೂ ಸಮಾನತೆ ಇಲ್ಲ. ಕೇಂದ್ರೀಯ ವಿದ್ಯಾಲಯಗಳಲ್ಲಿರುವ ಗುಣಮಟ್ಟದ ಶಿಕ್ಷಣವು ಸರಕಾರಿ ಶಾಲೆಗಳಲ್ಲಿ ಸಿಗುತ್ತಿಲ್ಲ. ಇನ್ನುಳಿದಂತೆ ಖಾಸಗಿ ಕಾಲೇಜುಗಳ ಸ್ಥಿತಿ ಬೇರೆಯೇ ಇದೆ. ಹಾಗಾಗಿ ಇಲ್ಲಿನ ಬಹುತೇಕರು ಪಡೆಯುತ್ತಿರುವ ಶಿಕ್ಷಣವು ಕೆಲವೇ ಕೆಲವು ನಾಯಕರುಗಳಿಗೆ ದುಡಿಮೆಗಾರರನ್ನು ಸೃಷ್ಟಿ ಮಾಡುವ ಶಿಕ್ಷಣವಾಗಿದೆಯೇ ಹೊರತು ನಾಯಕರನ್ನು ಸೃಷ್ಟಿ ಮಾಡುವ ಶಿಕ್ಷಣಗಳಲ್ಲ ಎಂದರು.

ಎಸ್‌ಎಫ್‌ಐ ರಾಜ್ಯ ಮುಖಂಡ ಭೀಮನಗೌಡ, ಜಿಲ್ಲಾ ಮುಖಂಡರಾದ ಮಾಧುರಿ ಬೋಳಾರ, ವಿನುಷಾ ರಮಣ, ವಿನೀತ್ ದೇವಾಡಿಗ, ಎಸ್‌ಎಫ್‌ಐ ನ ಮಾಜಿ ಜಿಲ್ಲಾ ಕಾರ್ಯದರ್ಶಿ ಮನೋಜ್ ವಾಮಂಜೂರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X