Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಜಿಲ್ಲೆಗಳು
  3. ಉಡುಪಿ
  4. ಮಿಸ್‌ವರ್ಲ್ಡ್ ಸ್ಪರ್ಧೆ ಕಡೆಗೆ ಹೆಚ್ಚಿನ...

ಮಿಸ್‌ವರ್ಲ್ಡ್ ಸ್ಪರ್ಧೆ ಕಡೆಗೆ ಹೆಚ್ಚಿನ ಗಮನ: ಮಿಸ್ ಇಂಡಿಯಾ ಸಿನಿ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ19 July 2022 8:35 PM IST
share
ಮಿಸ್‌ವರ್ಲ್ಡ್ ಸ್ಪರ್ಧೆ ಕಡೆಗೆ ಹೆಚ್ಚಿನ ಗಮನ: ಮಿಸ್ ಇಂಡಿಯಾ ಸಿನಿ ಶೆಟ್ಟಿ

ಉಡುಪಿ : ನಮ್ಮ ನೆಚ್ಚಿನ ಆಸಕ್ತಿಯ ಕ್ಷೇತ್ರದಲ್ಲಿ ಛಲಬಿಡದೆ ಮುಂದು ವರಿಯಬೇಕು. ಆಗ ಮಾತ್ರ ಸಾಧನೆ ಮಾಡಲು ಸಾಧ್ಯ. ಮುಂದಿನ ದಿನಗಳಲ್ಲಿ ಮಿಸ್ ವರ್ಲ್ಡ್ ಸ್ಪರ್ಧೆ ಕಡೆಗೆ ಗಮನಹರಿಸಿದ್ದು, ಸ್ಪರ್ಧೆಯಲ್ಲಿ ಗೆಲವು ಪಡೆದ ಬಳಿಕವೂ ಉಡುಪಿಗೆ ಬರುತ್ತೇನೆ ಎಂದು ಫೆಮಿನಾ 2022 ಮಿಸ್ ಇಂಡಿಯಾ ವಿಜೇತೆ ಸಿನಿ ಶೆಟ್ಟಿ ಹೇಳಿದ್ದಾರೆ.

ಬಂಟರ ಯಾನೆ ನಾಡವರ ಮಾತೃ ಸಂಘ, ಉಡುಪಿ ತಾಲೂಕು ಸಮಿತಿ ಹಾಗೂ ಉಡುಪಿ ತಾಲೂಕಿನ ಎಲ್ಲಾ ಗ್ರಾಮೀಣ ಬಂಟರ ಸಂಘಗಳ ವತಿ ಯಿಂದ ಅಮ್ಮಣ್ಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ಮಂಗಳವಾರ ಅಭಿನಂದನೆ ಸ್ವೀಕರಿಸಿ ಅವರು ಮಾತನಾಡುತ್ತಿದ್ದರು.

ಬಂಟರ ಯಾನೆ ನಾಡವರ ಮಾತೃ ಸಂಘದ ಅಧ್ಯಕ್ಷ ಅಜಿತ್ ಕುಮಾರ್ ರೈ ಮಾಲಾಡಿ ಅಧ್ಯಕ್ಷತೆ ವಹಿಸಿದ್ದರು. ಸಂಗೀತ ನಿರ್ದೇಶಕ ಗುರುಕಿರಣ್ ಅಭಿನಂದನಾ ಭಾಷಣ ಮಾಡಿದರು. ಅಂತಾರಾಷ್ಟ್ರೀಯ ಬಂಟ್ ವೆಲ್ಫೇರ್ ಟ್ರಸ್ಟ್ ಅಧ್ಯಕ್ಷ ಗುರ್ಮೆ ಸುರೇಶ್ ಶೆಟ್ಟಿ, ತಾಲೂಕು ಮಹಿಳಾ ಒಕ್ಕೂಟದ ಅಧ್ಯಕ್ಷೆ ಶೀಲಾ ಕೆ.ಶೆಟ್ಟಿ, ಬಂಟರ ಯಾನೆ ನಾಡವರ ಮಾತೃ ಸಂಘದ ಉಡುಪಿ ತಾಲೂಕು ಸಮಿತಿ ಸಂಚಾಲಕ ಜಯರಾಜ ಹೆಗ್ಡೆ, ತಾಲೂಕು ಬಂಟರ ಸಂಘದ ಸಾಯಿರಾಧ ಮನೋಹರ್ ಶೆಟ್ಟಿ, ಮಾತೃ ಸಂಘದ ತಾಲೂಕು ಸಮಿತಿ ಸದಸ್ಯರಾದ ಬಾಲಕೃಷ್ಣ ಹೆಗ್ಡೆ, ಸುಭಾಷ್ ಬಲ್ಲಾಳ್, ಶ್ರೀನಾಥ್ ಹೆಗ್ಡೆ, ಸಾಯಿನಾಥ್ ಶೆಟ್ಟಿ, ಗೀತಾ ನಾಗೇಶ್ ಹೆಗ್ಡೆ, ವಿಶ್ವನಾಥ ರೈ ಹಿರಿಯಡ್ಕ, ಕುರ್ಕಾಲು ದಿನಕರ ಶೆಟ್ಟಿ,  ವಿವಿಧ ಗ್ರಾಮೀಣ ಬಂಟರ ಸಂಘದ ಅಧ್ಯಕ್ಷರಾದ ದೇವಿ ಪ್ರಸಾದ್ ಶೆಟ್ಟಿ ಪಡುಬಿದ್ರಿ, ಪುರುಷೊತ್ತಮ್ ಶೆಟ್ಟಿ ಉಡುಪಿ, ಸಕರಾಮ ಶೆಟ್ಟಿ ಅಲೆವೂರು, ವೀಣಾ ಶೆಟ್ಟಿ ಸಿನಿ ಶೆಟ್ಟಿ ಪೋಷಕರಾದ ಸದಾನಂದ ಶೆಟ್ಟಿ, ಹೇಮಾ ಶೆಟ್ಟಿ ಉಪಸ್ಥಿತರಿದ್ದರು.

