Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಶಿಶು ಮರಣ ಪ್ರಮಾಣ ಒಂದಂಕಿಗೆ ಇಳಿಸುವ...

ಶಿಶು ಮರಣ ಪ್ರಮಾಣ ಒಂದಂಕಿಗೆ ಇಳಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ17 July 2022 6:09 PM IST
share
ಶಿಶು ಮರಣ ಪ್ರಮಾಣ ಒಂದಂಕಿಗೆ ಇಳಿಸುವ ಗುರಿ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಜು. 17: ‘ಶಿಶು ಮರಣ ಪ್ರಮಾಣವು ರಾಜ್ಯದಲ್ಲಿ ಶೇ.2ರಷ್ಟಿದ್ದು, ಇದನ್ನು ಒಂದಂಕಿಗೆ ಇಳಿಸುವುದು ನಮ್ಮ ಗುರಿಯಾಗಿದೆ' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಪ್ರಕಟಿಸಿದ್ದಾರೆ.

ರವಿವಾರ ನಗರದ ರೇನ್ಬೋ ಚಿಲ್ಡ್ರನ್ ಹಾಸ್ಪಿಟಲ್ ಆಯೋಜಿಸಿರುವ ಮಕ್ಕಳ ವೈದ್ಯಕೀಯ ಶಾಸ್ತ್ರದಲ್ಲಿನ ವಿಶೇಷ ನವೀಕರಣಗಳ ಕುರಿತ ಸಮ್ಮೇಳನದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ‘ತಾಯಿ ಮರಣ ಪ್ರಮಾಣದಲ್ಲಿಯೂ ಇಳಿಕೆಯಾಗಬೇಕು. ರಾಜ್ಯದ 5-6 ಜಿಲ್ಲೆಗಳ ಕಾರಣದಿಂದ ಈ ಪ್ರಮಾಣ ಇಳಿಕೆಯಾಗುತ್ತಿಲ್ಲ.

ಹೀಗಾಗಿಯೇ ರಾಜ್ಯದ ಇತಿಹಾಸದಲ್ಲಿಯೇ ಪ್ರಥಮ ಬಾರಿಗೆ ಅಭಿವೃದ್ಧಿ ಆಕಾಂಕ್ಷಿ ತಾಲೂಕುಗಳನ್ನು  ಗುರುತಿಸಿ ಶಿಕ್ಷಣ, ಆರೋಗ್ಯ, ಅಪೌಷ್ಟಿಕತೆ, ಮಹಿಳಾ ಮತ್ತು ಮಕ್ಕಳ ಆರೋಗ್ಯದ ಮಾನದಂಡಗಳನ್ನು ಇರಿಸಿಕೊಂಡು ಅಭಿವೃದ್ಧಿಗೆ ಕ್ರಮ ವಹಿಸಲಾಗಿದೆ. ಈ 5 ಜಿಲ್ಲೆಗಳಲ್ಲಿ ಉತ್ತಮ ಸೌಲಭ್ಯಗಳನ್ನು ಒದಗಿಸುವ ಮೂಲಕ ಐಎಂಆರ್ ಇಳಿಕೆ ಮಾಡಲು ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಲಾಗುತ್ತಿದೆ. ಸ್ವಸ್ಥ  ಭವಿಷ್ಯಕ್ಕಾಗಿ ಮಕ್ಕಳ ತಜ್ಞರು ಈ ಕಾರ್ಯದಲ್ಲಿ ನಮ್ಮೊಂದಿಗೆ ಕೈಜೋಡಿಸಬೇಕು' ಎಂದು ಕರೆ ನೀಡಿದರು

ಅಪೌಷ್ಟಿಕತೆ ನಿವಾರಣೆ: ಬಜೆಟ್‍ನಲ್ಲಿ ಶಿಕ್ಷಣ ಮತ್ತು ಆರೋಗ್ಯಕ್ಕೆ ಅನುದಾನವನ್ನು ಹೆಚ್ವಿಸಲಾಗಿದೆ.  ಅಪೌಷ್ಟಿಕತೆ ನಿವಾರಣೆಗೆ ಒತ್ತು ನೀಡಲಾಗಿದೆ. ತೀವ್ರ ಅಪೌಷ್ಟಿಕತೆಯುಳ್ಳ ಮಕ್ಕಳಿಗೆ ನೀಡುವ ಆಹಾರವನ್ನೇ ಸಾಮಾನ್ಯ ಅಪೌಷ್ಟಿಕತೆಯುಳ್ಳ ಮಕ್ಕಳಿಗೂ ನೀಡಲಾಗುತ್ತಿದೆ. ಅಂಗನವಾಡಿಗಳಲ್ಲಿ ಮಕ್ಕಳಿಗೆ ಉತ್ತಮ ಆಹಾರ ನೀಡುತ್ತಿರುವುದಲ್ಲದೆ, ಕಾರ್ಮಿಕರ ಮಕ್ಕಳಿಗೂ ವಿಶೇಷ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ನಮ್ಮದು ಸೂಕ್ಷ್ಮ ಚಿಂತನೆಗಳುಳ್ಳ ಸರಕಾರ. ಬಡತನ ನಿರ್ಮೂಲನೆಗೆ ಕ್ರಮ ವಹಿಸಲಾಗಿದೆ' ಎಂದು ಹೇಳಿದರು.

