Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಹೆಂಡತಿಯನ್ನು ಎಟಿಎಂನಂತೆ ಉಪಯೋಗಿಸುವುದು...

ಹೆಂಡತಿಯನ್ನು ಎಟಿಎಂನಂತೆ ಉಪಯೋಗಿಸುವುದು ಮಾನಸಿಕ ಕಿರುಕುಳಕ್ಕೆ ಸಮ: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ19 July 2022 8:29 PM IST
share
ಹೆಂಡತಿಯನ್ನು ಎಟಿಎಂನಂತೆ ಉಪಯೋಗಿಸುವುದು ಮಾನಸಿಕ ಕಿರುಕುಳಕ್ಕೆ ಸಮ: ಹೈಕೋರ್ಟ್

ಬೆಂಗಳೂರು, ಜು.19: ಯಾವುದೇ ಭಾವನಾತ್ಮಕ ಸಂಬಂಧವಿಲ್ಲದೇ ಹೆಂಡತಿಯನ್ನು ಹಣ ನೀಡುವ ಹಸು ಅಥವಾ ಎಟಿಎಂಗಳಂತೆ ಉಪಯೋಗಿಸಿಕೊಳ್ಳುವುದು ಮಾನಸಿಕ ಕಿರುಕುಳಕ್ಕೆ ಸಮಾನವಾಗಿದೆ ಎಂದು ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಅಲ್ಲದೇ, ಪ್ರಕರಣದಲ್ಲಿ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ರದ್ದು ಮಾಡಿ ಮಹಿಳೆಗೆ ಪತಿಯಿಂದ ವಿಚ್ಛೇದನವನ್ನೂ ನೀಡಿದೆ.

ಗಂಡನಿಂದ ವಿಚ್ಛೇದನ ನೀಡದ ಕೌಟುಂಬಿಕ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಮಹಿಳೆಯೊಬ್ಬರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾ.ಅಲೋಕ್ ಆರಾಧೆ ಮತ್ತು ನ್ಯಾ.ಜೆ.ಎಂ.ಖಾಜಿ ಅವರಿದ್ದ ವಿಭಾಗೀಯ ಪೀಠ, ಈ ತೀರ್ಪು ನೀಡಿದೆ. 

ಗಂಡ ಹೆಂಡತಿಯೊಂದಿಗೆ ಯಾವುದೇ ಭಾವನಾತ್ಮಕ ಸಂಬಂಧವನ್ನು ಹೊಂದಿಲ್ಲ. ಕೇವಲ ಯಾಂತ್ರಿಕವಾಗಿ ಗಂಡನ ಕರ್ತವ್ಯವನ್ನು ಪೋಷಿಸಿದ್ದಾರೆ. ವ್ಯಾಪಾರದ ನೆಪದಲ್ಲಿ ಹೆಂಡತಿಯಿಂದ ಸುಮಾರು 60 ಲಕ್ಷ ರೂ. ಹಣವನ್ನು ಗಂಡ ಇಸಿದುಕೊಂಡಿದ್ದಾರೆ. ಹೆಂಡತಿಯನ್ನು ಆತ ಕೇವಲ ಹಣ ನೀಡುವ ಎಟಿಎಂ ಆಗಿ ಉಪಯೋಗಿಸಿಕೊಂಡಿದ್ದಾರೆ. ಗಂಡನ ಈ ಸ್ವಭಾವದಿಂದಾಗಿ ಹೆಂಡತಿ ಮಾನಸಿಕ ಆಘಾತಕ್ಕೆ ಒಳಗಾಗಿದ್ದಾರೆ. ಇದು ಮಾನಸಿಕ ಕಿರುಕುಳಕ್ಕೆ ಸಮವಾಗುತ್ತದೆ ಎಂದು ನ್ಯಾಯಪೀಠವು ತಿಳಿಸಿದೆ.

