Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಈ ಹೊತ್ತಿನ ಹೊತ್ತಿಗೆ
      • ಜನಚರಿತೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ...

ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ ಯತ್ನ: ಅಗತ್ಯ ವಸ್ತುಗಳ ಮೇಲಿನ ಜಿಎಸ್‌ಟಿ ವಿರುದ್ಧ ಯು.ಟಿ.ಖಾದರ್ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ19 July 2022 12:47 PM IST
share
ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ ಯತ್ನ: ಅಗತ್ಯ ವಸ್ತುಗಳ  ಮೇಲಿನ ಜಿಎಸ್‌ಟಿ ವಿರುದ್ಧ ಯು.ಟಿ.ಖಾದರ್ ಆಕ್ರೋಶ

ಮಂಗಳೂರು : ಅಕ್ಕಿ, ಗೋಧಿ, ಬೆಲ್ಲ, ಜೇನುತುಪ್ಪ, ಪೆನ್ಸಿಲ್ ಸೇರಿದಂತೆ ದಿನಬಳಕೆಯ ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕುವ ಮೂಲಕ ಬಿಜೆಪಿ ಸರಕಾರ ಜನರನ್ನು ಲೂಟಿ ಮಾಡಿ ಖಜಾನೆ ತುಂಬಿಸುವ ಯತ್ನ ನಡೆಸುತ್ತಿದೆ. ಸರಕಾರ ನಡೆಸಲು ಜನರ ಜೇಬಿಗೆ ಕತ್ತರಿ ಹಾಕುತ್ತಿದೆ ಎಂದು ಶಾಸಕ ಯು.ಟಿ.ಖಾದರ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದ.ಕ. ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನವೀಯತೆ, ಕುರಣೆ ಇಲ್ಲದ ಸರಕಾರ ಇನ್ನು ಶವವನ್ನು ಹೊತ್ತು ಕೊಂಡು ಹೋಗುವುದಕ್ಕೂ ತೆರಿಗೆ ಹಾಕದಿದ್ದರೆ ಸಾಕು ಎಂದು ಅಸಮಾಧಾನ ವ್ಯಕ್ತಪಡಿಸಿದರು.

ದೇಶದ ಆರ್ಥಿಕ ಪರಿಸ್ಥಿತಿ ಹದಗೆಟ್ಟಿದೆ. ಆರ್ಥಿಕ ಪರಿಸ್ಥಿತಿಯನ್ನು ಬುಡಮೇಲು ಮಾಡಲಾಗಿದೆ. ಅದನ್ನು ನಿಭಾಯಿಸುವ ಸಾಮರ್ಥ್ಯ ಇಲ್ಲದ ಬಿಜೆಪಿ ಸರಕಾರ ಜನರ ಮೇಲೆ ಜಿಎಸ್‌ಟಿ ರೂಪದಲ್ಲಿ ಹೊರೆ ಹಾಕುತ್ತಿದೆ. ಜಿಎಸ್‌ಟಿ ಹಣ ಮತ್ತೆ ಸಿಗುತ್ತದೆ ಎನ್ನುವುದಾದರೆ ಹಾಕುವುದು ಯಾಕೆ? ಅಡುಗೆ ಅನಿಲಕ್ಕೆ 400 ರೂ.ಗಳಿದ್ದಾಗ ಸಬ್ಸಿಡಿ ದೊರೆಯುತ್ತಿತ್ತು. ಈಗ 1000 ರೂ. ಮೀರಿದರೂ ಸಬ್ಸಿಡಿ ದೊರೆಯುತ್ತಿಲ್ಲ. ಜನರ ಕಷ್ಟ ಸರಕಾರಕ್ಕೆ ಅರ್ಥವಾಗುತ್ತಿಲ್ಲ. ಸರಕಾರ ಏನು ಮಾಡುತ್ತಿದೆ ಎಂದು ಜನರಿಗೆ ಅರ್ಥವಾಗದ ಪರಿಸ್ಥಿತಿ ನಿರ್ಮಾಣವಾಗುತ್ತಿದೆ. ಜಿಎಸ್‌ಟಿ ಜಾರಿಗೆ ತರುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಗಬ್ಬರ್ ಸಿಂಗ್ ಟ್ಯಾಕ್ಸ್ ಎಂದು ಟೀಕಿಸಿದ್ದರು. ಆವಾಗ ಅವರನ್ನೇ ಅಪಹಾಸ್ಯ ಮಾಡಲಾಯಿತು. ಇದೀಗ ಜನರ ಮೇಲೆ ತೆರಿಗೆ ಹೊರೆ ಹಾಕುವ ಸರಕಾರ ಕಾರ್ಪೊರೇಟ್ ತೆರಿಗೆ ಕಡಿಮೆ ಮಾಡಿದ್ದರ ಹಿಂದಿನ ಲಾಜಿಕ್ ಏನೆಂದು ಅರ್ಥವಾಗುತ್ತಿಲ್ಲ. ಜಿಎಸ್‌ಟಿ ಉತ್ತಮ ನೀತಿಯಾಗಿದ್ದರೂ ಬಿಜೆಪಿ ಅದನ್ನು ಅತ್ಯಂತ ಕೆಟ್ಟದಾಗಿ ಜಾರಿಗೊಳಿಸುತ್ತಿದೆ ಎಂದು ಆರೋಪಿಸಿದರು.

