Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಸಿನಿಮಾ
  4. ʼನೀನು ಎಡಚರನಾ? ಗುಲಾಮನಾ?ʼ: ರಕ್ಷಿತ್‌...

ʼನೀನು ಎಡಚರನಾ? ಗುಲಾಮನಾ?ʼ: ರಕ್ಷಿತ್‌ ಶೆಟ್ಟಿ ಮೇಲೆ ಮುಗಿಬಿದ್ದ ಸಂಘಪರಿವಾರ ಬೆಂಬಲಿಗರು.!

ವಾರ್ತಾಭಾರತಿವಾರ್ತಾಭಾರತಿ17 July 2022 5:27 PM IST
share
ʼನೀನು ಎಡಚರನಾ? ಗುಲಾಮನಾ?ʼ: ರಕ್ಷಿತ್‌ ಶೆಟ್ಟಿ ಮೇಲೆ ಮುಗಿಬಿದ್ದ ಸಂಘಪರಿವಾರ ಬೆಂಬಲಿಗರು.!

ಬೆಂಗಳೂರು: ಕನ್ನಡದ ನಟ, ನಿರ್ದೇಶಕ ರಕ್ಷಿತ್‌ ಶೆಟ್ಟಿ ಅವರ ಮೇಲೆ ಬಲಪಂಥೀಯ ಹಿಂದುತ್ವವಾದಿಗಳು ಮುಗಿಬಿದ್ದಿದ್ದಾರೆ. ಬಹುಭಾಷಾ ನಟಿ ಸಾಯಿ ಪಲ್ಲವಿ ಅವರ ನೂತನ ಚಿತ್ರ ʼಗಾರ್ಗಿʼ ಯನ್ನು ಕನ್ನಡದಲ್ಲಿ ರಕ್ಷಿತ್‌ ಶೆಟ್ಟಿ ಅವರ ಸಂಸ್ಥೆ ವಿತರಿಸುತ್ತಿದ್ದು, ಚಿತ್ರವನ್ನು ವೀಕ್ಷಿಸುವಂತೆ ರಕ್ಷಿತ್‌ ಶೆಟ್ಟಿ ಪ್ರಚಾರ ನೀಡಿರುವುದು ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿದೆ.

ಇತ್ತೀಚೆಗೆ ಬಿಡುಗಡೆಯಾಗಿದ್ದ ವಿರಾಟ ಪರ್ವಂ ಚಿತ್ರದ ಸಂದರ್ಶನದ ಸಂದರ್ಭದಲ್ಲಿ, ಕಾಶ್ಮೀರ ಹತ್ಯೆ, ಗೋವಿನ ಹೆಸರಿನಲ್ಲಿ ನಡೆಯುವ ಹತ್ಯೆಯನ್ನು ಉಲ್ಲೇಖಿಸಿದ್ದ ಸಾಯಿ ಪಲ್ಲವಿ  ʼಕಾಶ್ಮೀರ ಪಂಡಿತರ ಹತ್ಯೆ ಹಾಗೂ ದನದ ಹೆಸರಿನಲ್ಲಿ ʼಜೈ ಶ್ರೀ ರಾಮ್‌ʼ ಕೂಗಿ ನಡೆಸುವ ಹತ್ಯೆಗಳಿಗೆ ಯಾವುದೇ ವ್ಯತ್ಯಾಸವಿಲ್ಲʼ ಎಂದು ಹೇಳಿರುವುದು ಬಲಪಂಥೀಯ ಹಿಂದುತ್ವವಾದಿಗಳ ಕೆಂಗಣ್ಣಿಗೆ ಗುರಿಯಾಗಿತ್ತು. ಕೆಲವು ಮಾಧ್ಯಮಗಳು ಸಾಯಿ ಪಲ್ಲವಿಯ ಹೇಳಿಕೆಯನ್ನು ತಿರುಚಿ ಗೋಕಳ್ಳರಿಗೆ ನಟಿ ಬೆಂಬಲ ನೀಡಿದ್ದಾರೆ ಎಂದು ವರದಿಯನ್ನು ಮಾಡಿದ್ದವು.

