ಅಂತರ್ ಕಾಲೇಜು ಸಾಂಸ್ಕೃತಿಕ ಸ್ಪರ್ಧೆ; ವಿಬಿಸಿಎಲ್‌ಗೆ ಪ್ರಶಸ್ತಿ

ಉಡುಪಿ, ಜು.18: ನಿಟ್ಟೆಯ ಡಾ. ನಿಟ್ಟೆ ಶಂಕರ ಅಡ್ಯಂತಾಯ ಸ್ಮಾರಕ ಪ್ರಥಮ ದರ್ಜೆ ಕಾಲೇಜಿನಲ್ಲಿ (ನಿಟ್ಟೆ ವಿಶ್ವವಿದ್ಯಾಲಯ) ಇತ್ತೀಚೆಗೆ ಜರಗಿದ ಎರಡು ದಿನಗಳ ಕರ್ನಾಟಕ ರಾಜ್ಯಮಟ್ಟದ ಅಂತರ ಕಾಲೇಜು ವಾಣಿಜ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಉಡುಪಿಯ ಶಿಶ್ರವೈಕುಂಠ ಬಾಳಿಗಾ ಕಾನೂನು ಮಹಾವಿದ್ಯಾಲಯದ ವಿದ್ಯಾರ್ಥಿಗಳು ಹಲವು ವೈಯಕ್ತಿಕ ಪ್ರಶಸ್ತಿಗಳನ್ನು ಗೆದ್ದುಕೊಂಡರು.
ಕಾಲೇಜಿನ ವಿದ್ಯಾರ್ಥಿನಿ ಸ್ವಪ್ನ ವೈಯಕ್ತಿಕ ಗಾಯನ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನ ಪಡೆದರೆ, ಶರತ್ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಹಾಗೂ ಆತ್ರಾಡಿ ಕೃಷ್ಣರಾಜ್ ಹೆಗಡೆ ಆರ್ಥಿಕ ಸ್ಪರ್ಧೆಯಲ್ಲಿ ದ್ವಿತಿಯ, ವನಿತಾ ಆಚಾರ್ಯ ಮಾರ್ಕೆಟಿಂಗ್ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ.
Next Story





