Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸೆಪ್ಟೆಂಬರ್‌ ಕೊನೆಯ ವಾರದಲ್ಲಿ...

ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ: ಸಚಿವೆ ಶಶಿಕಲಾ ಜೊಲ್ಲೆ

ವಾರ್ತಾಭಾರತಿವಾರ್ತಾಭಾರತಿ18 July 2022 6:25 PM IST
share
ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಅರ್ಚಕರ ಸಮಾವೇಶ: ಸಚಿವೆ ಶಶಿಕಲಾ ಜೊಲ್ಲೆ

ಬೆಂಗಳೂರು ಜುಲೈ 18: ರಾಜ್ಯದ ಮುಜರಾಯಿ ಇಲಾಖೆಯ ಅಧೀನದಲ್ಲಿರುವ ದೇವಸ್ಥಾನಗಳ ಅರ್ಚಕರ ರಾಜ್ಯಮಟ್ಟದ ಸಮಾವೇಶವನ್ನು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ಆಯೋಜಿಸಲಾಗುವುದು ಎಂದು ಮಾನ್ಯ ಮುಜರಾಯಿ, ಹಜ್‌ ಮತ್ತು ವಕ್ಫ್‌ ಸಚಿವರಾದ ಶ್ರೀಮತಿ ಶಶಿಕಲಾ ಅ ಜೊಲ್ಲೆ ತಿಳಿಸಿದರು. 

ಇಂದು ಬೆಂಗಳೂರಿನ ವಿಕಾಸಸೌಧದಲ್ಲಿ ನಡೆದ 3ನೇ ರಾಜ್ಯ ಧಾರ್ಮಿಕ ಪರಿಷತ್ತಿನ 16 ನೇ ಸಭೆಯಲ್ಲಿ ರಾಜ್ಯದ ಹಲವಾರು ಧಾರ್ಮಿಕ ವಿಷಯಗಳ ಬಗ್ಗೆ ಸಭೆಯಲ್ಲಿ ಚರ್ಚಿಸಿ ನಿರ್ಧಾರಗಳನ್ನು ತಗೆದುಕೊಳ್ಳಲಾಯಿತು. ರಾಜ್ಯ ಸರಕಾರ ಮುಜರಾಯಿ ಅರ್ಚಕರ ಅಭಿವೃದ್ದಿಗಾಗಿ ಹಲವಾರು ಯೋಜನೆಗಳನ್ನು ಹೊರತಂದಿದೆ. ತಸ್ಥಿಕ್‌ ಹಣ ಹೆಚ್ಚಳ, ಅರ್ಚಕರುಗಳಿಗೆ ವಿಮಾ ಸೌಲಭ್ಯ ಸೇರಿದಂತೆ ಹಲವಾರು ವರ್ಷಗಳ ಬೇಡಿಕೆಯನ್ನು ಈಡೇರಿಸಲಾಗಿದೆ. ಇದಕ್ಕಾಗಿ ಮುಜರಾಯಿ ಇಲಾಖೆಯ ವತಿಯಿಂದ ಅರ್ಚಕರ ಸಮಾವೇಶ ಏರ್ಪಡಿಸುವಂತೆಯೂ ಸದಸ್ಯರು ಕೋರಿಕೆ ಸಲ್ಲಿಸಿದರು. ಇದಕ್ಕೆ ಸಕಾರಾತ್ಮಕವಾಗಿ ಸ್ಪಂದಿಸಿದ ಸಚಿವರು ಸೆಪ್ಟೆಂಬರ್‌ ಕೊನೆಯ ವಾರದಲ್ಲಿ ರಾಜ್ಯಮಟ್ಟದ ಸಮಾವೇಶವನ್ನು ಏರ್ಪಡಿಸುವುದಾಗಿ ತಿಳಿಸಿದರು. 

