Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ಲಾಸ್ಟಿಕ್‌ ತಯಾರಿಕಾ ಘಟಕದ ಅನುಮತಿ...

ಪ್ಲಾಸ್ಟಿಕ್‌ ತಯಾರಿಕಾ ಘಟಕದ ಅನುಮತಿ ರದ್ದುಗೊಳಿಸಿದಲ್ಲಿ ಸಮಸ್ಯೆ ಪರಿಹಾರ - ಪ್ರತಿಮಾ

ʼಪ್ಲಾಸ್ಟಿಕ್‌ ಬದಲು ಬಕೆಟ್‌ ನಲ್ಲಿ ಕಸ ನೀಡಿ ಸಹಕರಿಸಿʼ

ವಾರ್ತಾಭಾರತಿವಾರ್ತಾಭಾರತಿ17 July 2022 6:23 PM IST
share

ಕಾರ್ಕಳ : ಪ್ಲಾಸ್ಟಿಕ್‌ ಬಳಸದಂತೆ ಅರಿವು ಮೂಡಿಸುವ ನಿಟ್ಟಿನಲ್ಲಿ ಹತ್ತಾರು ಸಭೆ, ಪ್ರಚಾರ ಮಾಡುವ ಬದಲು ಪ್ಲಾಸ್ಟಿಕ್‌ ತಯಾರಿಕಾ ಘಟಕದ ಅನುಮತಿ ರದ್ದುಗೊಳಿಸುವುದು ಸುಲಭ ಉಪಾಯ ಎಂದು ಪುರಸಭಾ ಸದಸ್ಯೆ ಪ್ರತಿಮಾ ಸಲಹೆ ನೀಡಿದರು. 

ಅವರು ಕಾರ್ಕಳ ಪುರಸಭಾ ಸಭಾಂಗಣದಲ್ಲಿ ಏಕಬಳಕೆ (ಎಸ್‌ಯುಪಿ) ನಿಷೇಧಿಸುವ ಕುರಿತು ನಡೆದ ಸಭೆಯಲ್ಲಿ ಮಾತನಾಡಿ, ಪ್ಲಾಸ್ಟಿಕ್‌ ನಿಷೇಧ ಕುರಿತಂತೆ ಹತ್ತಾರು ಸಭೆ, ಪತ್ರಿಕಾ ಪ್ರಕಟನೆ, ಧ್ವನಿವರ್ಧಕದ ಮೂಲಕ ಪ್ರಚಾರ ನಡೆಸಲಾಗುತ್ತಿದೆ. ಇದರ ಬದಲು ಬದಲು ಪ್ಲಾಸ್ಟಿಕ್‌ ಉತ್ಪಾದನಾ ಘಟಕಕ್ಕೆ ಬೀಗ ಜಡಿದಲ್ಲಿ ಸಮಸ್ಯೆ ಸಂಪೂರ್ಣವಾಗಿ ಪರಿಹಾರವಾಗುವುದು ಎಂದರು. 

ಪುರಸಭಾ ಮಾಜಿ ಅಧ್ಯಕ್ಷ ಚಂದ್ರಹಾಸ ಸುವರ್ಣ ಮಾತನಾಡಿ, ಪ್ಲಾಸ್ಟಿಕ್‌ ಬಳಕೆ ಬದಲು ಈ ಹಿಂದೆ ಬಳಸುತ್ತಿದ್ದಂತಹ ಬಟ್ಟೆ ಚೀಲ ಬಳಸಬೇಕು. ನಮ್ಮ ಹಿರಿಯರು ಆ ಕಾಲದಲ್ಲೇ ಮಾರ್ಕೆಟ್‌ ಬ್ಯಾಗ್‌ ಬಳಸುತ್ತಿದ್ದರು. ಅದನ್ನೇ ಮತ್ತೆ ಎಲ್ಲರೂ ಉಪಯೋಗಿಸುವಂತಾಗಬೇಕೆಂದರು. 

