Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯಿಂದ...

ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ದೂರು

ವಾರ್ತಾಭಾರತಿವಾರ್ತಾಭಾರತಿ19 July 2022 8:07 PM IST
share
ರಾಷ್ಟ್ರಪತಿ ಚುನಾವಣೆಯಲ್ಲಿ ಬಿಜೆಪಿಯಿಂದ ನೀತಿ ಸಂಹಿತೆ ಉಲ್ಲಂಘನೆ: ಕಾಂಗ್ರೆಸ್ ದೂರು

ಬೆಂಗಳೂರು, ಜು.19: ರಾಷ್ಟ್ರಪತಿ ಸ್ಥಾನಕ್ಕೆ ಸೋಮವಾರ ನಡೆದ ಚುನಾವಣೆಯಲ್ಲಿ ಎನ್‍ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ಹಾಗೂ ರಾಜ್ಯದ ಮುಖ್ಯಮಂತ್ರಿ, ಮಂತ್ರಿಗಳು, ಶಾಸಕರು ಚುನಾವಣಾ ಅಪರಾಧ ಮಾಡಿದ್ದು, ಅವರ ವಿರುದ್ಧ ಸೆಕ್ಷನ್ 171 ಬಿ, 171 ಸಿ, 171 ಇ, 171 ಎಫ್ ಪ್ರಕಾರ ಕ್ರಮ ಜರುಗಿಸುವಂತೆ ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ನೀಡಿದೆ.

ಮಂಗಳವಾರ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ನಗರದ ಶೇಷಾದ್ರಿ ರಸ್ತೆಯಲ್ಲಿರುವ ರಾಜ್ಯ ಮುಖ್ಯ ಚುನಾವಣಾಧಿಕಾರಿಗೆ ಮಾಜಿ ಸಂಸದ ವಿ.ಎಸ್.ಉಗ್ರಪ್ಪ ನೇತೃತ್ವದ ನಿಯೋಗವು ದೂರು ಸಲ್ಲಿಸಿದೆ.

ಈ ಸಂಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಉಗ್ರಪ್ಪ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮುಕ್ತ ಹಾಗೂ ಪಾರದರ್ಶಕ ಚುನಾವಣೆ ನಡೆಯಬೇಕು. ಯಾವುದೇ ಆಮಿಷ, ಒತ್ತಡ ಹಾಕಬಾರದು. ಹಾಕಿದರೆ ಅದು ಅಪರಾಧವಾಗುತ್ತದೆ. ಇದು ಜನತಾ ಪ್ರಾತಿನಿದ್ಯ ಕಾಯ್ದೆ, ಐಪಿಸಿ ಸೆಕ್ಷನ್ ಹಾಗೂ ಅಧ್ಯಕ್ಷೀಯ ಚುನಾವಣಾ ಕಾಯ್ದೆಯಲ್ಲಿ ಪ್ರಸ್ತಾಪವಾಗಿದೆ ಎಂದರು. 

ಬಿಜೆಪಿಯವರು ರವಿವಾರ ಎಲ್ಲ ಶಾಸಕರನ್ನು ಬೆಂಗಳೂರಿನ ಹೊಟೇಲ್ ಗೆ ಕರೆಸಿ ಆಹಾರ, ಪಾನೀಯ, ಮನರಂಜನೆ ನೀಡಿದ್ದಾರೆ. ಇದೆಲ್ಲದರ ವೆಚ್ಚವನ್ನು ಮುಖ್ಯಮಂತ್ರಿ ಹಾಗೂ ಬಿಜೆಪಿ ವಹಿಸಿಕೊಂಡಿದ್ದು, ಅವರಿಗೆ ಇದೇ ರೀತಿ ಮತದಾನ ಮಾಡಬೇಕು ಎಂದು ತರಬೇತಿ ನೀಡಲಾಗಿದೆ. ಜತೆಗೆ ಅವರನ್ನು ಕರೆದೊಯ್ಯಲು ಬಿಎಂಟಿಸಿ ಬಸ್ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಉಗ್ರಪ್ಪ ಹೇಳಿದರು. 

