ಅರ್ಜಿ ಆಹ್ವಾನ
ಮಂಗಳೂರು, ಜು.೧೯: ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯಿಂದ ಅ.೧ರಂದು ವಿಶ್ವ ಹಿರಿಯ ನಾಗರಿಕರ ದಿನವನ್ನು ರಾಜ್ಯ ಮಟ್ಟದಲ್ಲಿ ಆಚರಿಸುವ ಸಂದರ್ಭ ಶಿಕ್ಷಣ, ಸಾಹಿತ್ಯ, ಕಾನೂನು, ಕ್ರೀಡೆ ಮತ್ತು ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಗಣನೀಯ ಸೇವೆ ಸಲ್ಲಿಸಿದ ಹಿರಿಯ ನಾಗರಿಕರಿಗೆ ೬ ವೈಯಕ್ತಿಕ ಹಾಗೂ ೧ ಸಂಸ್ಥೆಗೆ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.
ನಗರದ ಜಿಪಂ ಕಟ್ಟಡದಲ್ಲಿರುವ ಜಿಲ್ಲಾ ವಿಕಲಚೇತನರ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಅರ್ಜಿ ಪಡೆದು ಆಗಸ್ಟ್ ೨೧ರೊಳಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ವೆಬ್‌ಸೈಟ್:www.dwdsc.karnataka.gov.in ನ್ನು ಸಂಪರ್ಕಿಸಬಹುದು ಎಂದು ಪ್ರಕಟನೆ ತಿಳಿಸಿದೆ.
Next Story





