ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಭೆ

ಮಂಗಳೂರು, ಜು.18: ದ.ಕ.ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಯ ಕಾರ್ಯಕಾರಿಣಿ ಸಭೆಯು ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಸೋಮವಾರ ನಡೆಯಿತು.
ದ.ಕ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಲುಕ್ಮಾನ್ ಬಂಟ್ವಾಳ ಅಧ್ಯಕ್ಷತೆ ವಹಿಸಿದ್ದರು. ಸಭೆಯಲ್ಲಿ ’ಯೂತ್ ಜೋಡೋ-ಬೂತ್ ಜೋಡೋ’ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ಸಭೆಯಲ್ಲಿ ಭಾರತೀಯ ಯುವ ಕಾಂಗ್ರೆಸ್ ಸಮಿತಿಯ ರಾಷ್ಟ್ರೀಯ ಸಂಯೋಜಕ ತೇಜಸ್ವಿ ಮಂಜ್ರೆಕರ್, ರಾಜ್ಯ ಉಪಾಧ್ಯಕ್ಷೆ ಭವ್ಯಾ ಕೆ.ಆರ್., ರಾಜ್ಯ ಕಾರ್ಯದರ್ಶಿ ದೀಪಕ್ ರಾಜಾಹುಲಿ ಮತ್ತಿತರರು ಉಪಸ್ಥಿತರಿದ್ದರು.
Next Story