ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಪೋಸ್ಟ್: ಯುವ ಕಾಂಗ್ರೆಸ್ ದೂರು

ಮೈಸೂರು: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಿರುದ್ಧ ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನಕಾರಿ ಪೋಸ್ಟ್ ಮಾಡಿದ್ದ ವ್ಯಕ್ತಿ ವಿರುದ್ಧ ಯುವ ಕಾಂಗ್ರೆಸ್ ದೂರು ನೀಡಿದೆ.
ಗೋವಿಂದ ನಾಯಕ ಎಂಬ ವ್ಯಕ್ತಿ ವಿರುದ್ಧ ಯುವ ಕಾಂಗ್ರೆಸ್ ಹುಣಸೂರು ಪೊಲೀಸ್ ಠಾಣೆಗೆ ದೂರು ನೀಡಿದೆ.
ಸಿದ್ದರಾಮಯ್ಯ ಅವರ ಭಾಷಣದ ಕುರಿತು ಸಾಮಾಜಿಕ ಜಾಲಾತಾಣದಲ್ಲಿ ಅವಹೇಳನಕಾರಿ ಹಾಗೂ ಶಾಂತಿ ಕದಡುವ ರೀತಿಯಲ್ಲಿ ವ್ಯಕ್ತಿ ಕಮೆಂಟ್ ಮಾಡಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಸಿದ್ದರಾಮಯ್ಯ ಅರಿಗೆ ಬೆದರಿಕೆ ಮಾನಸಿಕವಾಗಿ ನೋವು ತಂದಿದೆ ಎಂದು ಅಭಿಮಾನಿಗಳು ಸ್ನೇಹಿತರು ತಿಳಿಸಿದ್ದಾರೆ.
Next Story





