ಸ್ವಾತಂತ್ರ್ಯ ಸಂಗ್ರಾಮವೇ ದೇಶದ ಇತಿಹಾಸ: ವಿನಯ ಕುಮಾರ್ ಸೊರಕೆ

ಉಡುಪಿ, ಜು.18: 75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವ ಕೆಲಸ ಪಕ್ಷದಿಂದ ಆಗಬೇಕು. ಸ್ವಾತಂತ್ರ್ಯ ಸಂಗ್ರಾಮವೇ ದೇಶದ ಇತಿಹಾಸ. ಸ್ವಾತಂತ್ರ ಪಡೆಯಲು ಕಾಂಗ್ರೆಸ್ ಪಕ್ಷ ನೀಡಿದ ಕೊಡುಗೆ ಯನ್ನು ಜನರಿಗೆ ತಲುಪಿಸುವಲ್ಲಿ ಕಾರ್ಯಕರ್ತರಿಗೆ ಅರಿವು ಮೂಡಿಸಬೇಕಾಗಿದೆ ಎಂದು ಮಾಜಿ ಸಚಿವ, ಕೆಪಿಸಿಸಿ ಉಪಾಧ್ಯಕ್ಷ ವಿನಯ ಕುಮಾರ್ ಸೊರಕೆ ಹೇಳಿದ್ದಾರೆ.
ಉಡುಪಿ ಬ್ರಹ್ಮಗಿರಿಯಲ್ಲಿರುವ ಕಾಂಗ್ರೆಸ್ ಭವನದಲ್ಲಿ ಸೋಮವಾರ ನಡೆದ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡುತ್ತಿದ್ದರು. ಮಾಜಿ ಸಚಿವ, ಪಕ್ಷದ ಜಿಲ್ಲಾ ಉಸ್ತುವಾರಿ ಅಭಯಚಂದ್ರ ಜೈನ್ ಮಾತನಾಡಿ, ಸಂವಿಧಾನವನ್ನು ಬದಲಿಸುವ ಹುನ್ನಾರ ನಡೆಯುತ್ತಿದೆ. ದೇಶಕ್ಕೆ ಬಲಿದಾನ ಮಾಡಿದ ಪಕ್ಷ ನಮ್ಮದು. ದೇಶವನ್ನು ಸದ್ನಡಗೊಳಿಸಲು ನಾವು ಕಟ್ಟಿಬದ್ಧರಾಗೋಣ ಪಕ್ಷದಲ್ಲಿರುವ ಸಂಪರ್ಕದ ಕೊರತೆ ನೀಗಿಸಿ ಬಡವರಿಗೆ ಸ್ವಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು ಮಾತನಾಡಿ, ದೇಶವು ಈ ಬಾರಿ 75ನೆ ಸ್ವಾತಂತ್ರದ ಅಮೃತ ಮಹೋತ್ಸವ ಆಚರಿಸುವ ಸುಸಂದರ್ಭದಲ್ಲಿ ಪ್ರತೀ ಬ್ಲಾಕ್ ಮಟ್ಟದಲ್ಲಿ ಪಾದ ಯಾತ್ರೆಯನ್ನು ಆಯೋಜಿಸಲಾಗುವುದು. ಜನರಲ್ಲಿ ಜಾಗೃತಿ ಮೂಡಿಸುವ ಈ ಕಾರ್ಯಕ್ರಮದಲ್ಲಿ ಪ್ರತಿ ಯೊಬ್ಬ ಕಾರ್ಯಕರ್ತರು ಭಾಗವಹಿಸಬೇಕೆಂದು ಹೇಳಿದರು.ವಿಧಾನ ಪರಿಷತ್ ಸದಸ್ಯ ಮಂಜುನಾಥ ಭಂಡಾರಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎ.ಗಪೂರ್ ಮಾತನಾಡಿದರು. ಇತ್ತೀಚೆಗೆ ನಿಧರರಾದ ಹಿರಿಯ ಕಾಂಗ್ರೆಸಿಗರಾದ ಉದ್ಯಮಿ ಇರ್ವಿನ್ ಅದ್ರಾಂದೆ, ಹೇರೂರು ಚಾಂತಾರು ಗ್ರಾಪಂ ಮಾಜಿ ಉಪಾಧ್ಯಕ್ಷ ಉಮೇಶ್ ಶೆಟ್ಟಿ ಹಾಗೂ ಉದಯ ಕುಂದರ್ ಕಪ್ಪೆಟ್ಟು ಅವರಿಗೆ ಡಾ.ಸುನೀತಾ ಶೆಟ್ಟಿ ನುಡಿ ನಮನ ಸಲ್ಲಿಸಿದರು.
