Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಷ್ಟ್ರಪತಿ ಚುನಾವಣೆ | ದ್ರೌಪದಿ...

ರಾಷ್ಟ್ರಪತಿ ಚುನಾವಣೆ | ದ್ರೌಪದಿ ಮುರ್ಮು ಗೆಲುವು ನಿಶ್ಚಿತ, ಹಿಂದಿನ ದಾಖಲೆ ಮುರಿಯುವ ಸಾಧ್ಯತೆ: ಸಿಎಂ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ18 July 2022 2:44 PM IST
share
ರಾಷ್ಟ್ರಪತಿ  ಚುನಾವಣೆ | ದ್ರೌಪದಿ ಮುರ್ಮು ಗೆಲುವು ನಿಶ್ಚಿತ, ಹಿಂದಿನ  ದಾಖಲೆ ಮುರಿಯುವ ಸಾಧ್ಯತೆ: ಸಿಎಂ ಬೊಮ್ಮಾಯಿ

ಬೆಂಗಳೂರು  ಜುಲೈ18: ರಾಷ್ಟ್ರಪತಿ ಅಭ್ಯರ್ಥಿ ದ್ರೌಪದಿ ಮುರ್ಮು ಅವರ ಆಯ್ಕೆಯನ್ನು ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ 2/3  ಬಹುಮತದೊಂದಿಗೆ ಗೆಲ್ಲುವುದು ನಿಶ್ಚಿತ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. 

ಅವರು ಇಂದು ವಿಧಾನ ಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 

'ರಾಷ್ಟ್ರಪತಿ ಚುನಾವಣೆಯಲ್ಲಿ ಇದ್ದ ಹಿಂದಿನ  ದಾಖಲೆಯನ್ನ ಮುರಿಯುವ ಎಲ್ಲಾ ಸಾಧ್ಯತೆಗಳಿವೆ.  ದ್ರೌಪದಿ ಮುರ್ಮು ಅವರು ಮಾನವೀಯ ಗುಣಗಳನ್ನು ಹೊಂದಿದ್ದು, ಅತ್ಯುನ್ನತ ಸ್ಥಾನಕ್ಕೇರುವುದು ಭಾರತದ ಪ್ರಜಾಪ್ರಭುತ್ವ ಹಾಗೂ ಭವಿಷ್ಯಕ್ಕೆ ಒಳ್ಳೆಯದಾಗಲಿದೆ ಎಂಬ ನಿರೀಕ್ಷೆ ನಮ್ಮದು' ಎಂದರು. 

'ದೇಶಾದ್ಯಂತ ರಾಷ್ಟ್ರಪತಿ ಚುನಾವಣೆ ನಡೆಯುತ್ತಿದೆ. ದೆಹಲಿ, ಸಂಸತ್ತಿನಲ್ಲಿ, ರಾಜ್ಯ ಸಭಾ, ಲೋಕಸಭಾ ಹಾಗೂ ಎಲ್ಲಾ ರಾಜ್ಯಗಳ ವಿಧಾನಸಭೆಗಳಲ್ಲಿ ನಡೆಯುತ್ತಿದೆ. ಎನ್.ಡಿ.ಎ  ರಾಷ್ಟ್ರಪತಿ ಅಭ್ಯರ್ಥಿ ಶ್ರೀಮತಿ ದ್ರೌಪದಿ ಮುರ್ಮು ಅವರ ಹೆಸರಿಗೆ ಬಹಳಷ್ಟು ಸಹಮತ ಮತ್ತು  ಸಂತೋಷ ದೇಶಾದ್ಯಂತ ಮೂಡಿಬಂದಿದೆ. ಎನ್.ಡಿ.ಎ ಮಿತ್ರ ಪಕ್ಷಗಳಷ್ಟೇ ಅಲ್ಲ ವಿರೋಧ ಪಕ್ಷದ ಲ್ಲಿಯೂ ಮುಕ್ತವಾಗಿ ಬೆಂಬಲ ಸೂಚಿಸಿದ್ದಾರೆ' ಎಂದರು. 

'ದ್ರೌಪದಿ ಮುರ್ಮು ಅವರು ಒಬ್ಬ ದಕ್ಷ ಆಡಳಿತಗಾರರಾಗಿ,  ಮುನ್ಸಿಪಾಲಿಟಿ ಉಪಾಧ್ಯಕ್ಷೆಯಾಗಿ, ಮಂತ್ರಿ,  ಶಾಸಕರು ಮತ್ತು ರಾಜ್ಯಪಾಲರಾಗಿ ಅವರ ಸೇವೆ ಅಮೋಘವಾಗಿದೆ. ಬುಡಕಟ್ಟು ಸಮುದಾಯದಿಂದ ಬಂದವರು, ಉತ್ತಮ ಕೆಲಸ ಮಾಡಿದವರಿಗೆ ಅತ್ಯುನ್ನತ ಸ್ಥಾನ ಲಭಿಸುತ್ತಿದೆ.  ಪ್ರಜಾಪ್ರಭುತ್ವದ ಹಿರಿಮೆ ಮತ್ತು ಗರಿಮೆ. ಇಂಥ ಕೆಲಸವನ್ನು ಎನ್.ಡಿ.ಎ.ಮುಖ್ಯಸ್ಥರಾದ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಆಯ್ಕೆ ಮಾಡಿ ಇದೀ ದೇಶದಲ್ಲಿ ಒಂದು ಸಂಚಲನ ಹಾಗೂ ಸಂದೇಶವನ್ನು ನೀಡಿದ್ದಾರೆ' ಎಂದು ಹೇಳಿದರು.

ವಿರೋಧಪಕ್ಷದಲ್ಲಿರುವವರು ನಮ್ಮ ಕರ್ನಾಟಕದ ಜೆ.ಡಿ.ಎಸ್. ಮುಖ್ಯಸ್ಥರು, ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಮಾಯಾವತಿ, ಜಾರ್ಖಂಡ್ ಮುಕ್ತಿ ಮೋರ್ಚಾ, ವೈ. ಎಸ್.ಆರ್ ಪಕ್ಷ ಸೇರಿದಂತೆ ಹಲವಾರು ಪಕ್ಷಗಳು ಬೆಂಬಲಿಸಿರುವುದರಿಂದ ಗೆಲ್ಲುವುದು ನಿಶ್ಚಿತ ಎಂದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X