Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಶ್ಯಾ -ಉಕ್ರೇನ್ ಯುದ್ಧದಿಂದಾಗಿ ಕಾಗದದ...

ರಶ್ಯಾ -ಉಕ್ರೇನ್ ಯುದ್ಧದಿಂದಾಗಿ ಕಾಗದದ ಕೊರತೆ, ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಹಿನ್ನಡೆ: ಸಚಿವ ಬಿ.ಸಿ. ನಾಗೇಶ್

ವಾರ್ತಾಭಾರತಿವಾರ್ತಾಭಾರತಿ19 July 2022 7:29 PM IST
share
ರಶ್ಯಾ -ಉಕ್ರೇನ್ ಯುದ್ಧದಿಂದಾಗಿ ಕಾಗದದ ಕೊರತೆ, ಕಲಿಕಾ ಚೇತರಿಕೆ ಕಾರ್ಯಕ್ರಮಕ್ಕೆ ಹಿನ್ನಡೆ: ಸಚಿವ ಬಿ.ಸಿ. ನಾಗೇಶ್

ಬೆಂಗಳೂರು, ಜು.19: ಕೊರೋನ ಕಾರಣದಿಂದ ಉಂಟಾಗಿದ್ದ ಶೈಕ್ಷಣಿಕ ಹಿನ್ನಡೆಯನ್ನು ಸರಿಪಡಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಆರಂಭಿಸಲಾಗಿದ್ದು, ರಶ್ಯಾ -ಉಕ್ರೇನ್ ಯುದ್ಧದಿಂದಾಗಿ ಚೇತರಿಕೆ ಕಾರ್ಯಕ್ರಮಕ್ಕೆ ಹಿನ್ನಡೆಯಾಗಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ಬಿ.ಸಿ. ನಾಗೇಶ್ ತಿಳಿಸಿದ್ದಾರೆ.

ಮಂಗಳವಾರ ಪ್ರೆಸ್‍ಕ್ಲಬ್‍ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಅವರು, ಕಳೆದ ಎರಡು ವರ್ಷಗಳಿಂದ ಕೊರೋನ ಕಾರಣಕ್ಕಾಗಿ ಶಾಲೆಗಳನ್ನು ಸಮರ್ಪಕವಾಗಿ ನಡೆಸಲು ಸಾಧ್ಯವಾಗಲಿಲ್ಲ. ನಂತರ ಶಿಕ್ಷಕರ ವರ್ಗಾವಣೆ ಸಮಸ್ಯೆ ಹಾಗೂ ಪ್ರತಿಭಟನೆಗಳಿಂದ ಶಾಲೆಗಳನ್ನು ನಡೆಸಲು ಕಷ್ಟವಾಯಿತು. ಮಕ್ಕಳನ್ನು ಪರೀಕ್ಷೆ ಇಲ್ಲದೆ ಪಾಸ್ ಮಾಡಲಾಯಿತು. ಹಾಗಾಗಿ ಶೈಕ್ಷಣಿಕ ವರ್ಷವನ್ನು ಸರಿದೂಗಿಸಲು ಕಲಿಕಾ ಚೇತರಿಕೆ ಕಾರ್ಯಕ್ರಮವನ್ನು ಜಾರಿಗೊಳಿಸಲಾಯಿತು. ಆದರೆ ರಷ್ಯಾ-ಉಕ್ರೇನ್ ಕದನದಿಂದಾಗಿ ಕಾಗದ ಸರಬರಾಜು ಕಡಿಮೆಯಾಗಿ ಚೇತರಿಕೆ ಕಾರ್ಯಕ್ರಮಕ್ಕೆ ಹಿನ್ನಡೆಯಾಗಿದೆ ಎಂದು ಅವರು ತಿಳಿಸಿದರು.

ಸರಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ ನೀಡಲು ಹೋಬಳಿ ಮಟ್ಟದಲ್ಲಿ ಮಾದರಿ ಶಾಲೆಗಳನ್ನು ರೂಪಿಸಲಾಗುತ್ತಿದ್ದು, ಮಕ್ಕಳಿಗೆ ಇಂಗ್ಲಿಷ್‍ನ್ನು ಕಲಿಸುವ ನಿಟ್ಟಿನಲ್ಲಿ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ನಡೆಸಲು ಚರ್ಚೆಗಳು ನಡೆದಿವೆ. ಈ ಸ್ಪೋಕನ್ ಇಂಗ್ಲಿಷ್ ತರಗತಿಗಳನ್ನು ನಡೆಸಲು ಯಾವುದೇ ಸಂಸ್ಥೆಗಳಿಗೆ ವಹಿಸದೆ, ಸರಕಾರಿ ಶಾಲಾ ಶಿಕ್ಷಕರಿಂದಲೇ ನಡೆಸಲಾಗುವುದು ಎಂದು ಮಾಹಿತಿ ನೀಡಿದರು.

ಸರ್ವಶಿಕ್ಷಣ ಅಭಿಯಾನ ಯೋಜನೆಯಡಿ ಪ್ರತಿ 2 ಕಿ.ಮೀ.ಗೆ ಒಂದು ಶಾಲೆಯನ್ನು ಸ್ಥಾಪಿಸಬೇಕು ಎಂದು ನಿರ್ಧಾರವಾಗಿದೆ. ರಾಜ್ಯದಲ್ಲಿ 48 ಸಾವಿರಕ್ಕೂ ಹೆಚ್ಚು ಸರಕಾರಿ ಶಾಲೆಗಳಿದ್ದು, 2,800 ಶಾಲೆಗಳಲ್ಲಿ ಕಡಿಮೆ ದಾಖಲಾತಿ ಇದೆ. 12 ಸಾವಿರಕ್ಕೂ ಅಧಿಕ ಶಾಲೆಗಳಲ್ಲಿ 25ಕ್ಕೂ ಕಡಿಮೆ ಮಕ್ಕಳು ದಾಖಲಾಗಿದ್ದಾರೆ. ಸರಕಾರವು ಯಾವುದೇ ಶಾಲೆಗಳನ್ನು ಮುಚ್ಚುವುದಿಲ್ಲ. ಈಗ ಅಂಗನವಾಡಿಗಳಲ್ಲೂ ಕಡಿಮೆ ಮಕ್ಕಳು ದಾಖಲಾಗುತ್ತಿದ್ದಾರೆ ಎಂದು ಬೇಸರ ವ್ಯಕ್ತಪಡಿಸಿದರು.

ಗ್ರಾಮೀಣ ಪ್ರದೇಶದ ಮಕ್ಕಳಿಗೆ ಸಾರಿಗೆ ಸೌಲಭ್ಯ ಕಲ್ಪಿಸಲು ‘ಶಾಲೆಗೊಂದು ವಾಹನ' ಯೋಜನೆ ಜಾರಿಗೆ ಚಿಂತನೆ ನಡೆಸಲಾಗಿದೆ. ಅಗತ್ಯಕ್ಕೆ ತಕ್ಕಂತೆ ಆಯಾ ಕ್ಷೇತ್ರವಾರು ಶಾಸಕರ ಅನುದಾನದಲ್ಲಿ ಶಾಲೆಗೆ ಒಂದು ವಾಹನ ಖರೀದಿ ಮಾಡಲಾಗುವುದು. ಆನಂತರ, ಇದನ್ನು ಆಯಾ ಶಾಲೆಯ ಎಸ್‍ಡಿಎಂಸಿ ಸಮಿತಿಗಳೇ ನಿರ್ವಹಣೆ ಮಾಡಲಿವೆ ಎಂದು ಅವರು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ ಬಹುತೇಕ ಶಾಲೆಗಳು ಗ್ರಾಮಸ್ಥರು ನೀಡಿರುವ ಜಮೀನಿನಲ್ಲಿ ನಡೆಯುತ್ತಿವೆ. ಅದನ್ನು ಸರಕಾರ ಜಮೀನನ್ನಾಗಿ ಮಾಡಿಕೊಳ್ಳುವ ಪ್ರಕ್ರಿಯೆ ನಡೆಯುತ್ತಿದೆ. ಈ ಬಗ್ಗೆ ಕಂದಾಯ ಇಲಾಖೆಯ ಸಚಿವರೊಂದಿಗೆ ಚರ್ಚೆ ಆಗಿದೆ. ನವೆಂಬರ್ ಒಳಗೆ ಎಲ್ಲಾ ಶಾಲೆಗಳ ಸ್ಥಿರಾಸ್ತಿಯನ್ನು ಸರಕಾರದ ಸುಪರ್ದಿಗೆ ಪಡೆಯಲಾಗುವುದು ಎಂದರು.