ಈ ಕೇಸ್‍ನಲ್ಲಿ ಗಂಡನಿಂದ ಹೆಂಡತಿಗೆ ಆಗಿರುವ ನೋವು, ಮಾನಸಿಕ ಕಿರುಕುಳ ಎಂದು ಪರಿಗಣಿಸಬಹುದು. ಕೌಟುಂಬಿಕ ನ್ಯಾಯಾಲಯ ಈ ಎಲ್ಲ ಅಂಶಗಳನ್ನು ಪರಿಗಣಿಸಲು ವಿಫಲವಾಗಿದೆ. ಅಲ್ಲದೆ, ನ್ಯಾಯಾಲಯವು ಮಹಿಳೆಯನ್ನು ಪೂರ್ಣ ವಿಚಾರಿಸದೇ ಬರೀ ಹೇಳಿಕೆಗಳನ್ನು ಮಾತ್ರ ದಾಖಲಿಸಿದೆ ಎಂದಿದೆ. 

ಮಹಿಳೆಯ ವಾದವನ್ನು ಪರಿಗಣಿಸಿರುವ ನ್ಯಾಯಪೀಠ, ಅವರಿಗೆ ವಿಚ್ಛೇದನ ನೀಡಿದೆ. ಕೌಟುಂಬಿಕ ಕಲಹದ ಕೇಸ್‍ಗಳಲ್ಲಿ ಕ್ರೌರ್ಯದ ಆರೋಪಗಳನ್ನು ಪ್ರಕರಣದ ಅರ್ಹತೆಯ ಮೇಲೆ ಪರಿಶೀಲಿಸಬೇಕು ಎಂದು ಪೀಠವು ಹೇಳಿದೆ.

ಏನಿದು ಪ್ರಕರಣ: ಮೂರು ದಶಕಗಳ ಹಿಂದೆ ವಿವಾಹವಾದ ದಂಪತಿ ಒಂದು ಹೆಣ್ಣು ಮಗುವನ್ನು ಹೊಂದಿದ್ದರು. ವ್ಯಾಪಾರ ನಡೆಸಿಕೊಂಡು ಹೋಗುತ್ತಿದ್ದ ಪತಿ ಸಾಲದ ಸುಳಿಗೆ ಸಿಲುಕಿದ್ದ. ಮರುಪಾವತಿಸಲು ಕಷ್ಟಪಡುತ್ತಿದ್ದರು. ಇದು ಮನೆಯಲ್ಲಿ ಪ್ರತಿದಿನ ಗಲಾಟೆಗೆ ಕಾರಣವಾಗಿತ್ತು. ಈ ವೇಳೆ ಮಹಿಳೆ ಜೀವನ ನಿರ್ವಹಣೆಗಾಗಿ ಬ್ಯಾಂಕ್‍ವೊಂದರ ಉದ್ಯೋಗಕ್ಕೆ ಸೇರಿಕೊಂಡಿದ್ದರು.

2008ರಲ್ಲಿ ಹೆಂಡತಿ ತನ್ನ ಗಂಡನಿಗೆ ದುಬೈನಲ್ಲಿ ಸಲೂನ್ ತೆರೆಯಲು 60 ಲಕ್ಷ ಹಣವನ್ನು ನೀಡಿದ್ದಾರೆ. ಆದರೆ, ನಷ್ಟಕ್ಕೀಡಾದ ಪತಿ ಭಾರತಕ್ಕೆ ವಾಪಸ್ ಆಗಿದ್ದರು. ಹಣ ನೀಡಲು ಪೀಡಿಸುತ್ತಿದ್ದ ಪತಿಯಿಂದ ಮಹಿಳೆ ವಿಚ್ಛೇದನ ಕೋರಿ ಕೌಟುಂಬಿಕ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಆದರೆ ಪ್ರಕರಣದಲ್ಲಿ ಯಾವುದೇ ತಿರುಳಿಲ್ಲ ಎಂದು ಕೋರ್ಟ್ ಅರ್ಜಿ ವಜಾ ಮಾಡಿತ್ತು. ಇದರ ವಿರುದ್ಧ ಆ ಮಹಿಳೆ ಹೈಕೋರ್ಟ್ ಮೊರೆ ಹೋಗಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X