ಈ ಸಂದರ್ಭ ಸಿನಿ ಶೆಟ್ಟಿಗೆ ಬೆಳ್ಳಿಯ ಕಿರೀಟ ನೀಡಿ ಅಭಿನಂದಿಸ ಲಾಯಿತು. ತಾಲೂಕು ಸಮಿತಿ ಸಹ ಸಂಚಾಲಕ ನಿತೀಶ್ ಕುಮಾರ್ ಶೆಟ್ಟಿ ವಂದಿಸಿದರು. ಇಂದಿರ ಸುಬ್ಬಯ್ಯ ಹೆಗ್ಡೆ ಪರಿಚಯಿಸಿದರು. ತಾಲೂಕು ಸಮಿತಿ ಸದಸ್ಯ ಹರೀಶ್ ಶೆಟ್ಟಿ ಚೇರ್ಕಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಇದಕ್ಕೂ ಮೊದಲು ಸಿನಿ ಶೆಟ್ಟಿಯನ್ನು ಮೆರವಣಿಗೆಯ ಮೂಲಕ ಜೋಡುಕಟ್ಟೆ ಯಿಂದ ಕರೆತರಲಾಯಿತು.

‘ತುಳು ಸಿನೆಮಾದಲ್ಲಿ ನಟಿಸಲು ಸಿದ್ಧ’

ಬಾಲಿವುಡ್ ಸಹಿತ ಯಾವುದೇ ಸಿನೆಮಾದಲ್ಲೂ ನಟಿಸುವಂತೆ ಸದ್ಯಕ್ಕೆ ಆಫರ್ ಬಂದಿಲ್ಲ. ತುಳು ಮಾತೃಭಾಷೆಯಾಗಿರುವುದರಿಂದ ತುಳು ಚಿತ್ರಗಳಲ್ಲಿ ಅವಕಾಶ ಸಿಕ್ಕಿದರೆ ನಟಿಸಲು ಸಿದ್ಧ ಇದ್ದೇನೆ ಎಂದು ಸಿನಿ ಶೆಟ್ಟಿ ಹೇಳಿದರು.

ಉಡುಪಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಹಿಂದೆ ಆನೇಕ ವೆಬ್ ಸಿರೀಸ್, ಟಿ.ವಿ. ಧಾರವಾಹಿಗಳಲ್ಲಿ ನಟಿಸಿದ್ದೇನೆ. ಇದರಿಂದ ಆತ್ಮವಿಶ್ವಾಸ ಹೆಚ್ಚಾಗಿದ್ದು, ಮಿಸ್ ಇಂಡಿಯಾ ಸ್ಪರ್ಧೆಯಲ್ಲಿ ಭಾಗವಹಿಸಲು ಸಾಧ್ಯವಾಗಿದೆ ಎಂದು ತಿಳಿಸಿದರು.

ಸಿನಿ ಶೆಟ್ಟಿಗೆ ಅಜ್ಜಿಯೇ ಪ್ರೇರೇಪಣೆ!