ಪುರಸಭಾ ಮುಖ್ಯಾಧಿಕಾರಿ ಮಾತನಾಡಿ, ಪ್ಲಾಸ್ಟಿಕ್ ಕ್ಯಾರಿ ಬ್ಯಾಗ್, ಪ್ಲಾಸ್ಟಿಕ್ ಬ್ಯಾನರ್‌, ಪ್ಲಾಸ್ಟಿಕ್ ಬಂಟಿಂಗ್ಸ್, ಪ್ಲಾಸ್ಟಿಕ್ ಫ್ಲೆಕ್ಸ್ ಪ್ಲೇಟ್‌ಗಳು, ಪ್ಲಾಸ್ಟಿಕ್ ಧ್ವಜಗಳು, ಪ್ಲಾಸ್ಟಿಕ್ ಕಪ್‌ಗಳು, ಪ್ಲಾಸ್ಟಿಕ್ ಸ್ಪೂನ್‌ಗಳು, ಡೈನಿಂಗ್ ಟೇಬಲ್‌ನಲ್ಲಿ ಹರಡುವ ಪ್ಲಾಸ್ಟಿಕ್ ಹಾಳೆಗಳು, ಸ್ಟ್ರಾಗಳನ್ನು ಜು. 1ರಿಂದ ಸಂಪೂರ್ಣವಾಗಿ ನಿಷೇಧಿಸಲಾಗಿದೆ. ಈಗಲೂ ಹಲವಾರು ಮಂದಿ ಹಸಿ ಕಸವನ್ನು ಪ್ಲಾಸ್ಟಿಕ್‌ಗೆ ಕಟ್ಟಿ ಕಸ ವಿಲೇವಾರಿ ವಾಹನಕ್ಕೆ ನೀಡುತ್ತಿದ್ದಾರೆ. ಪ್ಲಾಸ್ಟಿಕ್‌ ಬದಲು ಬಕೆಟ್‌ನಲ್ಲಿ ಹಸ ಕಸ ನೀಡುವಂತೆ ಮನವಿ ಮಾಡಿಕೊಂಡರು.

ಅಧ್ಯಕ್ಷತೆ ವಹಿಸಿ ಮಾತನಾಡಿದ ಪುರಸಭಾ ಅ‍ಧ್ಯಕ್ಷೆ ಸುಮಾ ಕೇಶವ್, ಪ್ರತಿ ಮನೆಯಲ್ಲೂ ಹಸಿ ಕಸ, ಒಣ ಕಸ ವಿಂಗಡಿಸಿ ಪುರಸಭಾ ಕಸ ವಿಲೇವಾರಿ ವಾಹನಕ್ಕೆ ನೀಡಿದಲ್ಲಿ ನಿರ್ವಹಣೆ ಸುಲಭವಾಗುವುದು. ಈ ನಿಟ್ಟಿನಲ್ಲಿ ಪುರಸಭಾ ವ್ಯಾಪ್ತಿಯ ಜನತೆ ಸಹಕರಿಸಬೇಕೆಂದರು. ಪುರಸಭೆಯ ಹಿರಿಯ ಆರೋಗ್ಯ ನಿರೀಕ್ಷಕಿ ಲೈಲಾ ಥಾಮಸ್‌ ಸರಕಾರದ ಸುತ್ತೋಲೆಯಲ್ಲಿರುವ ನಿಷೇಧಿತ ಪ್ಲಾಸ್ಟಿಕ್‌ ಬಗ್ಗೆ ಮಾಹಿತಿ ನೀಡಿದರು.  

ವೇದಿಕೆಯಲ್ಲಿ ಪುರಸಭಾ ಉಪಾಧ್ಯಕ್ಷೆ ಪಲ್ಲವಿ ಪ್ರವೀಣ್‌, ಸ್ಥಾಯಿ ಸಮಿತಿ ಅಧ್ಯಕ್ಷ ಯೋಗೀಶ್‌ ದೇವಾಡಿಗ ಉಪಸ್ಥಿತರಿದ್ದರು. ಸ್ವಚ್ಛ ಕಾರ್ಕಳ ಬ್ರಿಗೇಡ್‌, ಟಿಪ್‌ ಸೆಷನ್‌ ಬ್ರಹ್ಮಾವರ, ಜೈನ್‌ ಬ್ರಿಗೇಡ್‌ ಕಾರ್ಕಳ, ಬಟ್ಟೆ ತಯಾರಿಕಾ ಸಂಸ್ಥೆಯವರು ಸಭೆಯಲ್ಲಿ ಸಲಹೆಗಳನ್ನು ನೀಡಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X