Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಅಚ್ಚೇ ದಿನಗಳ ನಿರೀಕ್ಷೆಯಿಂದ...

ಅಚ್ಚೇ ದಿನಗಳ ನಿರೀಕ್ಷೆಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದ ಮತದಾರರೂ 'ತೆರಿಗೆ ಭಯೋತ್ಪಾದನೆ'ಗೆ ಬಲಿ: ಸಿದ್ದರಾಮಯ್ಯ

''ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮತ್ತೆ ಮತ್ತೆ ಸಾಬೀತುಪಡಿಸುತ್ತಿದ್ದಾರೆ''

ವಾರ್ತಾಭಾರತಿವಾರ್ತಾಭಾರತಿ18 July 2022 11:59 AM IST
share
ಅಚ್ಚೇ ದಿನಗಳ ನಿರೀಕ್ಷೆಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದ ಮತದಾರರೂ ತೆರಿಗೆ ಭಯೋತ್ಪಾದನೆಗೆ ಬಲಿ: ಸಿದ್ದರಾಮಯ್ಯ

ಬೆಂಗಳೂರು: ಬಡವರ ಹೊಟ್ಟೆಗೆ ಒದೆಯುವುದೇ ಅಚ್ಚೇ ದಿನ್ ಎಂದು ತಿಳಿದುಕೊಂಡಿರುವ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಊಟದ ತಟ್ಟೆಯಲ್ಲಿನ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆ, ಮೀನು, ಮಾಂಸ, ಮಂಡಕ್ಕಿ ಎಲ್ಲವನ್ನೂ ಕಿತ್ತುಕೊಳ್ಳಲು ಹೊರಟಿರುವುದು ಬಡವರ ಹತ್ಯೆಗೆ ಸಮನಾದ ಪಾಪ ಕರ್ಮ ಎಂದು ವಿಧಾನಸಭೆ ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಅಚ್ಚೇ ದಿನಗಳ ನಿರೀಕ್ಷೆಯಿಂದ ಬಿಜೆಪಿಯನ್ನು ಗೆಲ್ಲಿಸಿದ್ದ ಮತದಾರರೂ 'ತೆರಿಗೆ ಭಯೋತ್ಪಾದನೆ'ಗೆ ಬಲಿಯಾಗಿದ್ದಾರೆ ಎಂದು ಕೇಂದ್ರ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

ವಿಪಕ್ಷ ನಾಯಕರ ಟ್ವೀಟ್ ಇಂತಿದೆ... 

'ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಳದಿಂದ ತರಕಾರಿ ಮತ್ತಿತರ ದಿನಬಳಕೆಯ ವಸ್ತುಗಳ ಬೆಲೆ ಗಗನಕ್ಕೇರಿದೆ, ನಿರುದ್ಯೋಗದಿಂದಾಗಿ ಕುಟುಂಬದ ಆದಾಯ ಕುಸಿದಿದೆ. ಈ ಹೊತ್ತಿನಲ್ಲಿ ಬಡವರ ನೆರವಿಗೆ ಬರಬೇಕಾಗಿರುವ ಸರ್ಕಾರ ಅವರನ್ನು ಉಪವಾಸ ಬೀಳಿಸಿ ಸಾಯಿಸಲು ಹೊರಟಿದೆ. ಇಂತಹ ಕ್ರೌರ್ಯ ಫ್ಯಾಸಿಸ್ಟ್ ಮನಸ್ಸುಗಳಿಂದ ಮಾತ್ರ ಸಾಧ್ಯ'.

'ಬ್ರ್ಯಾಂಡೆಡ್ ಅಲ್ಲದ ಪ್ಯಾಕ್ ಮಾಡಲಾಗಿರುವ ಅಕ್ಕಿ, ಗೋಧಿ, ಹಾಲು, ಮೊಸರು, ಮಜ್ಜಿಗೆಯಂತಹ ದಿನಬಳಕೆಯ ವಸ್ತುಗಳ ಮೇಲೆ ನರೇಂದ್ರ ಮೋದಿ ಸರ್ಕಾರ GST ಹೇರಿರುವುದು ಬ್ರ್ಯಾಂಡೆಡ್ ವಸ್ತುಗಳ ಕಂಪೆನಿಗಳ ಒತ್ತಡಕ್ಕೆ ಮಣಿದು ಎನ್ನುವುದು ಸ್ಪಷ್ಟ. ತಮ್ಮದು ಸೂಟ್ ಬೂಟ್ ಸರ್ಕಾರ ಎನ್ನುವುದನ್ನು ಮತ್ತೆ ಮತ್ತೆ ಅವರು ಸಾಬೀತುಪಡಿಸುತ್ತಿದ್ದಾರೆ'. 

