ನಡೂರು ಶಾಲೆಗೆ ನುಗ್ಗಿ ಸಿಲಿಂಡರ್ ಕಳವು
ಬ್ರಹ್ಮಾವರ : ನಡೂರು ಪಟೇಲ್ ಶ್ರೀಅಂತಯ್ಯ ಶೆಟ್ಟಿ ಸ್ಮಾರಕ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಜು.18ರಂದು ರಾತ್ರಿ ವೇಳೆ ನುಗ್ಗಿದ ಕಳ್ಳರು ಗ್ಯಾಸ್ ಸಿಲಿಂಡರ್ ಕಳವು ಮಾಡಿರುವ ಬಗ್ಗೆ ವರದಿಯಾಗಿದೆ.
ಶಾಲೆಯಲ್ಲಿರುವ ಅಡುಗೆ ಮನೆಯ ಬೀಗ ಮುರಿದು ಒಳನುಗ್ಗಿದ ಕಳ್ಳರು, ೨೮೦೦ರೂ. ಮೌಲ್ಯದ ಗ್ಯಾಸ್ ಸಿಲಿಂಡರ್ ಕಳವು ಮಾಡಿಕೊಂಡು ಹೋಗಿದ್ದಾರೆ. ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Next Story





