Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ...

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಕೇಂದ್ರದಿಂದ 24 ಹೊಸ ವಿಧೇಯಕಗಳ ಮಂಡನೆ

ವಾರ್ತಾಭಾರತಿವಾರ್ತಾಭಾರತಿ16 July 2022 11:12 PM IST
share

ಹೊಸದಿಲ್ಲಿ, ಜು. 16: ಸಂಸತ್ತಿನ ಮುಂಗಾರು ಅಧಿವೇಶನದ ಸಂದರ್ಭ ಮಂಡಿಸಲು ಪಟ್ಟಿ ಮಾಡಲಾದ ವಿಧೇಯಕಗಳಲ್ಲಿ ಬಹು ರಾಜ್ಯ ಕೋ-ಆಪರೇಟಿವ್ ಸೊಸೈಟಿಗಳ (ತಿದ್ದುಪಡಿ)ವಿಧೇಯಕ, ದಿವಾಳಿತನ ಸಂಹಿತೆ (ತಿದ್ದುಪಡಿ) ವಿಧೇಯಕ, ಪತ್ರಿಕೆ ಹಾಗೂ ನಿಯಂತಕಾಲಿಕಗಳ ನೋಂದಣಿ ವಿಧೇಯಕ-2022, ಮಾನವ ಸಾಗಾಟ (ರಕ್ಷಣೆ, ಪಾಲನೆ ಹಾಗೂ ಪುನರ್ವಸತಿ) ವಿಧೇಯಕ-2022 ಹಾಗೂ ಪ್ರಾಚೀನ ಸ್ಮಾರಕಗಳು,  ಪುರಾತತ್ವ ನಿವೇಶನ ಮತ್ತು ಅವಶೇಷ (ತಿದ್ದುಪಡಿ) ವಿಧೇಯ-2022 ಸೇರಿವೆ. 

ಬಹು ರಾಜ್ಯ ಕೋ-ಆಪರೇಟಿವ್ ಸೊಸೈಟಿ (ತಿದ್ದುಪಡಿ) ವಿಧೇಯಕ ಕೋ-ಆಪರೇಟಿವ್‌ಗಳಲ್ಲಿ ಸರಕಾರದ ಪಾತ್ರವನ್ನು ತರ್ಕಬದ್ಧಗೊಳಿಸಲು ಹಾಗೂ ಬಹು ರಾಜ್ಯ ಕೋ-ಆಪರೇಟಿವ್ ಸೊಸೈಟಿಗಳ  ಕಾರ್ಯನಿರ್ವಹಣೆಯಲ್ಲಿ ಭಾಗೀದಾರಿಕೆಯನ್ನು ಹೆಚ್ಚಿಸಲು ಬಯಸುತ್ತದೆ. 
ಅದೇ ರೀತಿ ದೀವಾಳಿತನದ ಸಂಹಿತೆ (ತಿದ್ದುಪಡಿ) ವಿಧೇಯಕ ಗಡಿಯಾಚೆಗಿನ ದಿವಾಳಿತನದ ನಿಬಂಧನೆಗಳನ್ನು ಪರಿಚಯಿಸುವ ಮೂಲಕ ದಿವಾಳಿತನದ ಸಂಹಿತೆಯನ್ನು ಬಲಪಡಿಸಲು ಬಯಸುತ್ತದೆ. ಇತರ ತಿದ್ದುಪಡಿಗಳು ಒತ್ತಡದಲ್ಲಿರುವ ಆಸ್ತಿಗಳು ಹಾಗೂ ಅದರ ಮೌಲ್ಯವನ್ನು ಗರಿಷ್ಠಗೊಳಿಸಲು ಕಾಲಮಿತಿಯ ನಿರ್ಧಾರವನ್ನು ಬಯಸುತ್ತದೆ. 

ಸಣ್ಣ ಹಾಗೂ ಮಧ್ಯಮ ಪ್ರಕಾಶಕರ ದೃಷ್ಟಿಕೋನದಿಂದ ಅಸ್ತಿತ್ವದಲ್ಲಿರುವ ಕಾಯಿದೆಯ ಕಾರ್ಯ ವಿಧಾನವನ್ನು ಸರಳಗೊಳಿಸಲು,  ಪತ್ರಿಕಾ ಸ್ವಾತಂತ್ರ್ಯದ ಮೌಲ್ಯವನ್ನು ಎತ್ತಿ ಹಿಡಿಯಲು ಹಾಗೂ ನಿರಪರಾಧಿಕರಣಗೊಳಿಸಲು ಪತ್ರಿಕೆ ಹಾಗೂ ಪುಸ್ತಕ ನೋಂದಣಿ (ಪಿಆರ್‌ಬಿ)ಕಾಯೆ-1867ರ ಬದಲಿಗೆ ಹೊಸ ವಿಧೇಯಕ ಬಯಸುತ್ತಿದೆ.  ಪ್ರಸ್ತಾವಿತ ವಿಧೇಯಕ ಪತ್ರಿಕಾ ಪ್ರಧಾನ ನೋಂದಣಿ ಆರಂಭಿಸಲು ಹಾಗೂ ಡಿಜಿಟಲ್ ಮಾಧ್ಯಮವನ್ನು ತನ್ನ ವ್ಯಾಪ್ತಿಗೆ ತರಲು ಅವಕಾಶ ನೀಡುತ್ತದೆ. 

ಸಣ್ಣ ಪ್ರಕಾಶಕರು ಮತ್ತು ಡಿಜಿಟಲ್ ಮಾಧ್ಯಮವನ್ನು ನಿಯಂತ್ರಿಸಲು ಈ ವಿಧೇಯಕವನ್ನು ಮಂಡಿಸಲಾಗುತ್ತಿದೆ ಎಂದು ಹೇಳಲಾಗುತ್ತಿರುವುದರಿಂದ ಈ ಮಸೂದೆಗೆ ತೀವ್ರ ವಿರೋಧ ವ್ಯಕ್ತವಾಗುವ ಸಾಧ್ಯತೆ ಇದೆ. ದೇಶದಲ್ಲಿ ಭಿನ್ನಾಭಿಪ್ರಾಯ ಧ್ವನಿಯನ್ನು ಹತ್ತಿಕ್ಕಲು ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಪ್ರತಿಪಕ್ಷಗಳು ಈಗಾಗಲೇ ಆರೋಪಿಸಿವೆ. 
ಕಳೆದ ವರ್ಷ ಮುಂಗಾರು ಅಧಿವೇಶನ ತೀವ್ರ ಚರ್ಚೆಯೊಂದಿಗೆ ಅವಧಿಗಿಂತ ಎರಡು ದಿನ ಮುಂಚಿತವಾಗಿ ಕೊನೆಗೊಂಡಿತ್ತು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X