10 ಮಕ್ಕಳು ಇರುವ ಶಾಲೆಯಲ್ಲೂ ಓರ್ವ ಶಿಕ್ಷಕರನ್ನು ನಿಯೋಜನೆ ಮಾಡಲಾಗಿದ್ದು, 11ಕ್ಕಿಂತ ಹೆಚ್ಚು ಮಕ್ಕಳಿರುವ ಶಾಲೆಗೆ ಇಬ್ಬರು ಶಿಕ್ಷಕರನ್ನು ನೀಡಲಾಗುತ್ತಿದೆ. ಪ್ರತಿ ವರ್ಷ ಎಷ್ಟು ಮಂದಿ ನಿವೃತ್ತಿ ಹೊಂದುತ್ತಾರೋ ಅಷ್ಟೇ ಜನರನ್ನು ಅದೇ ವರ್ಷ ಹೊಸದಾಗಿ ನೇಮಕಾತಿ ಮಾಡಿಕೊಳ್ಳುವ ಕುರಿತು ಪ್ರಸ್ತಾವನೆ ಇಟ್ಟಿದ್ದೇವೆ. ಈಗಾಗಲೇ 35 ಸಾವಿರ ಅತಿಥಿ ಶಿಕ್ಷಕರನ್ನು ನೇಮಿಸಲಾಗಿದೆ ಎಂದರು. 

ಶಿಕ್ಷಣ ಇಲಾಖೆಯು ಶಾಲಾಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡುತ್ತದೆ. ಆದರೆ ಶಿಕ್ಷಕರ ವರ್ಗಾವಣೆ ಸಮಸ್ಯೆಯು ಶಾಲಾ ಮಕ್ಕಳ ಮೇಲೆ ವ್ಯತಿರಿಕ್ತ ಪರಿಣಾಮ ಬೀರಬಹುದು ಎಂಬ ಕಾರಣಕ್ಕಾಗಿ ಶಿಕ್ಷಕರ ವರ್ಗಾವಣೆಯಲ್ಲಿ ಯಾವುದೇ ತೊಂದರೆ ಆಗದಂತೆ ಕೌನ್ಸಿಲಿಂಗ್ ಮೂಲಕ ಸಮಸ್ಯೆ ಬಗೆಹರಿಸಲಾಗುತ್ತಿದೆ. ಇದರಿಂದ ಶಿಕ್ಷಕರ ನೇಮಕಾತಿ ಮತ್ತು ವರ್ಗಾವಣೆಯಲ್ಲಿ ಯಾವುದೇ ವಿಳಂಬ ಆಗದಂತೆ ಮಾಡಲಾಗಿದೆ ಎಂದರು.

ಜು. 28ರಂದು ರಾಜ್ಯಾದಂತ ಕಟ್ಟಿರುವ 7 ಸಾವಿರ ಕೊಠಡಿಗಳ ಲೋಕಾರ್ಪಣೆ ಜೊತೆಗೆ ‘ನನ್ನ ಶಾಲೆ ನನ್ನ ಕೊಡುಗೆ’ ಆ್ಯಪ್ ಲೋಕಾರ್ಪಣೆ ಮಾಡಲಾಗುತ್ತಿದೆ. ಈ ಆ್ಯಪ್ ರಾಜ್ಯದ ಎಲ್ಲಾ ಸರಕಾರಿ ಮತ್ತು ಅನುದಾನಿತ ಶಾಲೆಗಳ ಕುಂದುಕೊರತೆಗಳ ಕುರಿತು ತಿಳಿಯುತ್ತದೆ. ಅದಕ್ಕೆ ಅದನ್ನು ತಿಳಿದು ಯಾವುದೇ ಶಾಲೆಗೆ ತಮ್ಮ ಸಹಾಯ ಮಾಡಲು ಇಚ್ಛಿಸುವವರಿಗೆ ಈ ನನ್ನ ಶಾಲೆ ನನ್ನ ಕೊಡುಗೆ ಆ್ಯಪ್ ಸಹಕಾರಿಯಾಗಿದೆ ಎಂದರು.

