ಸೇನಾ ತರಬೇತಿಗೆ ಅರ್ಜಿ ಆಹ್ವಾನ
ಉಡುಪಿ, ಜು.೧೯: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿ ಯಿಂದ ಪ್ರಸಕ್ತ ಸಾಲಿನಲ್ಲಿ ಭಾರತೀಯ ಸೇನೆ ಹಾಗೂ ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-೧, ೨(ಎ), ೩(ಎ) ಹಾಗೂ ೩ (ಬಿ) ಗೆ ಸೇರಿದ ಅರ್ಹ ಅಭ್ಯರ್ಥಿಗಳಿಗೆ ಆಯ್ಕೆಯ ಪೂರ್ವಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡಲು ಇಲಾಖಾ ವೆಬ್‌ಸೈಟ್₹ಠಿಠಿ://ಚ್ಚಿಡಿ.ಚ್ಟ್ಞಠಿ.ಜಟ.ಜ್ಞಿ/|ನಲ್ಲಿ ಆನ್ ಲೈನ್ ಮೂಲಕ ಅರ್ಜಿಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಜು.೩೦ ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಧಿಕಾರಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಉಡುಪಿ ದೂರವಾಣಿ ಸಂಖ್ಯೆ : ೦೮೨೦-೨೫೭೪೮೮೧ ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.
Next Story





