ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣ: ಸೋಮವಾರ ಆರೋಪಿಗಳನ್ನು ಕೋರ್ಟ್ ಗೆ ಹಾಜರುಪಡಿಸಲಿರುವ ಪೊಲೀಸರು

ಮಹಾಂತೇಶ್ | ಮಂಜುನಾಥ್ -( ಬಂಧಿತ ಆರೋಪಿಗಳು) ಹಾಗೂ ಚಂದ್ರಶೇಖರ್ ಗುರೂಜಿ
ಹುಬ್ಬಳಿ, ಜು.17: ಸರಳವಾಸ್ತು ಚಂದ್ರಶೇಖರ್ ಗುರೂಜಿ ಹತ್ಯೆ ಪ್ರಕರಣದ ವಿಚಾರಣೆಗೆ ಸಂಬಂಧಿಸಿದಂತೆ ಆರು ದಿನಗಳ ಕಾಲ ಪೊಲೀಸ್ ಕಸ್ಟಡಿಯಲ್ಲಿದ್ದ ಇಬ್ಬರು ಆರೋಪಿಗಳನ್ನು ಇಂದು(ಜು.18) ಹುಬ್ಬಳ್ಳಿಯ ಒಂದನೆ ಹೆಚ್ಚುವರಿ ಸಿವಿಲ್ ಮತ್ತು ಜೆಎಂಎಫ್ಸಿ ಕೋರ್ಟ್ಗೆ ಹಾಜರುಪಡಿಸಲಿದ್ದಾರೆ.
ಆರೋಪಿಗಳಾದ ಮಹಾಂತೇಶ ಶಿರೂರ ಹಾಗೂ ಮಂಜುನಾಥ ಮರೇವಾಡ ಅವರನ್ನು ಈ ಹಿಂದೆ ಆರು ದಿನ ಫೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಆದರೆ, ಜು.18ರಂದು ಅವಧಿ ಮುಕ್ತಾಯ ಆಗುತ್ತಿರುವುದರಿಂದ ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಿದ್ದಾರೆ.
ಪೊಲೀಸರು ಆರೋಪಿಗಳನ್ನು ವಶಕ್ಕೆ ಕೇಳುತ್ತಾರೋ ಅಥವಾ ನ್ಯಾಯಾಲಯ ನ್ಯಾಯಾಂಗ ಬಂಧನಕ್ಕೆ ನೀಡುತ್ತಾ ಎಂಬುದು ತೀರ್ಮಾನವಾಗಲಿದೆ. ಒಂದು ವೇಳೆ ಇನ್ನು ವಿಚಾರಣೆ ಅವಶ್ಯಕತೆಯಿದ್ದರೆ ಪೊಲೀಸರು ತಮ್ಮ ವಶಕ್ಕೆ ಕೇಳುವ ಸಾಧ್ಯತೆ ಕೂಡಾ ದಟ್ಟವಾಗಿದೆ. ಪೊಲೀಸರು, ಆರೋಪಿಗಳ ವಿಚಾರಣೆಯ ಅವಶ್ಯಕತೆ ಇಲ್ಲವಾದಲ್ಲಿ, ನ್ಯಾಯಾಲಯವು ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವ ಸಾಧ್ಯತೆಯಿದೆ.
ಸರಳವಾಸ್ತು ಚಂದ್ರಶೇಖರ್ ಗುರೂಜಿ ಅವರನ್ನು ನಗರದ ಉಣಕಲ್ ಬಳಿಯ ಖಾಸಗಿ ಹೋಟೆಲ್ನಲ್ಲಿ ಜು.5 ರಂದು ಹತ್ಯೆ ಮಾಡಿದ್ದರು.
ಹತ್ಯೆಯ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದ್ದವು. ಪ್ರಕರಣ ನಡೆದ ನಾಲ್ಕು ಗಂಟೆಗಳಲ್ಲಿ ಆರೋಪಿಗಳು ರಾಮದುರ್ಗದಲ್ಲಿ ಪೊಲೀಸರಿಗೆ ಸಿಕ್ಕಿಬಿದ್ದಿದ್ದರು.