ರಾಜ್ಯಾದ್ಯಂತ ವಾರಕ್ಕೆ ಎರಡು ದಿನ ಮೊಟ್ಟೆ ವಿತರಣೆ 

ಕೇಂದ್ರ ಸರಕಾರದ ಶಿಫಾರಸ್ಸಿನಂತೆ ಕಲ್ಯಾಣ ಕರ್ನಾಟಕದಲ್ಲಿ ಶಾಲಾಮಕ್ಕಳಲ್ಲಿ ಪೌಷ್ಟಿಕಾಂಶ ಆಹಾರವನ್ನು ಕಳೆದ ಮೂರು ತಿಂಗಳಿನಿಂದ ನೀಡುವ ಉದ್ದೇಶದಿಂದ ಮೊಟ್ಟೆ ಮತ್ತು ಬಾಳೆ ಹಣ್ಣು ವಿತರಿಸಲಾಗಿದೆ. ಇದನ್ನು ಅಧ್ಯಯನಕ್ಕೆ ಒಳಪಡಿಸಿ ವರದಿಯನ್ನು ಪಡೆಯಲಾಗಿದ್ದು, ಉತ್ತಮ ಪ್ರತಿಕ್ರಿಯೆ ಸಿಕ್ಕಿದೆ. ಹಾಗಾಗಿ ಯೋಜನೆಯನ್ನು ರಾಜ್ಯಾದ್ಯಂತ ವಿಸ್ತರಿಸಲು ನಿರ್ಧರಿಸಿದ್ದು, ರಾಜ್ಯದ ಎಲ್ಲೆಡೆ ಈ ಯೋಜನೆ ಜಾರಿಗೆ ಬರಲಿದೆ. ವಾರದಲ್ಲಿ 2ದಿನ ಮಕ್ಕಳಿಗೆ ಮೊಟ್ಟೆಯನ್ನು, ಮೊಟ್ಟೆ ತಿನ್ನದವರಿಗೆ ಬಾಳೆಹಣ್ಣು ನೀಡುವ ಮೂಲಕ ಪೌಷ್ಟಿಕ ಆಹಾರ ಸಿಗುವಂತೆ ಮಾಡಲಾಗುವುದು.

-ಬಿ.ಸಿ.ನಾಗೇಶ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ

----------------------------------------------

ಪಠ್ಯಪರಿಷ್ಕರಣೆ ಅಗತ್ಯವಿತ್ತು, ಮಾಡಿದ್ದೇವೆ: ಬಿ.ಸಿ. ನಾಗೇಶ್

ಪಠ್ಯಪರಿಷ್ಕರಣೆಯ ಕುರಿತು ಈಗಾಗಲೇ ಸಾಕಷ್ಟು ಚರ್ಚೆಗಳು ನಡೆದಿದೆ. ಕಳೆದ ಮೂರು ತಿಂಗಳಿನಿಂದ ಇದಕ್ಕೆ ಸ್ಪಷ್ಟನೆಯನ್ನೂ ನೀಡಲಾಗಿದೆ. 2017ರಲ್ಲಿ ಎನ್‍ಸಿಇಆರ್‍ಟಿ ಬರಗೂರು ರಾಮಚಂದ್ರಪ್ಪ ಅವರ ನೇತೃತ್ವದ ಪಠ್ಯಪರಿಷ್ಕರಣೆಯ ಬಗ್ಗೆ ನೀಡಿರುವ ವರದಿಯನ್ನು ಓದಿದರೆ ಪಠ್ಯಪರಿಷ್ಕರಣೆ ಏಕೆ ಅಗತ್ಯ ಎಂದು ತಿಳಿಯುತ್ತದೆ. ಅಲ್ಲದೆ ಕೆಲವು ರಾಜಕೀಯ ಪಕ್ಷಗಳಿಗೆ ವಯಸ್ಸಾಗಿದ್ದು, ಯಾವುದನ್ನು ರಾಜಕೀಯಗೊಳಿಸಬೇಕು, ಯಾವುದನ್ನು ರಾಜಕೀಯಗೊಳಿಸಬಾರದು ಎಂಬ ಪರಿಜ್ಞಾನವೇ ಇಲ್ಲ. 

-ಬಿ.ಸಿ. ನಾಗೇಶ್, ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X