Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ದಕ್ಷಿಣಕನ್ನಡ
  4. ಮಂಗಳೂರು; ಅಂಬೇಡ್ಕರ್ ಭವನಕ್ಕೆ...

ಮಂಗಳೂರು; ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ 2 ಕೋಟಿ ರೂ. ಅನುದಾನ: ಸಚಿವ ಕೋಟ

ವಾರ್ತಾಭಾರತಿವಾರ್ತಾಭಾರತಿ19 July 2022 8:15 PM IST
share
ಮಂಗಳೂರು; ಅಂಬೇಡ್ಕರ್ ಭವನಕ್ಕೆ ಹೆಚ್ಚುವರಿ 2 ಕೋಟಿ ರೂ. ಅನುದಾನ: ಸಚಿವ ಕೋಟ

ಮಂಗಳೂರು: ನಗರದ ಉರ್ವದಲ್ಲಿರುವ ಜಿಲ್ಲಾ ಅಂಬೇಡ್ಕರ್ ಭವನವನ್ನು ಮುಂದಿನ ದಿನಗಳಲ್ಲಿ ಪುರಭವನಕ್ಕೆ ಪರ್ಯಾಯವಾಗಿ ಮತ್ತೊಂದು ಭವನವನ್ನಾಗಿ ರೂಪಿಸುವ ದೃಷ್ಟಿಯಿಂದ ಹೆಚ್ಚುವರಿ 2 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲಾಗುವುದು ಎಂದು ಸಮಾಜ ಕಲ್ಯಾಣ ಇಲಾಖೆ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ನಗರದ ಉರ್ವಸ್ಟೋರ್‌ನಲ್ಲಿರುವ ಅಂಬೇಡ್ಕರ್ ಭವನಕ್ಕೆ ಮಂಗಳವಾರ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ಅಂಬೇಡ್ಕರ್ ಭವನ ಉದ್ಘಾಟನೆಯಾದ ಬಳಿಕ ಕೆಲವೊಂದು ವ್ಯವಸ್ಥೆ ಬಾಕಿಯಿದ್ದ ಕಾರಣದಿಂದ ಸಾರ್ವಜನಿಕರಿಗೆ ಲಭ್ಯವಿರಲಿಲ್ಲ. ಇದನ್ನು ಮನಗಂಡು ಮೇಯರ್, ಉಪಮೇಯರ್, ಹಿರಿಯ ಅಧಿಕಾರಿಗಳ ಜತೆ ಅಂಬೇಡ್ಕರ್ ಭವನ ಪರಿಶೀಲಿಸಿ ಸಭೆ ನಡೆಸಿದ್ದೇನೆ. ಅಂಬೇಡ್ಕರ್ ಭವನವನ್ನು ಮತ್ತಷ್ಟು ಸುಸಜ್ಜಿತಗೊಳಿಸಿ ಸಾರ್ವಜನಿಕ ಕಾರ್ಯಕ್ರಮಳಿಗೆ ನೀಡುವ ಉದ್ದೇಶದಿಂದ ಯೋಜನೆ ರೂಪಿಸಲಾಗಿದೆ. ವೇದಿಕೆಗೆ ಸುವ್ಯವಸ್ಥಿತ ನೆಲಹಾಸು, ಪರದೆ ವ್ಯವಸ್ಥೆ, ಲೈಟಿಂಗ್ ಮತ್ತು ಸೌಂಡ್ ಸಿಸ್ಟಂ, ಅಗ್ನಿಶಾಮಕ ವ್ಯವಸ್ಥೆ ಸಹಿತ ಇತರ ಕಾಮಗಾರಿಗಳಿಗೆ ಅಂದಾಜು 2 ಕೋ.ರೂ. ಯೋಜನಾ ವರದಿಯನ್ನು ಅಧಿಕಾರಿಗಳು ಸಿದ್ಧಪಡಿಸಿದ್ದಾರೆ. ಇದಕ್ಕೆ ಮಹಾನಗರಪಾಲಿಕೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಕ್ಕೆ ಮೀಸಲಿಟ್ಟ ಅನುದಾನ ಮತ್ತು ರಾಜ್ಯ ಸರಕಾರದಿಂದಲೂ ಅನುದಾನ ನೀಡಲಾಗುವುದು ಎಂದರು.

