Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ...

ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಬೇಕು: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ17 July 2022 7:43 PM IST
share
ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಬೇಕು: ಕುಮಾರಸ್ವಾಮಿ

ಬೆಂಗಳೂರು, ಜು. 17: ‘ಸ್ವಾತಂತ್ರ್ಯ ಭಾರತದಲ್ಲಿ ನಾವು 75 ವರ್ಷ ಸಾಗಿದ್ದೇವೆ. ಈ ಸಂದರ್ಭದಲ್ಲಿ ಸುಪ್ರೀಂ ಕೋರ್ಟ್‍ನ ಮುಖ್ಯ ನ್ಯಾಯಮೂರ್ತಿಗಳು ಎಚ್ಚರಿಸಿ ಹೇಳಿರುವ ಮಾತುಗಳನ್ನು ಎಲ್ಲರೂ ಕೇಳಲೇಬೇಕು. ಪ್ರಜಾಪ್ರಭುತ್ವದಲ್ಲಿ ಆಡಳಿತ ಪಕ್ಷ-ಪ್ರತಿಪಕ್ಷಗಳ ‘ಜುಗುಲ್‍ಬಂದಿ' ಇದ್ದರೆ ದೇಶಕ್ಕೆಶ್ರೇಯಸ್ಸು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ತಿಳಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, ‘ಸುಪ್ರೀಂಕೋರ್ಟ್‍ನ ಮುಖ್ಯ ನ್ಯಾಯಮೂರ್ತಿ ರಮಣ ಅವರು ಜೈಪುರದ ಸಭೆಗಳಲ್ಲಿ ಪ್ರತಿಪಕ್ಷಗಳು ಮತ್ತು ವಿಚಾರಣಾಧೀನ ಕೈದಿಗಳ ಬಗ್ಗೆ ಪ್ರಸ್ತಾಪಿಸಿರುವ ಮಹತ್ವದ ಅಂಶಗಳ ಬಗ್ಗೆ ನನ್ನ ಸಹಮತ ಇದೆ. ಅದಕ್ಕಾಗಿ ನಾನು ಮುಖ್ಯ ನ್ಯಾಯಮೂರ್ತಿಗಳನ್ನು ಅಭಿನಂದಿಸುತ್ತೇನೆ' ಎಂದು ಹೇಳಿದ್ದಾರೆ.

‘ಹಿಂದೆ ಪ್ರತಿಪಕ್ಷಗಳು ನಕ್ಷತ್ರಕನ ಪಾತ್ರ ಪೋಷಿಸುತ್ತಿದ್ದವು. ದುರದೃಷ್ಟವಶಾತ್ ದೇಶದಲ್ಲಿ ಆ ಪಕ್ಷಗಳ ಸ್ಥಾನ ಕುಗ್ಗುತ್ತಿದೆ. ಚರ್ಚೆ ಇಲ್ಲದೆಯೇ ಮಸೂದೆಗಳನ್ನು ಅಂಗೀಕರಿಲಾಗುತ್ತಿದೆ' ಎಂದು ಮುಖ್ಯ ನ್ಯಾಯಮೂರ್ತಿ ಬೇಸರ ವ್ಯಕ್ತಪಡಿಸಿದ್ದಾರೆ. ಈ ಮಾತನ್ನು ನಾನು ಒಪ್ಪುತ್ತೇನೆ. ಆ ಬಗ್ಗೆ ಆತ್ಮಾವಲೋಕನ ಇವತ್ತಿನ ತುರ್ತು ಅಗತ್ಯ' ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

‘ದೇಶದಲ್ಲಿ ಪ್ರತಿಪಕ್ಷಗಳು ದುರ್ಬಲವಾಗಲು ಕಾರಣರಾರು? 8 ವರ್ಷಗಳಿಂದ ಏನಾಗುತ್ತಿದೆ? ಪ್ರಶ್ನಿಸಿದರೆ ರಾಷ್ಟ್ರದ್ರೋಹಿ ಎಂಬ ಹಣೆಪಟ್ಟ! ನೊಬೆಲ್ ಪ್ರಶಸ್ತಿ ಪುರಸ್ಕøತ ಅಮಥ್ರ್ಯ ಸೇನ್ ಅವರಿಗೆ ಈ ಕಹಿ ಅನುಭವ ಆಗಿದೆ. ಜಗತ್ತಿನ ಸರ್ವಶ್ರೇಷ್ಟ ಆರ್ಥಿಕ ತಜ್ಞರಿಗೆ ಹೀಗಾದರೆ ಹೇಗೆ? ಪ್ರತಿಪಕ್ಷ ನಾಯಕರು ದನಿ ಎತ್ತಿದರೆ ಈಡಿ, ಸಿಬಿಐ, ಐಟಿ ಚಾಟಿ' ಎಂದು ಅವರು ಟೀಕಿಸಿದ್ದಾರೆ.