ಗ್ರಾಮಪಂಚಾಯ್ತಿ ಮತದಾರರನ್ನು ಬಸ್ ನಲ್ಲಿ ಕೆರೆದೊಯ್ದಿದ್ದರೆ ಅವರ ವಿರುದ್ಧ ಕೇಸ್ ದಾಖಲಾಗುತ್ತಿತ್ತು. ಎನ್‍ಡಿಎ ಅಭ್ಯರ್ಥಿ ಸಮ್ಮತಿ ಆಧಾರದ ಮೇಲೆ ಇದನ್ನು ಮಾಡಿದ್ದು, ಈ ವಿಚಾರವಾಗಿ ಪ್ರಕರಣ ದಾಖಲಿಸಬೇಕು. ಹೀಗಾಗಿ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದೇವೆ ಎಂದು ಅವರು ತಿಳಿಸಿದರು.
ಅಲ್ಲದೆ ವಿಧಾನಸೌದದಲ್ಲಿ ನಡೆದ ಮತದಾನದಲ್ಲಿ ಎನ್‍ಡಿಎ ಅಭ್ಯರ್ಥಿಗೆ ದಾಖಲಾಗಿರುವ ಎಲ್ಲ ಮತಗಳನ್ನು ಅಸಿಂಧು ಎಂದು ಪರಿಗಣಿಸಬೇಕು. ಇಲ್ಲಿನ ಮುಖ್ಯ ಚುನಾವಣಾಧಿಕಾರಿ ತಮ್ಮ ದೂರಿನ ಸಂಬಂಧ ಸಕಾರಾತ್ಮಕವಾಗಿ ಸ್ಪಂದಿಸಿದ್ದು, ನಮ್ಮ ದೂರನ್ನು ಕೇಂದ್ರ ಚುನಾವಣಾ ಆಯೋಗಕ್ಕೆ ರವಾನಿಸಲಾಗುವುದು ಎಂದು ತಿಳಿಸಿದ್ದಾರೆ ಎಂದು ಉಗ್ರಪ್ಪ ಹೇಳಿದರು. 

ಈ ರೀತಿ ಮಾಡುವ ಮೂಲಕ ಬಿಜೆಪಿ ಪ್ರಜಾಪ್ರಭುತ್ವ ವ್ಯವಸ್ಥೆ, ಸಂವಿಧಾನ, ಚುನಾವಣಾ ಪ್ರಕ್ರಿಯೆಗೆ ಅಪಚಾರ ಎಸಗಲಾಗಿದೆ. ಸರ್ವಾಧಿಕಾರಿ ಮನಸ್ಥಿತಿ ಮೂಲಕ ಚುನಾವಣೆಯನ್ನು ತಮ್ಮ ಮೂಗಿನ ನೇರಕ್ಕೆ ತಿರುಗಿಸಿಕೊಳ್ಳುವ ಪ್ರಯತ್ನ ನಡೆಯುತ್ತಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. 

ಬಿಜೆಪಿಯು ಶಾಸಕರನ್ನು ಕರೆಸಿ ಹೊಟೇಲ್‍ನಲ್ಲಿ ಇಟ್ಟಿರುವ ವಿಚಾರವಾಗಿ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾಗಿದೆ. ಯಾವ ಹೊಟೇಲ್ ನಲ್ಲಿ ಕೊಠಡಿ ಮಾಡಿದ್ದಾರೆ, ಅದರ ದಾಖಲೆಗಳನ್ನು ಪರಿಶೀಲಿಸಬಹುದು. ಅಂಗೈ ಹುಣ್ಣಿಗೆ ಕನ್ನಡಿ ಬೇಕೆ ಎನ್ನುವಂತೆ ಮಾಧ್ಯಮಗಳು ಪ್ರಸಾರ ಮಾಡಿರುವ ಎಲ್ಲ ದಾಖಲೆಗಳನ್ನು ನಾವು ಸಲ್ಲಿಸಿದ್ದೇವೆ. ಅಧಿಕಾರಿಗಳು ಇದನ್ನು ಪರಿಶೀಲಿಸಿ ಅಗತ್ಯ ಕ್ರಮ ಜರುಗಿಸುತ್ತಾರೆ ಎಂದು ಭಾವಿಸಿದ್ದೇವೆ ಉಗ್ರಪ್ಪ ಹೇಳಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ಎಚ್.ಎಂ.ರೇವಣ್ಣ, ವಿಧಾನಪರಿಷತ್ ಮಾಜಿ ಸದಸ್ಯ ವೆಂಕಟೇಶ್ ಸೇರಿದಂತೆ ಇನ್ನಿತರ ಮುಖಂಡರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X