ತನ್ನ ಅಜ್ಜಿಯನ್ನು ಕಂಡು ಭಾವುಕರಾದ ಮಿಸ್ ಇಂಡಿಯಾ ಸಿನಿ ಶೆಟ್ಟಿ, ಅಜ್ಜಿಯನ್ನು ಬಿಗಿದಪ್ಪಿಕೊಂಡು ಸುದ್ದಿಗಾರರೊಂದಿಗೆ ಮಾತನಾಡಿದರು. ನನ್ನ ಬಾಲ್ಯದಿಂದಲೂ ಅಜ್ಜಿ ನನಗೆ ಬೆಂಬಲವಾಗಿದ್ದರು. ನಾನು ಎಲ್ಲೇ ಹೋದರು ಯಾವುದೇ ಉಡುಗೆ ತೊಟ್ಟರೂ ನನಗೆ ಬೆಂಬಲವಾಗಿದ್ದರು. ಅವರು ನನ್ನ ಜೊತೆ ಯಾವಾಗಲೂ ಇರುವುದಕ್ಕೆ ನಾನು ಹೆಮ್ಮೆ ಪಡುತ್ತೇನೆ. ನನ್ನ ಅಜ್ಜಿ ನನಗೆ ತುಂಬಾ ಪ್ರೇರೇಪಣೆ ನೀಡುತ್ತಿದ್ದರು ಎಂದರು.

ಮುಂದಿನ ಮಿಸ್ ವಲ್ಡ್ ಸ್ಪರ್ಧೆಯಲ್ಲಿ ಗೆಲುವು ಸಾಧಿಸುವ ಗುರಿಯೊಂದಿಗೆ ಕೆಲಸ ಮಾಡುತ್ತಿದ್ದೇನೆ. ಇದಕ್ಕೆ ಬೇಕಾದ ಪೂರ್ವ ತಯಾರಿ ನಡೆಸುತ್ತಿದ್ದೇನೆ. ಈಗಾಗಲೇ ಎರಡು ಮೂರು ಸಾಮಾಜಿಕ ಕಾರ್ಯಗಳಲ್ಲಿ ತೊಡಗಿಸಿಕೊಂಡಿದ್ದು, ಇನ್ನೂ ಹೆಚ್ಚಿನ ಸಮಾಜಸೇವೆ ಮಾಡುವ ಹಂಬಲವಿದೆ. ಅದರ ವಿವರಗಳನ್ನು ಮಿಸ್ ಇಂಡಿಯಾ ಪುಟದಲ್ಲಿ ಅಧಿಕೃತವಾಗಿ ಪ್ರಕಟಿಸುತ್ತೇನೆ ಎಂದರು.

ತಾಯಿ ಕಲಿತ ಮಿಲಾಗ್ರಿಸ್ ಕಾಲೇಜಿಗೆ ಭೇಟಿ

ಫೆಮಿನಾ ಮಿಸ್ ಇಂಡಿಯಾ ಸಿನಿ ಶೆಟ್ಟಿ ತಮ್ಮ ಹುಟ್ಟೂರಿಗೆ ಆಗಮಿಸಿದ ಸಂದರ್ಭದಲ್ಲಿ ತನ್ನ ತಾಯಿ ಹೇಮಾ ಶೆಟ್ಟಿ ಓದಿದ ಕಲ್ಯಾಣಪುರದ ಮಿಲಾಗ್ರಿಸ್ ಕಾಲೇಜಿಗೆ ಭೇಟಿ ನೀಡಿದರು.  

ಈ ಸಂದರ್ಭ ಸಿನಿ ಶೆಟ್ಟಿ ಅವರನ್ನು ಸನ್ಮಾನಿಸಲಾಯಿತು. ಅವರೊಂದಿಗೆ ಅವರ ತಂದೆ ಸದಾನಂದ ಶೆಟ್ಟಿ ಮತ್ತು ಮಿಸ್ ಇಂಡಿಯಾ ತಂಡದವರು ಮತ್ತು ಕಾಲೇಜಿನ ಪ್ರಾಂಶುಪಾಲ ಡಾ.ವಿನ್ಸೆಂಟ್ ಆಳ್ವ, ಭಾಷಾ ನಿಕಾಯದ ಡೀನ್ ಪ್ರೊ. ಸೋಫಿಯಾ ಡಯಾಸ್, ವಾಣಿಜ್ಯ ವಿಭಾಗದ ಡೀನ್ ಶಾಲೆಟ್, ಐಕ್ಯೂಎಸಿ ಸಂಚಾಲಕ ಡಾ.ಜಯರಾಮ್ ಶೆಟ್ಟಿಗಾರ್ ಉಪಸ್ಥಿತರಿದ್ದರು.  

share
ವಾರ್ತಾಭಾರತಿ
ವಾರ್ತಾಭಾರತಿ
Next Story
X