ಅಗತ್ಯ ವಸ್ತುಗಳ ಮೇಲೆ ಜಿಎಸ್‌ಟಿ ಹಾಕುವ ಜತೆಯಲ್ಲೇ 1000 ರೂ.ವರೆಗಿನ ಹೊಟೇಲ್ ರೂಂ ಮೇಲೂ, ಸೋಲಾರ್, ಎಲ್‌ಇಡಿ ಮೊದಲಾದವುಗಳ ಮೇಲೂ ತೆರಿಗೆ ಹಾಕುವ ಮೂಲಕ ಸರಕಾರ ಮಾನವೀಯತೆ, ಅನುಕಂಪವೆಂಬುದನ್ನೇ ಮರೆತಂತಿದೆ. ಇದರಿಂದ ವ್ಯವಹಾರಸ್ಥರಿಗೆ ಯಾವುದೇ ತೊಂದರೆ ಆಗದಿದ್ದರು ಸಾಮಾನ್ಯ ಗ್ರಾಹಕರು ಹೊರೆ ಅನುಭವಿಸಬೇಕಾಗಿದೆ. ಕಳೆದ ಎಂಟು ವರ್ಷಗಳ ಅವಧಿಯಲ್ಲಿ ಜನರ ವೇತನ, ಆದಾಯದಲ್ಲಿ ಹೆಚ್ಚಿನ ಏರಿಕೆಯಾಗದಿದ್ದರೂ ಈ ರೀತಿಯ ತೆರಿಗೆ ಹೊರೆಯಿಂದ ಜೀವನ ಸಾಗಿಸುವುದಾದರೂ ಹೇಗೆ ಎಂದು ಅವರು ಪ್ರಶ್ನಿಸಿದರು. ಕಾಂಗ್ರೆಸ್ ಇದನ್ನು ಖಂಡಿಸುವುದಲ್ಲದೆ, ಶೀಘ್ರದಲ್ಲೇ ತೀವ್ರ ರೀತಿಯ ಹೋರಾಟವನ್ನು ರೂಪಿಸಲಿದೆ ಎಂದರು.

ಜಿಎಸ್‌ಟಿ ಅನುದಾನದಲ್ಲಿಯೂ ರಾಜ್ಯಕ್ಕೆ ಕೇಂದ್ರ ಸರಕಾರ ಅನ್ಯಾಯ ಮಾಡಿದೆ. ದೇಶದಲ್ಲಿ ಕರ್ನಾಟಕ ಅತ್ಯಧಿಕ ತೆರಿಗೆ ಪಾವತಿದಾರರ ೨ನೆ ಸ್ಥಾನದಲ್ಲಿ ಗುರುತಿಸಿಕೊಂಡಿದೆ. ಹಾಗಿದ್ದರೂ ಜಿಎಸ್‌ಟಿ ಪಾಲು ರಾಜ್ಯಕ್ಕೆ ದೊರಕಿದ್ದು 1,26,000 ಕೋಟಿ ರೂ. ವಾಸ್ತವದಲ್ಲಿ ಅದು 19.50 ಲಕ್ಷ ಕೋಟಿ ರೂ.ಗಳಾಗಬೇಕಿದೆ. ಇದನ್ನು ಪ್ರಶ್ನಿಸಬೇಕಾದ ನಮ್ಮ ರಾಜ್ಯದ 25 ಮಂದಿ ಸದಸ್ಯರು ಬಾಯಿಗೆ ಪ್ಲಾಸ್ಟರ್ ಹಾಕಿ ಕುಳಿತಿದ್ದಾರೆ ಎಂದು ಖಾದರ್ ಆಕ್ಷೇಪಿಸಿದರು.

