Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ತೆರಿಗೆ ಹೆಸರಿನಲ್ಲಿ ಲೂಟಿ ಮಾಡುವುದಕ್ಕೂ...

ತೆರಿಗೆ ಹೆಸರಿನಲ್ಲಿ ಲೂಟಿ ಮಾಡುವುದಕ್ಕೂ ಒಂದು ಮಿತಿ ಬೇಡವೇ?: ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ18 July 2022 7:59 PM IST
share
ತೆರಿಗೆ ಹೆಸರಿನಲ್ಲಿ ಲೂಟಿ ಮಾಡುವುದಕ್ಕೂ ಒಂದು ಮಿತಿ ಬೇಡವೇ?: ಕುಮಾರಸ್ವಾಮಿ

ಬೆಂಗಳೂರು: ಜಿಎಸ್ ಟಿ ಮೂಲಕ ಕೇಂದ್ರ ಸರಕಾರವು ಬಡವರನ್ನು ದೋಚುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ತೀವ್ರ ಆಕ್ರೋಶ ವ್ಯಕ್ತಪಡಿಸಿದರು.

ಜಿಎಸ್ ಟಿ ಜನ ವಿರೋಧಿ ತೆರಿಗೆ ನೀತಿ. ಪೆಟ್ರೋಲ್ ಬೆಲೆ, ದಿನ ನಿತ್ಯದ ವಸ್ತು ಬೆಲೆ ಏರಿಕೆಯಿಂದ ಜನ ತತ್ತರಿಸಿ ಹೋಗಿದ್ದಾರೆ. ಈಗ ಆಹಾರ ಪದಾರ್ಥಗಳಿಗೆ ಜಿಎಸ್ ಟಿ ವಿಧಿಸಿ ಬಡವರ ಅನ್ನವನ್ನೂ ಕಸಿದುಕೊಳ್ಳಲಾಗುತ್ತಿದೆ. ಅಚ್ಛೇದಿನ್‌ ಎಂದರೆ ಇದೇನಾ? ಇವು ಜನ ವಿರೋಧಿ ಸರಕಾರಗಳು ಎಂದು ಅವರು ಕೇಂದ್ರ ಹಾಗೂ ರಾಜ್ಯ ಸರಕಾರಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು.

ರಾಷ್ಟ್ರಪತಿ ಚುನಾವಣೆಯಲ್ಲಿ ಇಂದು ವಿಧಾನಸೌಧದಲ್ಲಿ ಮತ ಚಲಾಯಿಸುವ ಮುನ್ನ ಅವರು ಸುದ್ದಿಗಾರರ ಜತೆ ಮಾತನಾಡಿದರು.

ಹಾಲು, ಮೊಸರು, ಉಪ್ಪಿನಕಾಯಿ ಮೇಲೆ ತೆರಿಗೆ ಹೆಚ್ಚು ಮಾಡಿ ಬಡವರ ಹೊಟ್ಟೆ ಮೇಲೆ ಹೊಡೆಯುತ್ತಿದ್ದಾರೆ. ತೆರಿಗೆ ಹೆಸರಿನಲ್ಲಿ ಲೂಟಿ ಮಾಡುವುದಕ್ಕೂ ಒಂದು ಮಿತಿ ಬೇಡವೇ? ಇದು ಜನ ವಿರೋಧಿ ನಿರ್ಧಾರ ಎಂದು ಅವರು ಅಸಮಾಧಾನ ವ್ಯಕ್ತಪಡಿಸಿದರು.

ಕೋವಿಡ್ ನಿಂದಾಗಿ ಆನೇಕ ಕುಟುಂಬಗಳು ಬೀದಿಗೆ ಬಂದಿವೆ. ಇಂತಹ ಪರಿಸ್ಥಿತಿಯಲ್ಲಿ ಜನರ ಮೇಲೆ ಜಿಎಸ್ ಟಿ ಹೊರೆ ಹಾಕಲಾಗುತ್ತಿದೆ. ಜಿಎಸ್ ಟಿಯನ್ನು ನಾನು ಮೊದಲೇ ವಿರೋಧ ಮಾಡಿದ್ದೆ. ರಾಜ್ಯಗಳು ಕೇಂದ್ರಕ್ಕೆ ಹಗ್ಗ ಕೊಟ್ಟು ಕುತ್ತಿಗೆ ಕೊಟ್ಟಿವೆ ಅಂತ ಹೇಳಿದ್ದೆ. ಈ ನೀತಿಯನ್ನು ಮರು ಪರಿಶೀಲನೆ ಮಾಡಬೇಕು ಎಂದು ಕೇಂದ್ರ ಸರ್ಕಾರವನ್ನು  ಒತ್ತಾಯಿಸಿದರು.

