ಮಂಗಳೂರು: ನೀರಿನ ದರ ಇಳಿಕೆ
ಮಂಗಳೂರು, ಜು.18: ಮಂಗಳೂರು ಮಹಾನಗರಪಾಲಿಕೆಯ ವ್ಯಾಪ್ತಿಯಲ್ಲಿ ಕುಡಿಯುವ ನೀರಿನ ದರದಲ್ಲಿ ಇಳಿಕೆ ಮಾಡಲಾಗಿದೆ ಎಂದು ಮೇಯರ್ ಪ್ರೇಮಾನಂದ ಶೆಟ್ಟಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
ಸರಕಾರದ ಮಾನದಂಡದಂತೆ ವಿಧಿಸಲಾಗಿರುವ ಕುಡಿಯುವ ನೀರಿನ ದರವನ್ನು ಪರಿಷ್ಕರಿಸುವಂತೆ ಈ ಹಿಂದೆ ಸರಕಾರಕ್ಕೆ ಸಲ್ಲಿಸಲಾದ ಮೊದಲ ಪ್ರಸ್ತಾವನೆಯು ತಿರಸ್ಕಾರಗೊಂಡಿತ್ತು. ಆದರೆ ನೀರಿನ ದರದ ಬಗ್ಗೆ ಸಾರ್ವಜನಿಕರಿಂದ ಬರುತ್ತಿದ್ದ ದೂರುಗಳನ್ನು ಗಮನದಲ್ಲಿಟ್ಟುಕೊಂಡು ಮತ್ತೊಮ್ಮೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಂತೆ ಸರಕಾರ ಇದೀಗ ಈ ಪ್ರಸ್ತಾವನೆಗೆ ಅನುಮೋದನೆ ನೀಡಿದೆ ಎಂದು ಮೇಯರ್ ತಿಳಿಸಿದ್ದಾರೆ.
Next Story