ಪ್ರಜಾಪ್ರಭುತ್ವದಲ್ಲಿ ಯಾವುದೇ ಅನ್ಯಾಯ ಆದಾಗ ಪ್ರತಿಪಕ್ಷ ಧ್ವನಿ ಎತ್ತಬೇಕಾಗುತ್ತದೆ. ಆದರೆ ಪ್ರಸಕ್ತ ಬಿಜೆಪಿ ಆಡಳಿತದ ಸರಕಾರದಲ್ಲಿ ಪ್ರತಿಪಕ್ಷದ ಧ್ವನಿಯನ್ನು ದಮನ ಮಾಡುವ ಕೆಲಸವನ್ನು ಮಾಡುತ್ತಿದೆ ಎಂದು ಸರಕಾರಕ್ಕೆ ಸುಪ್ರೀಂ ಕೋರ್ಟ್ ಚಾಟಿ ಬೀಸಿದೆ. ಆರ್ಥಿಕ ಸಂಕಷ್ಟದ ಬಗ್ಗೆ ಬಸ್ಸು ಮಾಲಕರು, ರಿಕ್ಷಾ ಚಾಲಕರು ಎಲ್ಲರೂ ಮಾತನಾಡುತ್ತಾರೆ. ಆದರೆ ಪ್ರತಿಭಟನೆಗೆ ಕೈಜೋಡಿಸಲು ಹೇಳಿದರೆ ಹಿಂದೇಟು ಹಾಕುತ್ತಾರೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಮೇಲೆ ಸವಾರಿ ಮಾಡುತ್ತಿರುವ ಸರಕಾರದ ನಡೆಗೆ ಜನರ ಮೌನವೂ ಒಂದು ಕಾರಣ ಎಂದು ಅವರು ಹೇಳಿದರು.

ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ವಿರುದ್ಧದ ಇಡಿ ನೋಟೀಸು ಕುರಿತಂತೆ ರಾಜ್ಯ ಮಟ್ಟದಲ್ಲಿ ಜು. 21ರಂದು ಮತ್ತು ಜಿಲ್ಲಾ ಮಟ್ಟದಲ್ಲಿ ಜು. 25ರಂದು ಪ್ರತಿಭಟನೆ ನಡೆಸಲು ನಿರ್ಧರಿಸಲಾಗಿದೆ. ತನ್ನ ಪ್ರಧಾನಿ ಹುದ್ದೆಯನ್ನೇ ತ್ಯಾಗ ಮಾಡಿದ್ದ ನಾಯಕಿಯೊಬ್ಬರ ಮೇಲೆ ಯಾವುದೇ ಕಾರಣವಿಲ್ಲದೆ ಇಡಿ ನೋಟೀಸು ನೀಡುತ್ತಿರುವುದು ರಾಜಕೀಯ ದ್ವೇಷ ಅಲ್ಲದೆ ಮತ್ತೇನು ಎಂದು ಪ್ರಶ್ನಿಸಿದರು.

2015ರಲ್ಲಿ ಅಂತಿಮಗೊಂಡ ಪ್ರಕರಣವೊಂದಕ್ಕೆ ಸಂಬಂಧಿಸಿ ಮತ್ತೆ ವಿಚಾರಣೆಗೆ ನೋಟೀಸು ನೀಡಿರುವ ಕುರಿತಂತೆ ಯಾವ ಠಾಣೆಯಲ್ಲಿ, ಯಾರು ಮತ್ತೆ ಯಾವ ದೂರು ನೀಡಿದ್ದಾರೆ ಎಂಬ ಕುರಿತಾದ ಎಫ್‌ಐಆರ್ ಪ್ರತಿ ಒದಗಿಸಲಿ ಎಂದು ಅವರು ಸವಾಲು ಹಾಕಿದರು.

ಗೋಷ್ಠಿಯಲ್ಲಿ ಮುಖಂಡರಾದ ಅಭಯಚಂದ್ರ ಜೈನ್, ಐವನ್ ಡಿಸೋಜಾ, ಶಕುಂತಳಾ ಶೆಟ್ಟಿ, ಮಿಥುನ ರೈ, ಶಶಿಧರ ಹೆಗ್ಡೆ, ಶಾಹುಲ್ ಹಮೀದ್, ಟಿ.ಕೆ. ಸುಧೀರ್, ಸುಭಾಷ್, ಪದ್ಮನಾಭ ನರಿಂಗಾನ, ಮೋನಪ್ಪ ಪೂಜಾರಿ, ಪದ್ಮನಾಭ ಅಮೀನ್ ಮೊದಲಾದವರು ಉಪಸ್ಥಿತರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X