ತೆರವಾಗಿರುವ ರಾಜ್ಯ ಧಾರ್ಮಿಕ ಪರಿಷತ್ತಿನ ನ್ಯಾಯಿಕ ಸದಸ್ಯರ ಸ್ಥಾನವನ್ನು ಶೀಘ್ರವಾಗಿ ತುಂಬುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಮುಜರಾಯಿ ಇಲಾಖೆಯ ಶೇಕಡಾ 60 ರಷ್ಟು ಹುದ್ದೆಗಳು ಖಾಲಿಯಿವೆ. ಇದನ್ನು ತುಂಬಲು ನೇಮಕಾತಿಗೆ ಅವಕಾಶ ನೀಡುವಂತೆ ಆರ್ಥಿಕ ಇಲಾಖೆಗೆ ಪತ್ರಬರೆಯಲಾಗಿದೆ. ಇದರ ಬಗ್ಗೆ ಸನ್ಮಾನ್ಯ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಶೀಘ್ರ ಕ್ರಮ ತಗೆದುಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ರಾಜ್ಯದ ಪ್ರಮುಖ ಶ್ರದ್ದಾಕೇಂದ್ರ ಕುಕ್ಕೆಯಲ್ಲಿ ಭಕ್ತಾದಿಗಳಿಗೆ ಇನ್ನೂ ಹೆಚ್ಚಿನ ಉತ್ತಮ ಸೌಕರ್ಯಗಳನ್ನು ಕಲ್ಪಿಸಿಕೊಡುವ ನಿಟ್ಟಿನಲ್ಲಿ ಪರೀಶೀಲನೆ ನಡೆಸುವಂತೆ ಆಯುಕ್ತರಿಗೆ ಸೂಚನೆ ನೀಡಲಾಯಿತು. ಎಲ್ಲಾ ಜಿಲ್ಲೆಗಳಲ್ಲೂ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಗಳನ್ನು ಕಡ್ಡಾಯವಾಗಿ ನಡೆಸಲು ಕ್ರಮ ಕೈಗೊಳ್ಳುವಂತೆಯೂ ಹಾಗೂ ನೂತನ ಜಿಲ್ಲೆ ವಿಜಯನಗರದಲ್ಲಿ ಜಿಲ್ಲಾ ಧಾರ್ಮಿಕ ಪರಿಷತ್‌ ರಚನೆಗೆ ಕ್ರಮವಹಿಸುವಂತೆ ಆಯುಕ್ತರಿಗೆ ಸಚಿವರು ಸೂಚನೆ ನೀಡಿದರು. 

ಕಾಶಿಯ ಕರ್ನಾಟಕ ಛತ್ರ ಸಂಪೂರ್ಣ ನವೀಕರಣ ಹಾಗೂ ಹೆಚ್ಚುವರಿ ಸಿಬ್ಬಂದಿಗಳ ನಿಯೋಜನೆ:

ಕಾಶಿಯಲ್ಲಿರುವ ಕರ್ನಾಟಕ ಛತ್ರವನ್ನು ಸಂಪೂರ್ಣ ನವೀಕರಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸಚಿವರು ಆಯುಕ್ತರಿಗೆ ಸೂಚನೆ ನೀಡಿದರು. ಅಲ್ಲದೇ, ಕೂಡಲೇ ಅಗತ್ಯವಿರುವ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲು ಸಚಿವರು ಆದೇಶಿಸಿದರು. 

ಸಭೆಯಲ್ಲಿ ರಾಜ್ಯಧಾರ್ಮಿಕ ಪರಿಷತ್ತಿನ ಸದಸ್ಯ ಕಾರ್ಯದರ್ಶಿಗಳು ಹಾಗೂ ಮುಜರಾಯಿ ಇಲಾಖೆ ಆಯುಕ್ತರಾದ ಶ್ರೀಮತಿ ರೋಹಿಣಿ ಸಿಂಧೂರಿ, ರಾಜ್ಯ ಧಾರ್ಮಿಕ ಪರಿಷತ್ತಿನ ಸದಸ್ಯರುಗಳಾದ ಡಾ|| ಮಹರ್ಷಿ ಆನಂದ ಗುರೂಜಿ, ಎಸ್‌ ಗೋವಿಂದ ಭಟ್‌, ಕೆ. ಸೂರ್ಯ ಕಷೇಕೋಡಿ, ಸುಭಾಷ ಕಾಂಬ್ಳೆ, ರಾಮಚಂದ್ರ ಮಟ್ಟಿ, ಶ್ರೀಮತಿ ವಿಜಯಲಕ್ಷ್ಮಿ ಹಿರೇಮಠ, ವೈ.ಎಸ್‌. ಸಿದ್ದಲಿಂಗಪ್ರಭು ಹಾಗೂ ಇಲಾಖೆಯ ಪ್ರಮುಖ ಅಧಿಕಾರಿಗಳು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X