Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಜಿಲ್ಲೆಯಲ್ಲಿ 8 ಲಕ್ಷ ಮುನ್ನೆಚ್ಚರಿಕಾ...

ಜಿಲ್ಲೆಯಲ್ಲಿ 8 ಲಕ್ಷ ಮುನ್ನೆಚ್ಚರಿಕಾ ಡೋಸ್ ನೀಡುವ ಗುರಿ: ಉಡುಪಿ ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ18 July 2022 8:17 PM IST
share
ಜಿಲ್ಲೆಯಲ್ಲಿ 8 ಲಕ್ಷ ಮುನ್ನೆಚ್ಚರಿಕಾ ಡೋಸ್ ನೀಡುವ ಗುರಿ: ಉಡುಪಿ ಜಿಲ್ಲಾಧಿಕಾರಿ

ಉಡುಪಿ, ಜು.18: ಉಡುಪಿ ಜಿಲ್ಲೆಯಲ್ಲಿ ಕೋವಿಡ್-19 ಸಂಭಾವ್ಯ ನಾಲ್ಕನೇ ಅಲೆಯಿಂದ ಸಂಭಸಬಹುದಾದ ತೀವ್ರತೆಯನ್ನು ಕಡಿಮೆ ಮಾಡುವ ನಿಟ್ಟಿನಲ್ಲಿ 18ರಿಂದ 59 ವಷರ್ದೊಳಗಿನ ಸಾರ್ವಜನಿಕರಿಗೆ ಸೆಪ್ಟಂಬರ್ 30ರವರೆಗೆ ಎಂಟು ಲಕ್ಷ ಕೋವಿಡ್-19 ಮುಂಜಾಗ್ರತಾ ಡೋಸ್ ಲಸಿಕೆ ನೀಡುವ ಗುರಿಯನ್ನು ಹಾಕಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಹೇಳಿದ್ದಾರೆ.

ಸೋಮವಾರ ಅಜ್ಜರಕಾಡಿನ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಜಿಲ್ಲಾ ಆಯುಷ್ ಆಸ್ಪತ್ರೆಯಲ್ಲಿ ಜಿಲ್ಲಾಡಳಿತ, ಜಿಲ್ಲಾಪಂಚಾಯತ್ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ನಡೆದ, 18 ವರ್ಷ ಮೇಲ್ಪಟ್ಟವರಿಗೆ ಕೋವಿಡ್-19 ಉಚಿತ ಮುನ್ನೆಚ್ಚರಿಕಾ ಡೋಸ್ ನೀಡುವ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಜಿಲ್ಲೆಯಲ್ಲಿ ಈಗಾಗಲೇ 18 ವರ್ಷ ಮೇಲ್ಪಟ್ಟವರಿಗೆ ಮೊದಲನೇ ಮತ್ತು 2ನೇ ಡೋಸ್ ಲಸಿಕೆ ನೀಡುವಲ್ಲಿ ಶೇ.100ರಷ್ಟು ಸಾಧನೆ ಮಾಡಲಾಗಿದೆ. ಪ್ರಸ್ತುತ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಪ್ರಯುಕ್ತ ಸಾರ್ವಜನಿಕ ರಿಗೆ ಉಚಿತವಾಗಿ ಮುನ್ನೆಚ್ಚರಿಕಾ ಡೋಸ್ ನೀಡಲಾಗುತ್ತಿದ್ದು, ಎರಡನೇ ಡೋಸ್ ಪಡೆದು 6 ತಿಂಗಳು ದಾಟಿದ ಸಾರ್ವಜನಿಕರು ಜಿಲ್ಲೆಯಾದ್ಯಂತ ತಮ್ಮ ಸಮೀಪದ ಸರಕಾರಿ ಆರೋಗ್ಯ ಕೇಂದ್ರಗಳಲ್ಲಿ ಮುನ್ನೆಚ್ಚರಿಕಾ ಡೋಸ್ ಪಡೆಯ ಬಹುದಾಗಿದೆ ಎಂದರು.

ಜಿಲ್ಲೆಯಲ್ಲಿ ಕೋವಿಡ್ ಲಸಿಕಾಕರಣದಲ್ಲಿ ಹೆಚ್ಚಿನ ಪ್ರಗತಿ ಸಾಧಿಸಲು ವಿವಿಧ ಸಂಘ ಸಂಸ್ಥೆಗಳು ಹಾಗೂ ನಾಗರಿಕರು ಜಿಲ್ಲಾಡಳಿತಕ್ಕೆ ಉತ್ತಮ ಸಹಕಾರ ನೀಡಿದ್ದು, ಮುನ್ನೆಚ್ಚರಿಕಾ ಡೋಸ್ ನೀಡಿಕೆಯಲ್ಲಿ ಶೇ.100 ಪ್ರಗತಿ ಸಾಧಿಸುವಲ್ಲಿ ಕೂಡಾ ಅಗತ್ಯ ಸಹಕಾರ ನೀಡುವಂತೆ ತಿಳಿಸಿದರು.
ಕಾರ್ಯಕ್ರಮದಲ್ಲಿ ಜಿಲ್ಲೆಯ ವಿವಿಧ ಮಾಧ್ಯಮ ಪ್ರತಿನಿಧಿಗಳು ಕೋವಿಡ್-19 ಮುನ್ನೆಚ್ಚರಿಕಾ ಡೋಸ್ ಲಸಿಕೆಯನ್ನು ಪಡೆದರು.

ಜಿಲ್ಲಾ ಕೋವಿಡ್ ಲಸಿಕಾ ಉಸ್ತುವಾರಿ ಡಾ.ಎಂ.ಜಿ.ರಾಮ, ವಿಶ್ವ ಆರೋಗ್ಯ ಸಂಸ್ಥೆ ಪ್ರತಿನಿಧಿ ಡಾ. ಕೀರ್ತಿನಾಥ ಬಲ್ಲಾಳ್, ಜಿಲ್ಲಾ ಆಯುಷ್ ಅಧಿಕಾರಿ ಡಾ.ಸತೀಶ್ ಆಚಾರ್ಯ ಉಪಸ್ಥಿತರಿದ್ದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಾಗಭೂಷಣ ಉಡುಪ ಸ್ವಾಗತಿಸಿದರು. ಜಿಲ್ಲಾ ಸರ್ಜನ್‌ಡಾ.ಮಧುಸೂದನ ನಾಯಕ್ ವಂದಿಸಿದರು.

5010 ಮಂದಿಗೆ ಲಸಿಕೆ
18ರಿಂದ 59 ವರ್ಷದೊಳಗಿನ ಒಟ್ಟು 5010 ಮಂದಿಗೆ ಇಂದು ಮುನ್ನೆಚ್ಚರಿಕಾ ಡೋಸ್ ಲಸಿಕೆಯನ್ನು ಜಿಲ್ಲೆಯಲ್ಲಿ ನೀಡಲಾಗಿದೆ. ಅದೇ ರೀತಿ 60 ವರ್ಷ ಮೇಲಿನ 2,085 ಮಂದಿಗೆ ಸಹ ಮುನ್ನೆಚ್ಚರಿಕಾ ಡೋಸ್‌ನ್ನು ನೀಡಲಾಯಿತು. ಈ ಮೂಲಕ ಜಿಲ್ಲೆಯಲ್ಲಿ ಇದುವರೆಗೆ ಒಟ್ಟು 1,32,309 ಡೋಸ್ ಲಸಿಕೆಯನ್ನು ನೀಡಲಾಗಿದೆ ಎಂದು ಆರೋಗ್ಯ ಇಲಾಖೆಯ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X