ಸಭೆಯಲ್ಲಿ ಮುಖಂಡರಾದ ಮುಲ್ಯಾಡಿ ಶಿವರಾಮ ಶೇಟ್ಟಿ, ಭುಜಂಗ ಶೆಟ್ಟಿ, ನೀರೆ ಕಷ್ಣ ಶೆಟ್ಟಿ, ಸರಸು ಡಿ.ಬಂಗೇರ, ಕುಶಲ ಶೆಟ್ಟಿ, ಬಿಪಿನ್ ಚಂದ್ರಪಾಲ್ ವಕ್ರೆ, ನಿತ್ಯಾನಂದ ಶೆಟ್ಟಿ, ಬಿ.ನರಸಿಂಹ ಮೂರ್ತಿ, ನವೀನ್‌ಚಂದ್ರ ಶೆಟ್ಟಿ, ಅಬ್ದುಲ್ ಅಜೀಜ್, ಹಬೀಬ್ ಆಲಿ, ಕಿಶನ್ ಹೆಗ್ಡೆ ಕೊಳ್ಕಬೈಲ್, ಹರೀಶ್ ಕಿಣಿ, ಬ್ಲಾಕ್ ಅಧ್ಯಕ್ಷರುಗಳಾದ ರಮೇಶ್ ಕಾಂಚನ್, ಮದನ್ ಕುಮಾರ್, ಸಂತೋಷ್ ಕುಲಾಲ್, ಹರಿಪ್ರಸಾದ್ ಶೆಟ್ಟಿ, ದಿನಕರ್ ಹೇರೂರು, ಸದಾಶಿವ ದೇವಾಡಿಗ, ಪ್ರದೀಪ್ ಕುಮಾರ್, ನವೀನ್ ಚಂದ್ರ ಸುವರ್ಣ, ಶಂಕರ್ ಕುಂದರ್ ಹಾಗೂ ಶಬ್ಬಿರ್ ಅಹ್ಮದ್, ದೀಪಕ್ ಕೋಟ್ಯಾನ್, ಯತೀಶ್ ಕರ್ಕೇರ, ಎಂ.ಪಿ. ಮೊದಿನಬ್ಬ, ಲೂಯಿಸ್ ಲೋಬೋ, ಉದ್ಯಾವರ ನಾಗೇಶ್ ಕುಮಾರ್, ಚಂದ್ರಶೇಖರ ಶೆಟ್ಟಿ, ಇಸ್ಮಾಯಿಲ್ ಅತ್ರಾಡಿ ಉಪಸ್ಥಿತರಿದ್ದರು.ಜಿಲ್ಲಾ ಉಪಾಧ್ಯಕ್ಷ ಪ್ರಖ್ಯಾತ ಶೆಟ್ಟಿ ಸ್ವಾಗತಿಸಿದರು. ಸಹಕಾರಿ ಕಾಂಗ್ರೆಸ್ ಅಧ್ಯಕ್ಷ ಕೆ.ಅಣ್ಣಯ್ಯ ಸೇರಿಗಾರ್ ವಂದಸಿದರು, ವಕ್ತಾರ ಭಾಸ್ಕರ ರಾವ್ ಕಿದಿಯೂರು ಕಾರ್ಯಕ್ರಮ ನಿರ್ವಹಿಸಿದರು.