ಬಾಬಾ ಸಾಹೇಬ್ ಅಂಬೇಡ್ಕರ್ ಹೆಸರಿನಲ್ಲಿ ಭವ್ಯವಾದ ಭವನವು ನಗರದ ಹೃದಯಭಾಗದಲ್ಲೇ ಇದ್ದು, ಎಲ್ಲ  ಮೂಲಭೂತ ಸೌಕರ್ಯಗಳನ್ನು ಒಳಗೊಂಡಿದೆ. ನಗರದ ಪುರಭವನಕ್ಕೆ ಪರ್ಯಾಯ ರೀತಿಯಲ್ಲಿ ಈ ಭವನ ಗಮನಸೆಳೆಯುತ್ತಿದೆ. ಮುಂದಿನ ೨ ತಿಂಗಳೊಳಗೆ ಅಭಿವೃದ್ಧಿ ಕಾರ್ಯ ಪೂರ್ಣಗೊಳಿಸಿ ಸಾರ್ವಜನಿಕ ಕಾರ್ಯಕ್ರಮಕ್ಕೆ ಸಭಾಭವನ ಬಿಟ್ಟುಕೊಡುವ ಉದ್ದೇಶ ಹೊಂದಲಾಗಿದೆ ಎಂದರು.

ಶೇ. 50ರಷ್ಟು ರಿಯಾಯಿತಿ: ಅಂಬೇಡ್ಕರ್ ಭವನ ಬಾಡಿಗೆಗೆ ಸಂಬಂಧಪಟ್ಟಂತೆ ಮಹಾನಗರಪಾಲಿಕೆ ಈಗಾಗಲೇ ಒಂದು ನಿಯಮಗಳನ್ನು ರೂಪಿಸಿದೆ. ಪುರಭವನಕ್ಕೆ ಕಡಿಮೆ ದರದಲ್ಲಿ ಸಾರ್ವಜನಿಕರಿಗೆ ಸಿಗಲಿದೆ. ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಶೇ.50ರಷ್ಟು ರಿಯಾಯಿತಿಯಲ್ಲಿ ಲಭ್ಯವಾಗಲಿದೆ. ಮುಂದಿನ ದಿನಗಳಲ್ಲಿ  ಸರಕಾರಿ ಇಲಾಖೆಯ ಕಾರ್ಯಕ್ರಮಗಳು ಕೂಡಾ ಇಲ್ಲೇ ನಡೆಸುವ ಬಗ್ಗೆ ಚಿಂತಿಸಲಾಗಿದೆ. ನಿರಂತರ ಸಾಂಸ್ಕೃತಿಕ ಕಾರ್ಯಕ್ರಮ ಮೂಲಕ ಮತ್ತಷ್ಟು ಮೆರುಗು ನೀಡುವ ಬಗ್ಗೆಯೂ ಸಭೆಯಲ್ಲಿ ಚರ್ಚಿಸಲಾಗಿದೆ ಎಂದರು.

ಈ ಸಂದರ್ಭ ಮೇಯರ್ ಪ್ರೇಮಾನಂದ ಶೆಟ್ಟಿ, ಉಪ ಮೇಯರ್ ಸುಮಂಗಲಾ ರಾವ್, ಮನಪಾ ಆಯುಕ್ತ ಅಕ್ಷಯ್ ಶ್ರೀಧರ್, ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕ ಸಿದ್ಧಲಿಂಗೇಶ್ ಬೇವಿನಮತ್ತಿ, ಕಾರ್ಪೊರೇಟರ್ ಗಣೇಶ್ ಕುಲಾಲ್, ಇಂಜಿನಿಯರ್ ನರೇಶ್ ಶೆಣೈ, ಅಂಬೇಡ್ಕರ್ ಭವನ ವ್ಯವಸ್ಥಾನಾ ಸಮಿತಿ ಸದಸ್ಯ ವಿನಯ್ ನೇತ್ರ ದಡ್ಡಲ್‌ಕಾಡ್, ದಲಿತ ದೌರ್ಜನ್ಯ ವಿರೋಧಿ ಸಮಿತಿ ವಿಶ್ವನಾಥ್ ಚೆಂಡ್ತಿಮಾರ್ ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X