ಜಿಎಸ್ ಟಿ ಹೆಚ್ಚಳ ಬಡವರ ಮೇಲೆ ಮಾರಕ ಪ್ರಭಾವ ಬೀರುತ್ತದೆ. ನೇರವಾಗಿ ಬಡವರ ಮೇಲೆ ಹೊರೆ ಆಗುತ್ತದೆ. ಆದರೆ, ಬಿಜೆಪಿ ಜಿಎಸ್ ಟಿಯನ್ನು ಸಮರ್ಥನೆ ಮಾಡುತ್ತಿದೆ. ನೂರು ಸುಳ್ಳು ಹೇಳಿ ಅದನ್ನೇ ಸತ್ಯ ಮಾಡುವುದು ಅವರ ಹುಟ್ಟುಗುಣ. ಎಂಟು ವರ್ಷದಿಂದ ಎಲ್ಲಿ ಒಳ್ಳೆ ದಿನಗಳು ಬಂದಿವೆ? ಡಾಲರ್ ಎದುರು ರೂಪಾಯಿ ಕಥೆ ಏನಾಗಿದೆ? ವಿದೇಶಿ ವಿನಿಮಯ ಕೂಡ ಖಾಲಿ ಆಗುತ್ತಿದೆ. ಕೇಂದ್ರ ಸರ್ಕಾರದ ನೀತಿಯಿಂದ ವಿದೇಶಿ ಕಂಪನಿಗಳು ಬಂಡವಾಳ ವಾಪಸ್ ಪಡೆಯುತ್ತಿವೆ. ಇದರ ಬಗ್ಗೆ ಚರ್ಚೆ ಮಾಡಬೇಕು ಎಂದು ಅವರು ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಉಚಿತ ಕಾರ್ಯಕ್ರಮ ಬೇಡ ಎನ್ನುತ್ತಿದ್ದಾರೆ. ಈ ದೇಶದಲ್ಲಿ 1.7 ಮಿಲಿಯನ್ ಜನರು  ಆಹಾರದ ಕೊರತೆಯಿಂದ ಸಾಯುತ್ತಿದ್ದಾರೆ. ಶ್ರೀಲಂಕಾಗಿಂತ ನಮ್ಮ ಸ್ಥಿತಿ ಭಿನ್ನವೇನಿಲ್ಲ. ನಮ್ಮ ರಾಷ್ಟ್ರದಲ್ಲಿ ಬಡತನ ಹೆಚ್ಚುತ್ತಿದೆ. ಬಡತನ ರೇಖೆಗಿಂತ ಕೆಳಗೆ ಇರುವ ಜನರನ್ನು ಆರ್ಥಿಕವಾಗಿ ಬಲಗೊಳಿಸಲು ಸರ್ಕಾರ ಕೆಲಸ ಮಾಡಬೇಕು. ಎರಡು ಹೊತ್ತು ಊಟಕ್ಕೆ ಗತಿ ಇಲ್ಲದ ಪರಿಸ್ಥಿತಿ ಇದೆ ಎಂದು ಹೇಳಿದರು. 

ಪಕ್ಷಾಧಾರಿತ ಚುನಾವಣೆ ಅಲ್ಲ:

ರಾಷ್ಟ್ರಪತಿ ಚುನಾವಣೆ ಪಕ್ಷಾಧಾರಿತ ಚುನಾವಣೆ ಅಲ್ಲ. ರಾಷ್ಟ್ರಪತಿಗಳು ದೇಶದ ಪ್ರಥಮ ಪ್ರಜೆ. ರಾಷ್ಟ್ರಪತಿ ಅಭ್ಯರ್ಥಿ ಬಿಜೆಪಿಯವರೇ ಇರಬಹುದು. ಆದರೆ, ಅವರು ಗೆದ್ದ ಮೇಲೆ ಪಕ್ಷಾತೀತವಾಗಿ ಕೆಲಸ ಮಾಡಬೇಕು ಎಂದು ಕುಮಾರಸ್ವಾಮಿ ಅವರು ಅಭಿಪ್ರಾಯಪಟ್ಟರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X