‘ಶಿಕ್ಷಣ, ಮೂಲ ಸೌಕರ್ಯ ಸೇರಿದಂತೆ ತಾಂತ್ರಿಕ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ತಾಂತ್ರಿಕ ಆಧಾರಿತ ರಾಜ್ಯ ನಮ್ಮದು. ಹಳ್ಳಿಗಳಲ್ಲಿ ನಮ್ಮ ಯುವಕರು ತಾಂತ್ರಿಕವಾಗಿ ಕೌಶಲ್ಯಯುಳ್ಳವರಾಗಿರಬೇಕು. ಈ ನಿಟ್ಟಿನಲ್ಲಿ ನಮ್ಮ ಸರಕಾರ ಕಾರ್ಯೋನ್ಮುಖವಾಗಿದೆ. ನಾವೆಲ್ಲರೂ ಪರಿಹಾರದ ಭಾಗವಾಗೋಣ. ಆರೋಗ್ಯ ಕುರಿತ ಸವಾಲುಗಳನ್ನು ಗೆಲ್ಲೋಣ. ತಾಯಿ ಗರ್ಭದಿಂದ ಭೂ ಗರ್ಭದವರೆಗಿನ ಪಯಣದ ಮಧ್ಯೆ ನಮ್ಮ ಪಾತ್ರಗಳನ್ನು ಉತ್ತಮವಾಗಿ ನಿರ್ವಹಿಸೋಣ' ಎಂದು ಅವರು  ತಿಳಿಸಿದರು. 

‘ಗರ್ಭಧಾರಣೆಯಿಂದ ಹಿಡಿದು ಪೂರ್ಣಪ್ರಮಾಣದ ಮಾನವನ ಸೃಷ್ಟಿ ಅದ್ಭುತವಾದುದ್ದು. ಈ ನಿಟ್ಟಿನಲ್ಲಿ ಮಕ್ಕಳ ತಜ್ಞರ ಪಾತ್ರ ಗರ್ಭಧಾರಣೆಯಿಂದಲೇ ಪ್ರಾರಂಭವಾಗುತ್ತದೆ. ತಾಯಿಯ ಆರೋಗ್ಯ ಮಗುವಿನ ಆರೋಗ್ಯದ ಮೇಲೂ ಪರಿಣಾಮ ಬೀರುತ್ತದೆ. ಗರ್ಭದಲ್ಲಿಯೇ ಮಗುವಿಗೆ ಪೌಷ್ಟಿಕಾಂಶ ದೊರೆಯಬೇಕು. ಗರ್ಭಿಣಿಯರ ಆರೋಗ್ಯ ಕಾಪಾಡುವುದು ಸರಕಾರ ಮತ್ತು ಸಮಾಜದ ಜವಾಬ್ದಾರಿ' ಎಂದು ಅವರು ನುಡಿದರು.

‘ದೇಶದಲ್ಲಿ ಅಪೌಷ್ಟಿಕತೆಯಿಂದಾಗಿ ಕುರುಡಾಗಿರುವವ ಸಂಖ್ಯೆ ಹೆಚ್ಚಿದೆ. ಅಪೌಷ್ಟಿಕತೆಯಿಂದ ವಿವಿಧ ಸಮಸ್ಯೆ ಗಳನ್ನು ಹೊಟ್ಟುಕೊಂಡೇ ಹುಟ್ಟುವವರ ಸಂಖ್ಯೆಯೂ ಹೆಚ್ಚಿದೆ. ಸೂಕ್ತ ಪೌಷ್ಟಿಕ ಆಹಾರ ಹಾಗೂ ಕಾಳಜಿ ವಹಿಸಬೇಕು. ಸ್ವಸ್ಥ ಸಮಾಜ ನಿರ್ಮಾಣಕ್ಕೆ ಇದು ಸಕಾಲ.  ತಾಯಿಯ ಆರೋಗ್ಯದಿಂದ ಹಿಡಿದು, ಕುಟುಂಬದ ಆರೋಗ್ಯ, ಕುಟುಂಬದ ಆರ್ಥಿಕ ಸಬಲೀಕರಣ, ಆರೋಗ್ಯಕವಂತ ಮಗುವಿನ ಜನನ,  ಮಗುವಿನ ಶಿಕ್ಷಣ ಸೇರಿದಂತೆ ಸಮಗ್ರ ಅಭಿವೃದ್ಧಿಯಾಗಬೇಕು. ವೈಜ್ಞಾನಿಕವಾಗಿ ಆಲೋಚಿಸುವ ಸಚಿವರು ಹಾಗೂ ಅಧಿಕಾರಗಳ ತಂಡ ನಮ್ಮಲ್ಲಿದ್ದು, ಪ್ರಗತಿಪರ ಚಿಂತನೆಯುಳ್ಳ ಸರಕಾರ ನಮ್ಮದು' ಎಂದು ಅವರು ತಿಳಿಸಿದರು.

ಕಾರ್ಯಕ್ರಮದಲ್ಲಿ ಆರೋಗ್ಯ ಸಚಿವ ಡಾ.ಕೆ.ಸುಧಾಕರ್, ತೋಟಗಾರಿಕೆ ಸಚಿವ ಮುನಿರತ್ನ, ಸಿಎಂ ರಾಜಕೀಯ ಕಾರ್ಯದರ್ಶಿಡಿ.ಎನ್.ಜೀವರಾಜ್, ರೇನ್‍ಬೋ ಆಸ್ಪತ್ರೆಯ ನಿತ್ಯಾನಂದ ಸೇರಿದಂತೆ ಇನ್ನಿತರರು ಹಾಜರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X