ಅದರ ಬಳಿಕ ಸಾಯಿ ಪಲ್ಲವಿ ಸ್ಪಷ್ಟನೆ ನೀಡಿದ್ದು, ತನ್ನ ಹೇಳಿಕೆಯನ್ನು ಸಮರ್ಥಿಸಿಕೊಂಡು ಸಮಜಾಯಿಷಿ ನೀಡಿದ್ದರು. ಧರ್ಮದ ಹೆಸರಿನಲ್ಲಿ ಯಾರನ್ನೂ ಕೊಲ್ಲಬೇಡಿ ಅಂದದ್ದು ತಪ್ಪು ಹೇಗಾಗುತ್ತದೆ ಎಂದು ಮತ್ತೊಮ್ಮೆ ಪ್ರಶ್ನಿಸಿದ್ದರು. ಅದಾಗ್ಯೂ, ಬಲಪಂಥೀಯರು ನಟಿಯ ವೈಯಕ್ತಿಕ ತೇಜೋವಧೆ ನಡೆಸಿದ್ದರು. ಮುಖದ ಮೇಲಿನ ಮೊಡವೆಯನ್ನು ಮುಂದಿಟ್ಟುಕೊಂಡು ಸಾಯಿ ಪಲ್ಲವಿ ವಿರುದ್ಧ ನಿಂದನಾತ್ಮಕ ಪ್ರತಿಕ್ರಿಯೆಗಳನ್ನು ನೀಡಿದ್ದರು. ಅಲ್ಲದೆ, ಸಾಯಿ ಪಲ್ಲವಿ ಸಿನೆಮಾವನ್ನು ಬಹಿಷ್ಕರಿಸಲು ಕರೆ ನೀಡಿದ್ದರು. ಅದೇ ವೇಳೆ ಸಾಯಿ ಪಲ್ಲವಿ ನಿಲುವಿಗೂ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು ಮಾತ್ರವಲ್ಲ, ಬಲಪಂಥೀಯರ ಬಹಿಷ್ಕಾರದ ಕರೆಗೆ ವ್ಯತಿರಿಕ್ತವಾಗಿ ʼವಿರಾಟ ಪರ್ವಂʼ ಚಿತ್ರ ಗೆದ್ದಿತ್ತು.

ಇದೀಗ, ರಕ್ಷಿತ್‌ ಶೆಟ್ಟಿ ಅವರು ಸಾಯಿ ಪಲ್ಲವಿ ಅಭಿನಯದ ಚಿತ್ರಕ್ಕೆ ಪ್ರಚಾರ ನೀಡಿದ್ದು ಬಲಪಂಥೀಯರ ಕೋಪ ಹೆಚ್ಚಾಗಲು ಕಾರಣವಾಗಿದೆ. ರಮ್ಯಾ, ಸಾಯಿ ಪಲ್ಲವಿ ಮೊದಲಾದ ಪರ ಮಾತನಾಡುವ ರಕ್ಷಿತ್‌ ಶೆಟ್ಟಿ ಎಡಚರ (ಎಡಪಂಥೀಯ)ನಾ? ಅಥವಾ ಗುಲಾಮನಾ? ಎಂದೆಲ್ಲಾ ಬಲಪಂಥೀಯರು ಅವರ ಫೇಸ್‌ಬುಕ್‌ ಪೋಸ್ಟ್‌ನಲ್ಲಿ ಕಾಮೆಂಟ್‌ ಹಾಕುತ್ತಿದ್ದಾರೆ. ಇನ್ನು ಕೆಲವರು ನಿಂದನಾತ್ಮಕ ಪದ ಬಳಕೆ ಮಾಡಿದ್ದು, ರಕ್ಷಿತ್‌ ಶೆಟ್ಟಿ ಸಿನೆಮಾಗಳನ್ನೂ ಬಹಿಷ್ಕರಿಸುವುದಾಗಿ ಎಚ್ಚರಿಸಿದ್ದಾರೆ.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X