'ತೆರಿಗೆ ವಂಚನೆ ಮಾಡಿ, ಬ್ಯಾಂಕ್ ಮುಳುಗಿಸಿ ಓಡಿಹೋಗಿರುವ ಮೋದಿ, ಮಲ್ಯಗಳು ವಿದೇಶದಲ್ಲಿ ಮಜಾ ಮಾಡುತ್ತಿದ್ದಾರೆ. ಅವರನ್ನು ಎಳೆದುಕೊಂಡು ಬಂದು, ವಂಚಿಸಿದ್ದ ತೆರಿಗೆ ಹಣವನ್ನು ಕಕ್ಕಿಸಲು ಆಗದ 56 ಎದೆಯಳತೆಯ ಪ್ರಧಾನಿ ಬಡವರ ಹೊಟ್ಟೆ ಬಗೆಯಲು ಹೊರಟಿರುವುದು ದುರಂತ'.

'ಕೇಂದ್ರ ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ. ಬಡತನ ಜಾತಿ, ಧರ್ಮ, ಪಕ್ಷಗಳೆಲ್ಲವನ್ನೂ ಮೀರಿದ್ದು'. 

'ಬ್ರ್ಯಾಂಡ್ ಗಳ ಬೆನ್ನತ್ತಿ ಹೋಗುತ್ತಿರುವ ಉಳ್ಳವರು, ಶ್ರೀಮಂತರು ಖರೀದಿಸುವ ವಸ್ತುಗಳ ಮೇಲೆ ತೆರಿಗೆ ಹೇರಿಕೆಗೆ ಕನಿಷ್ಠ ಸಮರ್ಥನೆ ಇದೆ. ಆದರೆ ಗುಡಿಕೈಗಾರಿಕೆಗಳ ರೂಪದಲ್ಲಿ ಅಕ್ಕಿ, ಗೋಧಿ, ಹಾಲು, ಮೊಸರು ಮತ್ತಿತರ ಅಗತ್ಯವಸ್ತುಗಳನ್ನು ಪ್ಯಾಕ್ ಮಾಡಿ ಮಾರಾಟ ಮಾಡುತ್ತಿರುವ ಲಕ್ಷಾಂತರ ಕಿರು ಉದ್ಯಮಿಗಳಿಗೂ ಕೂಡಾ ಇದೊಂದು ದೊಡ್ಡ ಹೊಡೆತ'.

ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಸಾವು-ಬದುಕಿನ ಪ್ರಶ್ನೆಯನ್ನು ದೇಶದ ಜನರ ಮುಂದಿಟ್ಟಿದೆ, ಬೆಲೆ ಏರಿಕೆ, ನಿರುದ್ಯೋಗ, ಭ್ರಷ್ಟಾಚಾರ, ಅನಾಚಾರಗಳನ್ನೆಲ್ಲ ಸಹಿಸಿಕೊಂಡು ಇನ್ನೂ ಅಚ್ಚೇ ದಿನಗಳ ಕನಸು ಕಂಡರೆ ಬದುಕಿನ ನಾಶ ಖಂಡಿತ. ಕಾಲ ಮಿರಿಹೋಗುತ್ತಿದೆ, ಎಚ್ಚೆತ್ತುಕೊಳ್ಳಲು ಇದು ಸಕಾಲ ಎಂದು ಸಿದ್ದರಾಮಯ್ಯ ಟ್ವೀಟಿಸಿದ್ದಾರೆ.

ಕೇಂದ್ರ @BJP4India ಸರ್ಕಾರದ ಈ ‘ತೆರಿಗೆ ಭಯೋತ್ಪಾದನೆಗೆ ಬಲಿಯಾಗಿರುವುದು ವಿರೋಧಪಕ್ಷಗಳ ಮತದಾರರು ಮಾತ್ರವಲ್ಲ, ಅಚ್ಚೇ ದಿನಗಳ ನಿರೀಕ್ಷೆಯಿಟ್ಟುಕೊಂಡು ಬಿಜೆಪಿಯನ್ನು ಗೆಲ್ಲಿಸಿದ್ದ ಬಿಜೆಪಿಯ ಮತದಾರರಿಗೂ ಇದರಲ್ಲಿ ರಿಯಾಯಿತಿ-ವಿನಾಯಿತಿ ಏನಿಲ್ಲ. ಅವರು ಕೂಡಾ ಇದಕ್ಕೆ ಬಲಿಯಾಗಿದ್ದಾರೆ.
ಬಡತನ ಜಾತಿ, ಧರ್ಮ, ಪಕ್ಷಗಳೆಲ್ಲವನ್ನೂ ಮೀರಿದ್ದು. 5/7 pic.twitter.com/YYgzxCSPfT

— Siddaramaiah (@siddaramaiah) July 18, 2022
share
ವಾರ್ತಾಭಾರತಿ
ವಾರ್ತಾಭಾರತಿ
Next Story
X