ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೆ ಸಾಹುಲ್ ಹಮೀದ್ ಕದಿಕೆ ನೇಮಕ

ಮುಲ್ಕಿ, ಜು. 18: ಕರ್ನಾಟಕ ಪ್ರದೇಶ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ಕೆ. ಸಾಹುಲ್ ಹಮೀದ್ ಕದಿಕೆ ಅವರನ್ನು ನೇಮಕ ಮಾಡಲಾಗಿದೆ.
ಸೋಮವಾರ ಮುಲ್ಕಿ ಸ್ವಾಗತ್ ಸಭಾಭವನದಲ್ಲಿ ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಕೆ. ಸಾಹುಲ್ ಹಮೀದ್ ಅವರು, ಎಐಸಿಸಿ ಕಾರ್ಯದರ್ಶಿ ಐವನ್ ಡಿಸೋಜಾ, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಹಾಗೂ ಸಂಸದರಾದ ಇಮ್ರಾನ್ ಪ್ರತಾಪಗಿರಿ ಅವರ ನಿರ್ದೇಶನದಂತೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಅಧ್ಯಕ್ಷರು ಹಾಗೂ ವಿಧಾನಪರಿಷತ್ ಸದಸ್ಯರಾದ ಅಬ್ದುಲ್ ಜಬ್ಬಾರ್ ಅವರ ಶಿಫಾರಸಿನ ಮೇರೆಗೆ ಕೆಪಿಸಿಸಿ ಅಲ್ಪಸಂಖ್ಯಾತರ ಘಟಕದ ರಾಜ್ಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ ಎಂದರು.
ಸಾಹುಲ್ ಹಮೀದ್ ಅವರು ಕರ್ನಾಟಕ ಸರಕಾರದ ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಸದಸ್ಯರಾಗಿ ಮುಲ್ಕಿ ಬ್ಲಾಕ್ ಕಾಂಗ್ರೆಸ್ ನ ಜವಾಬ್ದಾರಿಗಳನ್ನು ನಿರ್ವಹಿಸಿದ್ದಾರೆ. ಅಲ್ಲದೆ ಹಲವು ಸಂಘ ಸಂಸ್ಥೆಗಳಲ್ಲಿ ವಿವಿಧ ಹುದ್ದೆಗಳಲ್ಲಿ ಕಾರ್ಯ ನಿರ್ವಹಿಸಿದ್ದಾರೆ.
Next Story