‘ಸಂಸತ್ತು, ವಿಧಾನಸಭೆಗಳಲ್ಲಿ ಮೌಲಿಕ ಚರ್ಚೆ ನಡೆಯುತ್ತಿಲ್ಲ. ಮುಖ್ಯ ನ್ಯಾಯಮೂರ್ತಿ ಕಳವಳ ಸಕಾಲಿಕವಾಗಿದೆ. ಲಕ್ಷ ಕೋಟಿ ರೂ.ಗಳ ಬಜೆಟ್ ಸೇರಿ ಮಹತ್ವದ ಮಸೂದೆಗಳನ್ನು ಚರ್ಚೆಗೆ ಬಿಡುತ್ತಿಲ್ಲ. ಕರ್ನಾಟಕದ ವಿಧಾನಸಭೆಯೇ ಇದಕ್ಕೆ ಸಾಕ್ಷಿ. ಪ್ರತಿಯೊಂದು ಪಕ್ಷ, ಪ್ರತಿಯೊಬ್ಬ ಜನಪ್ರತಿನಿಧಿ ಆತ್ಮಾವಲೋಕನ ಮಾಡಿಕೊಳ್ಳಬೇಕಿದೆ' ಎಂದು ಕುಮಾರಸ್ವಾಮಿ ಸಲಹೆ ನೀಡಿದ್ದಾರೆ.

‘ವಿಚಾರಣೆಯೇ ಇಲ್ಲದೆ ಕೈದಿಗಳ ದೀರ್ಘಾವಧಿ ಬಂಧನ ಪ್ರಶ್ನಾರ್ಹ ಎಂದಿದ್ದಾರೆ ಮುಖ್ಯ ನ್ಯಾಯಮೂರ್ತಿ. ದೇಶದಲ್ಲಿ ಸೆರೆವಾಸ ಅನುಭವಿಸುತ್ತಿರುವ 6.10ಲಕ್ಷ ಕೈದಿಗಳಲ್ಲಿ ಶೇ.80ರಷ್ಟು ವಿಚಾರಣಾಧೀನ ಕೈದಿಗಳೆ ಇದ್ದಾರೆ. ಅವರಲ್ಲಿ ನಿರಪರಾಧಿಗಳೆಷ್ಟು? ಅವರ ದುಃಸ್ಥಿತಿಗೆ ಉತ್ತರದಾಯಿಗಳು ಯಾರು?' ಎಂದು ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

‘ಕ್ರಿಮಿನಲ್ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ'

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವಿಚಾರಣೆಯೇ ಇಲ್ಲದೆ ದೀರ್ಘಕಾಲ ಬಂಧನದಲ್ಲಿ ಇರಿಸುವುದೂ ಒಂದು ಶಿಕ್ಷೆಯೇ ಸರಿ. ಆತುರ, ವಿವೇಚನೆ ಇಲ್ಲದ ಬಂಧನಗಳು, ಜಾಮೀನು ಪಡೆಯುವಲ್ಲಿನ ಕಷ್ಟಗಳ ಬಗ್ಗೆಯೂ ಮಾನ್ಯ ಮುಖ್ಯ ನ್ಯಾಯಮೂರ್ತಿಗಳು ಕಳವಳ ವ್ಯಕ್ತಪಡಿಸಿದ್ದಾರೆ. ಮಾನ್ಯ ಮುಖ್ಯ ನ್ಯಾಯಮೂರ್ತಿಗಳ ಮಾತುಗಳು ಹೊಣೆಗೇಡಿತನದ ಆಡಳಿತದ ಕಣ್ತೆರೆಸಲಿ .6/7

— H D Kumaraswamy (@hd_kumaraswamy) July 17, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X